ಕೇಂದ್ರದ ವಿರುದ್ಧ ಕಾರ್ಮಿಕರ ಆಕ್ರೋಶ
Team Udayavani, Nov 27, 2020, 5:36 PM IST
ವಿಜಯಪುರ: ಕೇಂದ್ರ ಸರ್ಕಾರ ರೈತ-ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿ ಕಾರ್ಮಿಕರ ವಿವಿಧ ಸಂಘಟನೆಗಳನೇತೃತ್ವದಲ್ಲಿ ಗುರುವಾರ ನಗರದಲ್ಲಿ ಬೃಹತ್‌ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಮುಷ್ಕರ ನಡೆಸಲಾಯಿತು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದವು. ಮೆರವಣಿಗೆಯಲ್ಲಿ ಕೇಂದ್ರ ಸರಕಾರದ ಕಾರ್ಮಿಕ, ರೈತ, ಜನ ವಿರೋಧಿ ನೀತಿಗಳ ವಿರುದ್ಧ ಧಿಕ್ಕಾರ ಕೂಗಿ, ಕಾರ್ಮಿಕ ಕಾನೂನು ತಿದ್ದುಪಡಿ ನಿಲ್ಲಿಸಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಾಪಸ್ ಪಡೆಯಿರಿ ಎಂದು ಆಗ್ರಹ ಮಾಡಲಾಯಿತು.
ಈ ವೇಳೆ ಮಾತನಾಡಿದ ಕಾರ್ಮಿಕ ಸಂಘಟನೆಗಳ ಮುಖಂಡರು, ಕೋವಿಡ್-19 ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ,ಪರಿಸ್ಥಿತಿಯ ದುರುಪಯೋಗ ಮಾಡಿಕೊಳ್ಳಲುಮುಂದಾಗಿದೆ. ಇದಕ್ಕಾಗಿ ದೇಶದ ರೈತರು, ಕಾರ್ಮಿಕರು, ನೌಕರರು ಹಾಗೂ ಸಾರ್ವಜನಿಕ ಹಿತಕ್ಕೆ ಧಕ್ಕೆ ಆಗುವಂಥ ನಿರ್ಧಾರಗಳ ಮೂಲಕ ವಿವಿಧ ಕಾನೂನುಗಳಿಗೆ ತಿದ್ದುಪಡಿ ತಂದಿದೆ. ಇದರಿಂದ ದೇಶದ ಜನರ ಹಕ್ಕುಗಳ ದಮನ ಮಾಡುವ ಕೆಲಸ ನಡೆಸಿದೆ ಎಂದು ಹರಿಹಾಯ್ದರು.
ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಬಂಡವಾಳಿಗರ ಪರ ನಿರ್ಧಾರಕ್ಕೆ ಮುಂದಾಗಿ, ದೇಶದ ಸಂಪತ್ತನ್ನು ಮಾರಾಟಕ್ಕಿಟ್ಟಿದೆ. ಇದರಿಂದ ಭವಿಷ್ಯದಲ್ಲಿ ದೇಶದ ಕಾರ್ಮಿಕರ ಬದುಕು ದುರ್ಬರಗೊಳ್ಳಲಿದೆ. ದೇಶ ಕಟ್ಟುವ ಕೆಲಸ ಮಾಡುವ ಕಾರ್ಮಿಕರನ್ನು ಬೀದಿಪಾಲು ಮಾಡುವ ಹುನ್ನಾರ ನಡೆಸಿದೆ. ಸಂಪತ್ತು ಸೃಷ್ಟಿಯಲ್ಲಿ ಭಾರತದ ಕಾರ್ಮಿಕರು ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಕಾರ್ಮಿಕ ವಿರೋಧಿ ನಡೆಯಿಂದ ಹಿಂದೆ ಸರಿದು, ದೇಶದ ಹಿತದೃಷ್ಟಿಯಿಂದ ಕಾರ್ಮಿಕ ಪರ ನೀತಿಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ದೇಶದ ಬಡಜನತೆಯ ಸಾರಿಗೆ ವ್ಯವಸ್ಥೆಯಾದ ರೈಲ್ವೆ, ಬ್ಯಾಂಕ್ ವಿಮೆಯಂತಹ ಸಾರ್ವಜನಿಕ ಸೇವೆಗಳನ್ನು ಖಾಸಗೀಕರಣ ಮಾಡಿ ಉದ್ಯೋಗ ಕಸಿಯವ ಕೆಲಸ ನಡೆಯುತ್ತಿದೆ. ಇಂಥ ಕರಾಳ ನೀತಿಗಳ ವಿರುದ್ಧ ಹೋರಾಟ ನಡೆಸುವ ಕಾರ್ಮಿಕರ ಪ್ರತಿಭಟನಾ ಹಕ್ಕನ್ನು ದಮನ ಮಾಡಲಾಗಿದೆ. ತಮ್ಮ ದುರಾಡಳಿತ ಮುಚ್ಚಿಕೊಳ್ಳಲು ದೇಶದ ಆಸ್ತಿ ಮಾರಾಟಕ್ಕೆ ಮುಂದಾಗಿದ್ದಲ್ಲದೇ ಭಾರತವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ. ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅಗತ್ಯಶುಲ್ಕ ವಿ ಧಿಸುವ ಮೂಲಕ ಹಣ ಮಾಡುವ ಕೆಲಸದಲ್ಲಿ ತೊಡಗಿದ್ದಲ್ಲದೇ ದೇಶದ ಜನರ ಮೇಲೆ ಆರ್ಥಿಕ ಹೊರೆ ಹೇರಲು ಮುಂದಾಗಿದೆ.
ಕೃಷಿ ಕ್ಷೇತ್ರದ ಕಾರ್ಪೊರೇಟೀಕರಣಕ್ಕೆ ಮುಕ್ತ ಅವಕಾಶ ನೀಡುತ್ತವೆ. ಕೃಷಿ ಉತ್ಪನ್ನಗಳಿಗೆ ಯಾವುದೇ ಕನಿಷ್ಠ ಬೆಂಬಲ ಬೆಲೆಯ ಖಚಿತತೆ ನೀಡದೇ ಅಗತ್ಯ ವಸ್ತುಗಳ ಕಾಯ್ದೆ ಸಹ ಮಂಡಿಸಲಾಗಿದೆ. ಮತ್ತೂಂದೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಸಾರ್ವಜನಿಕರೂ ಪರದಾಡುವಂತೆ ಮಾಡಿದೆ ಎಂದು ವಾಗ್ಧಾಳಿ ನಡೆಸಿದರು. ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಭೀಮಶಿ ಕಲಾದಗಿ, ಗ್ರಾಮೀಣ ಬ್ಯಾಂಕ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಜಿ.ಜಿ. ಗಾಂಧಿ , ಸಿಐಟಿಯು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಹಂದ್ರಾಳ, ಆರ್.ಕೆ.ಎಸ್. ಜಿಲ್ಲಾ ಸಂಚಾಲಕ ಬಾಳುಜೇವೂರ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಅಂಗನವಾಡಿ ನೌಕರರ ಜಿಲ್ಲಾಧ್ಯಕ್ಷೆ ಸುನಂದಾ ನಾಯಕ, ಆಶಾ ಸಂಘಟನೆಯ ಜಯಶ್ರೀ ಕಂಬಾರ, ಬಿಸಿಯೂಟ ಸಂಘಟನೆಯಿಂದ ಸುಮಂಗಲಾ ಆನಂದಶೆಟ್ಟಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಚಂದ್ರಶೇಖರ ಗಂಟೆಪ್ಪಗೋಳ. ಎಸ್.ಆರ್. ನಾಯಕ, ಭಾರತಿ ದೇವಕತೆ, ಅಂಬಿಕಾ ಒಳಸಂಗ, ಲೈಲಾ ಪಠಾಣ, ಸುರೇಖಾ ರಜಪೂತ, ಈರಣ್ಣ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.