ಕಳಂಕಿತ ಯಡಿಯೂರಪ್ಪರನ್ನುಮತ್ತೆ ಅಧಿಕಾರಕ್ಕೆ ತರುತ್ತೀರೇನು?
Team Udayavani, Feb 26, 2018, 2:48 PM IST
ವಿಜಯಪುರ: ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗಿ ಬಂದಿರುವ ರಾಜ್ಯದ ಏಕೈಕ ಸಿಎಂ ಎಂಬ ಕಳಂಕ ಹೊತ್ತಿರುವ ಬಿ.ಎಸ್. ಯಡಿಯೂರಪ್ಪ ಅವರನ್ನೇ ಬಿಜೆಪಿ ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಇಂಥವರನ್ನು ಮತ್ತೆ ಗೆಲ್ಲಿಸಿ ಅಧಿಕಾರಕ್ಕೆ ತರುತ್ತೀರೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಜಿಲ್ಲೆಯ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ಮುಳವಾಡ ಗ್ರಾಮದಲ್ಲಿ ಕಾಂಗ್ರೆಸ್‌ನ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗಿದ್ದ ಸಿಎಂ ಎಂಬ ಕಳಂಕ ಹೊತ್ತಿದ್ದು, ಅವರ ಮಂತ್ರಿ ಮಂಡಲದ ಕೆಲ ಸಚಿವರು, ಅವರ ಪಕ್ಷದ ಅನೇಕ ಶಾಸಕರು ಜೈಲಿನ ದರ್ಶನ ಪಡೆದಿದ್ದಾರೆ ಎಂದರು.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ರಾಜ್ಯದ ಜನರು ತಮಗೆ ಅಧಿಕಾರ ನೀಡಿದಾಗ ಮಾಡಿದ ಕೆಲಸಗಳೇನು ಎಂಬುದನ್ನು ಜನತೆ ಮುಂದೆ ಇಡಲೇ ಇಲ್ಲ ಎಂದು ಕುಟುಕಿದರು.
ಮೋದಿ ಅವರು ದಲಿತರ ಪರ ಎಂದು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ದಲಿತರ ಮನೆಗೆ ಹೋಗಿ ಹೋಟೆಲ್ ತಿಂಡಿ-ಸೇವಿಸಿದ್ದನ್ನೇ ಸಾಧನೆ ಎಂದು ಬಿಂಬಿಸಿಕೊಳ್ಳುವ ಮೂಲಕ ರಾಜ್ಯದ ಬಿಜೆಪಿ ನಾಯಕರು ದಲಿತರಿಗೆ ಅವಮಾನ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದಲಿತೋದ್ಧಾರಕ್ಕೆ ಹಲವು ಕಾರ್ಯಕ್ರಮ ರೂಪಿಸಿ, ಅಗತ್ಯ ಅನುದಾನ ನೀಡಿದೆ. ಜೊತೆಗೆ ಯೋಜನೆ ಜಾರಿಗೆ ಕಡ್ಡಾಯ ಕಾನೂನು ಜಾರಿಗೆ ತಂದು ದಲಿತರ ಪರ ಕಾಂಗ್ರೆಸ್ ಬದ್ಧತೆ ಪ್ರದರ್ಶಿಸಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಹಸಿವು ಮುಕ್ತ ಕರ್ನಾಟಕಕ್ಕಾಗಿ ಅನ್ನಭಾಗ್ಯ ಜಾರಿಗೆ ತಂದು, ಕಡು ಬಡವರಿಗೆ ಏಳು ಕೆ.ಜಿ. ಅಕ್ಕಿ ಉಚಿತವಾಗಿ ಹಂಚುತ್ತಿದ್ದೇವೆ. ನಮ್ಮ ಸಾಧನೆಯನ್ನು ಕೇಂದ್ರದ ನೆರವಿನ ಯೋಜನೆಯ ನಮ್ಮ ಅಕ್ಕಿ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ತಮ್ಮದೇ ಅಕ್ಕಿ ಎಂದಾದರೆ ತಮ್ಮ ಪಕ್ಷದ ಸರ್ಕಾರಗಳಿರುವ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಏಕೆ ಬಡವರಿಗೆ ಉಚಿತ ಅಕ್ಕಿ ಹಂಚುವ ಯೋಜನೆ ಅನುಷ್ಠಾನಕ್ಕೆ ತಂದಿಲ್ಲ. ದೇಶದಲ್ಲಿ ಆಹಾರ ಭಧ್ರತಾ ಕಾಯ್ದೆ ತಂದಿರುವುದು ಯುಪಿಎ ಸರ್ಕಾರದಲ್ಲಿ ಎಂಬುದನ್ನು ಇವರು ಮರೆತಿದ್ದಾರೆ ಎಂದು ತಿರುಗೇಟು ನೀಡಿದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅದರಲ್ಲೂ ಕೃಷ್ಣಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ನಮ್ಮ ಸರ್ಕಾರ ಕಳೆದ ಐದು ವರ್ಷದಲ್ಲಿ ಅಗತ್ಯ ಅನುದಾನ ನೀಡಿದೆ. ಇದರಿಂದ ವಿಜಯಪುರ ಜಿಲ್ಲೆ ಇದೀಗ ಸಮ್ರಗ ನೀರಾವರಿ ಅನುಷ್ಠಾನ ಭಾಗ್ಯ ಕಾಣುತ್ತಿದೆ. ಇದಷ್ಟೇ ಅಲ್ಲ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಪ್ರಣಾಳಿಕೆಯಲ್ಲಿನ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ. ಹೀಗಾಗಿ ಬರುವ ವಿಧಾನಸಭೆ ಚುನವಣೆಯಲ್ಲಿ ನಮ್ಮ ಕೆಲಸಕ್ಕೆ ಮತಗಳ ಮೂಲಕ ಕೂಲಿ ಕೊಡಿ. ಬಸವನಬಾಗೇವಾಡಿ ಕ್ಷೇತ್ರದಲ್ಲಿ ಶಿವಾನಂದ ಪಾಟೀಲರನ್ನು ಮತ್ತೂಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶಕ್ಕೆ ಚಾಲನೆ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ. ಹರಿಪ್ರಸಾದ, ಕೆ.ಸಿ. ವೇಣುಗೋಪಾಲ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ, ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಾ|ಎಂ.ಬಿ. ಪಾಟೀಲ, ಮಾಜಿ ಸಚಿವರಾದ ಕೆ.ಎಚ್.ಮುನಿಯಪ್ಪ, ರೆಹಮಾನ್ ಖಾನ್, ಸಿ.ಎಂ. ಇಬ್ರಾಹಿಂ, ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ, ಶಾಸಕರಾದ ಸಿ.ಎಸ್. ನಾಡಗೌಡ, ಯಶವಂತರಾಯಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ ಇತರರು ಉಪಸ್ಥಿತರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.