ಸಂಘಟನೆಗೆ ಶಕ್ತಿ ತುಂಬುವ ಕಾರ್ಯ ಮಾಡಿ: ಕಾಶಪ್ಪನವರ
Team Udayavani, Feb 24, 2022, 5:52 PM IST
ಇಳಕಲ್ಲ: ಅಸಂಘಟಿತ ಕಾರ್ಮಿಕರೆಲ್ಲರನ್ನು ಸೇರಿಸಿ ಸಂಘಟನೆ ಮೂಲಕ ಶಕ್ತಿಯನ್ನು ತುಂಬುವಂತ ಕಾರ್ಯ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದ ಶ್ರೀ ವಿಜಯಮಹಾಂತೇಶ ದಾಸೋಹ ಭವನದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಇಳಕಲ್ಲ ತಾಲೂಕು ಘಟಕ ಅಡಿಯಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರ ದಿನಾಚರಣೆ, ಕಡುಬಡವ ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಬಂಡಿ ವಿತರಣಾ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ, ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಇಳಕಲ್ಲ ನಗರಸಭೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್ ವ್ಯವಹಾರ ಹಾಗೂ ಎಫ್‌ಎಸ್‌ಎಸ್‌ಎಐ ಕುರಿತು ತರಬೇತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ಇಳಕಲ್ಲ-ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಶ್ರೀ ಮಾತನಾಡಿ, ಸಂಘಟಿತರಾಗಿ ಸರಕಾರದ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.
ಎನ್‌ಎಎಸ್‌ವಿಐ ರಾಷ್ಟ್ರೀಯ ಅಧ್ಯಕ್ಷ ಅರಬಿಂದ್ ಸಿಂಗಜಿ ಹಾಗೂ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ| ಸಿ.ಇ. ರಂಗಸ್ವಾಮಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು. ಹಾಗೂ ನಗರದ ಕಡುಬಡವ ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಬಂಡಿಗಳನ್ನು ವಿತರಿಸಲಾಯಿತು. ಇದಕ್ಕೂ ಪೂರ್ವದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರ ದಿನಾಚರಣೆ ಅಂಗವಾಗಿ ನಗರದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವರ ಶಿರಹಟ್ಟಿ, ಇಳಕಲ್ಲ ತಾಲೂಕು ಅಧ್ಯಕ್ಷ ಪವಾಡೆಪ್ಪ ಚಲವಾದಿ, ನಗರಸಭೆ ಅಧ್ಯಕ್ಷ ಮಂಜುನಾಥ ಶೆಟ್ಟರ, ನಗರಸಭೆ ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.