ಕೌಟುಂಬಿಕ ಕಲಹ: ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ
Team Udayavani, Jan 29, 2023, 8:44 AM IST
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಜರುಗಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾ ಗೀತಾ ರಾಮು ಚೌವ್ಹಾಣ (32) ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಾಯಿ ಗೀತಾಳಿಂದ ಹತ್ಯೆಯಾದ ಮಕ್ಕಳನ್ನು ಸೃಷ್ಠಿ (6), ಸಮರ್ಥ (4), ಕಿಶನ್ (3) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:1962ರಲ್ಲೇ ಚೀನಾ ಭೂಮಿ ಕಬಳಿಸಿತ್ತು; ರಾಹುಲ್ ಗಾಂಧಿ ಆರೋಪಕ್ಕೆ ಜೈಶಂಕರ್ ತಿರುಗೇಟು
ಶನಿವಾರ ರಾತ್ರಿ ಪತಿ ರಾಮು ಜೊತೆ ಜಗಳವಾಡಿದ್ದ ಗೀತಾ, ಪತಿ ರಾಮು ಮಲಗಿದ್ದ ವೇಳೆ ಮೂವರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು, ಬಳಿಕ ಸಂಪ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಭಾನುವಾರ ಬೆಳಿಗ್ಗೆ ಏಳುತ್ತಲೇ ಪತಿ ರಾಮು ಮನೆಯಲ್ಲಿ ಮಕ್ಕಳು, ಪತ್ನಿ ಕಾಣದಾದಾಗ ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ತಿಕೋಟಾ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.