ದೇವೇಗೌಡರೊಂದಿಗೆ ಸೇರಿ ಕೆಲಸ ಮಾಡಿದ್ದೇವೆ, ಜೆಡಿಎಸ್ ಮೈತ್ರಿಗೆ ತಕರರಾರಿಲ್ಲ: ಜಿಗಜಿಣಗಿ
Team Udayavani, Sep 9, 2023, 4:34 PM IST
ವಿಜಯಪುರ: ಲೋಕಸಭೆ ಚುನಾವಣೆ ಪೂರ್ವ ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿಯಾದರೆ ಆಗಲಿ. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ನಾನು ಕೆಲಸ ಮಾಡಿದ್ದು, ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಷಯದಲ್ಲಿ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದರು.
ಈ ಹಿಂದೆ ದೇವೇಗೌಡ ಜೊತೆ ನಾವೂ ಇದ್ದೆವು, ನಮ್ಮೊಂದಿಗೆ ದೇವೇಗೌಡರೂ ಇದ್ದರು. ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದರು.
ಇದನ್ನೂ ಓದಿ:Ramanagar; ಯೋಗೇಶ್ವರ್ ನಾಲಗೆ ಬಿಗಿ ಹಿಡಿದುಕೊಳ್ಳಲಿ: ಏಕವಚನದಲ್ಲಿ ಡಿ ಕೆ ಸುರೇಶ್ ವಾಗ್ದಾಳಿ
ಮೈತ್ರಿಯಾದರೆ ಪಕ್ಷಕ್ಕೆ ಒಳ್ಳೆಯದು. ನಮಗೆ ಅವರಾಗಿಯೇ ಬಂದು ಬೆಂಬಲ ನೀಡುತ್ತಿದ್ದಾರೆ. ನಾವು ಬನ್ನಿ ಎನ್ನುತ್ತಿದ್ದೇವೆ. ನೀವೂ ಬನ್ನಿ, ಬೇಡ ಎನ್ನುವವರು ಯಾರು ಎಂದು ಪ್ರಶ್ನಿಸಿದರು.
ಸನಾತನ ಹಿಂದೂ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವಮಾನಕಾರಿ ಹೇಳಿಕೆ ಸರಿಯಲ್ಲ. ಸಣ್ಣ ಸಣ್ಣ ಹುಡುಗರೆಲ್ಲ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ನಿನ್ನೆ ಮಂತ್ರಿಯಾಗಿದವರೆಲ್ಲ ಮಾತನಾಡುತ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಕಾಲದಿಂದಲೂ ನಾನು ನೋಡಿದ್ದೇನೆ. ಧರ್ಮದ ವಿಷಯದಲ್ಲಿ ಯಾರು ಕೈ ಹಾಕುತ್ತಾರುವ ಅವರು ಉಳಿದಿಲ್ಲ ಎಂದು ದಯಾನಿಧಿ ಹೇಳಿಕೆ ಸತ್ಯವಲ್ಲ ಎಂದರು.
ದೇಶದಲ್ಲಿ ಧರ್ಮದ ಬಗ್ಗೆ ಮಾತನಾಡಿದ ಯಾರೂ ಉಳಿಯಲ್ಲ. ಅವರು ಯಾವ ಪಕ್ಷಕ್ಕೆ ಅಂಟಿಕೊಂಡಿದ್ದಾರೆ. ಆ ಪಕ್ಷವೂ ಉಳಿಯಲ್ಲ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.