Indi ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷದ ದೂರು: ತನಿಖೆಗೆ ತಂಡ
Team Udayavani, Nov 2, 2023, 11:48 PM IST
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನ.1 ರಂದು ಸಂಭವಿಸಿರುವ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿ.ಪಂ. ಸಿಇಒ ರಾಹುಲ್ ಶಿಂಧೆ, ಸದರಿ ತನಿಖಾ ತಂಡ ಇಡೀ ಪ್ರಕರಣದ ಸಮಗ್ರ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಇಂಡಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿದ್ದ 35 ವರ್ಷದ ಬಿಸ್ಮಿಲ್ಲಾ ಸೈಪನಸಾಬ ನದಾಫ್ ಎಂಬ ಮಹಿಳೆ ಸಾವಿಗೀಡಾಗಿದ್ದಳು.
ಸದರಿ ಮಹಿಳೆಯ ಸಾವಿನ ಕುರಿತು ವೈದ್ಯರ ನಿರ್ಲಕ್ಷ್ಯದ ದೂರು ಕೇಳಿ ಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ತಂಡದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ, ನೆಪ್ರೋಲಾಜಿಸ್ಟ್ ಫಿಜಿಶಿಯನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿಗಳು ಇರಲಿದ್ದಾರೆ. ಈ ತಂಡ ಇಡೀ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.