ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌; ರೈತರ ಸಂಭ್ರಮ

Team Udayavani, Nov 22, 2021, 12:59 PM IST

12farmer

ಆಲಮಟ್ಟಿ: ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮರಳಿ ಪಡೆದಿರುವುದು ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ನಿಂಗರಾಜ ಆಲೂರ ಹೇಳಿದರು.

ರವಿವಾರ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿ ಬಳಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಮಹಾದ್ವಾರದ ಮುಂದೆ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಕರಾಳ ಶಾಸನ ವಾಪಸ್‌ ಪಡೆದಿರುವದು ಸ್ವಾಗತಾರ್ಹವಾದರೂ ರೈತರ ಎಲ್ಲ ಬೇಡಿಕೆಗಳು ಈಡೇರಿಸಬೇಕು. ಹೋರಾಟದಲ್ಲಿ ಮೃತರಾದ ರೈತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ರೈತರಿಗೆ ಮಾರಕವಾಗುವ ಮೂರು ಕರಾಳ ಶಾಸನವನ್ನು ರಚಿಸಿ ಅವುಗಳ ಅನುಷ್ಠಾನಕ್ಕೆ ಸುಗ್ರೀವಾಜ್ಞೆ ಹೊರಡಿಸಿತ್ತು. ಇದರಿಂದ ಅನಿವಾರ್ಯವಾಗಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರವಾದರೂ ವಾಪಸ್‌ ಪಡೆದಿರುವುದು ಸ್ವಲ್ಪ ಸಮಾಧಾನದ ಸಂಗತಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೂತನ ಕಾಯ್ದೆಗಳನ್ನು ತರಬೇಕಾದರೆ ರೈತರ ಏಳ್ಗೆಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದರು.

ದೇಶದಲ್ಲಿರುವುದು ಪ್ರಜಾಪ್ರಭುತ್ವ ಸರ್ಕಾರದ ಆಡಳಿತವೋ ಅಥವಾ ಬ್ರಿಟಿಷರ ಆಡಳಿತವೋ ಎನ್ನುವಂತೆ ಕೇಂದ್ರ ಸರ್ಕಾರ ವರ್ತಿಸುತ್ತಿರುವುದು ಖಂಡನೀಯವಾಗಿದೆ. ಎಂಎಸ್‌ಪಿ ದರ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ. 26ರಂದು ಪ್ರತಿಭಟನೆ ನಡೆಸುವುದು ನಿಶ್ಚಿತ. ಪ್ರಧಾನ ಮಂತ್ರಿಯವರು ಘೋಷಣೆ ಮಾಡಿದಂತೆ ಅದನ್ನು ಈಗ ನಡೆಯಲಿರುವ ಅಧಿವೇಶನದಲ್ಲಿ ವಾಪಸ್‌ ಪಡೆಯಬೇಕು. ರೈತರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. ಮೃತರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕಾಧ್ಯಕ್ಷ ತಿರುಪತಿ ಬಂಡಿ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಪ್ಪ ಗಣಿ ಮಾತನಾಡಿ, ಉತ್ತರ ಭಾರತ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕರಾಳ ಶಾಸನಗಳನ್ನು ವಾಪಸ್‌ ಪಡೆಯಲಾಗಿದೆ. ರೈತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿಯಿದ್ದರೆ ಶಾಸನ ರಚಿಸಿದ ಕೆಲ ದಿನಗಳಲ್ಲಿಯೇ ರೈತರು ಉಗ್ರಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಶಾಸನ ವಾಪಸ್‌ ಪಡೆಯದೇ ಹೋರಾಟವನ್ನು ಅಧಿಕಾರ ಬಲದಿಂದ ಹತ್ತಿಕ್ಕಲು ಪ್ರಯತ್ನಿಸಲಾಯಿತು. ಇದಕ್ಕೆ ರೈತರು ಬಗ್ಗದೇ ಇರುವಾಗ ರೌಡಿಗಳಿಂದ ದಾಂಧಲೆ ನಡೆಸಿ ರೈತರ ಹತ್ಯೆಗೆ ಯತ್ನಿಸಲಾಯಿತು. ಇಷ್ಟೇ ಇಲ್ಲದೇ ರೈತ ಪರ ಸಂಘಟನೆಯ ವಿರುದ್ದವಾಗಿ ಅಪ ಪ್ರಚಾರ ನಡೆಸಲಾಯಿತು. ಇದು ಆಡಳಿತ ನಡೆಸುವ ಸರ್ಕಾರದ ಅವಿವೇಕಿತನ ಎಂದು ವಾಗ್ಧಾಳಿ ನಡೆಸಿದರು. ವೆಂಕಟೇಶ ವಡ್ಡರ, ಸಾಬಣ್ಣ ಅಂಗಡಿ, ಸುಭಾಷ್‌ ಚೋಪಡೆ, ಮಲ್ಲಯ್ಯ ಮಠಪತಿ, ಸಾಬಣ್ಣ ಮಾದರ, ಶಿವಶಂಕರ ಕವಲಗಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

16-kadaba

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-muddebihala

Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

7

CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ

ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.