ನಿರುದ್ಯೋಗ ನಿವಾರಣೆಗೆ ಉದ್ಯೋಗಮೇಳ ಸಹಕಾರಿ
Team Udayavani, Jul 26, 2017, 11:42 AM IST
ವಿಜಯಪುರ: ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಯುವ ಸಮೂಹಕ್ಕೆ ಉದ್ಯೋಗಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಹೇಳಿದರು.
ನಗರದ ಡಾ| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯೋಗ ಕೌಶಲ್ಯ ತರಬೇತಿ ಪಡೆದವರಿಗೆ ಉದ್ಯೋಗ ನೀಡುವ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಖಾಸಗಿ ಹಾಗೂ ಸ್ವಂತ ಉದ್ಯೋಗ ಕ್ಷೇತ್ರದಲ್ಲಿ ಪ್ರತಿಭಾವಂತರಿಗೆ ಉದ್ಯೋಗದ ಸಾಕಷ್ಟು ಅವಕಾಶಗಳಿವೆ. ಇಂಥ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು
ಎಂದು ಸಲಹೆ ನೀಡಿಡಿದರು. ಆದರೆ ತಮ್ಮ ಇಚ್ಛಾಶಕ್ತಿ ಹಾಗೂ ಪ್ರಮಾಣಿಕ ಪ್ರಯತ್ನ ಹೊಂದಬೇಕು. ಇಂತಹ ಉದ್ಯೋಗ ಬೇಕೆನ್ನುವ ಮನೋಭಾವ ಬಿಟ್ಟು ಅವಕಾಶ ಸಿಕ್ಕ ಕಡೆ ಹೋಗಿ ನಿಮ್ಮ ಪ್ರತಿಭೆ ಹಾಗೂ ಕೆಲಸ ಮಾಡುವ ಸಾಮರ್ಥ್ಯ ತೋರಿಸಿ. ಕೆಲಸದಲ್ಲಿ ಭೇದಭಾವ ಬೇಡ. ಮಾಡುವಂತ ಕೆಲಸ ಗೌರವಿಸಿ ಅನುಭವದೊಂದಿಗೆ ಪ್ರಗತಿ ಸಾಧಿಸಬೇಕು ಎಂದರು. ಜಾವೀದ್ ಜಮಾದಾರ ಮಾತನಾಡಿದರು.
ಐಎಎಸ್ ಅಧಿಕಾರಿ ಮಹ್ಮದ್ ಇಕ್ರಾವುಲ್ಲಾ ಶರೀಫ ಇದ್ದರು. ಉದ್ಯೋಗ ಮೇಳದಲ್ಲಿ ವಿಜಯಪುರದ 7, ಬೆಂಗಳೂರದ 10 ಕಂಪನಿಗಳ 140 ಯುವಕರಿಗೆ ಅವರ ಅರ್ಹತೆ ಆಧಾರದ ಮೇಲೆ ಉದ್ಯೋಗ ಆದೇಶ ಪ್ರತಿ ನೀಡಿದರು. ಅರುಣ ರೆಡ್ಡಿ ಸ್ವಾಗತಿಸಿದರು. ಎಸ್.ಜಿ.ಲೋಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.