ಯತ್ನಾಳ ಬಿಜೆಪಿ ಸೇರ್ಪಡೆಗೆ ಆಗ್ರಹಿಸಿ ಪಾದಯಾತ್ರೆ
Team Udayavani, Mar 5, 2018, 1:00 PM IST
ಮುದ್ದೇಬಿಹಾಳ: ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆದಷ್ಟು ಬೇಗ ಬಿಜೆಪಿಗೆ ಸೇರಿಸಿಕೊಳ್ಳಬೇಕು ಮತ್ತು ಅವರನ್ನು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು
ಎಂದು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರನ್ನು ಒತ್ತಾಯಿಸಲು ಮಾ. 6ರಂದು ಮುದ್ದೇಬಿಹಾಳದಿಂದ ವಿಜಯಪುರದವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಯತ್ನಾಳ ಅಭಿಮಾನಿ ಬಳಗದ ಮುಖಂಡರು ತಿಳಿಸಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖಂಡರಾದ ಉದಯ ರಾಯಚೂರ, ರಾಜಶೇಖರ ಹೊಳಿ ಮತ್ತಿತರರು, ಅಂದು ಬೆಳಗ್ಗೆ ಇಲ್ಲಿನ ಗ್ರಾಮದೇವತೆ ಕಟ್ಟೆ ಮೇಲಿರುವ ದುರ್ಗಾದೇವಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಬಸರಕೋಡ, ಬಸವನಬಾಗೇವಾಡಿ, ಮನಗೂಳಿ ಮಾರ್ಗವಾಗಿ ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ತಲುಪಿದ ಮೇಲೆ ಅಲ್ಲಿ ಯತ್ನಾಳರ ಬಿಜೆಪಿ ಸೇರ್ಪಡೆ, ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧೆ ಸಂಬಂಧ ಬಿಜೆಪಿ ಜಿಲ್ಲಾದ್ಯಕ್ಷರ ಮೂಲಕ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಪಾದಯಾತ್ರೆಯಲ್ಲಿ 80-100 ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಗ್ರಾಮಾಂತರ ಪ್ರದೇಶಗಳಿಂದ ಯತ್ನಾಳರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಳ್ಳುತ್ತಾರೆ. ಈ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲೇಬೇಕಾಗಿದೆ. ಇದಕ್ಕಾಗಿ ಯತ್ನಾಳ ಅವರೇ ಸೂಕ್ತ ಅಭ್ಯರ್ಥಿ ಆಗಿದ್ದಾರೆ. ನಾವು ಯತ್ನಾಳರ ಅಭಿಮಾನಿಗಳು. ಆದರೆ ಯಾರ ಹಿಂಬಾಲಕರೂ ಅಲ್ಲ. ಅಭಿಮಾನವೇ ಬೇರೆ,
ಹಿಂಬಾಲಿಸುವಿಕೆಯೇ ಬೇರೆ ಎಂದು ಅವರು ತಿಳಿಸಿದರು.
ಸ್ಥಳೀಯ ನಾಯಕರಲ್ಲಿ ಗೊಂದಲ ಮೂಡಬಾರದು. ಆರ್.ಎಸ್. ಪಾಟೀಲರ ಹಿಂಬಾಲಕರು, ಎಂ.ಎಸ್. ಪಾಟೀಲರ ಹಿಂಬಾಲಕರು ಎನ್ನುವ ಕಪ್ಪುಚುಕ್ಕೆ ನಮಗ್ಯಾರಿಗೂ ಬರಬಾರದು ಎಂದು ತೀರ್ಮಾನಿಸಿ ಮುದ್ದೇಬಿಹಾಳ ಮತಕ್ಷೇತ್ರದ ಗೆಲುವಿನ ಹಿಂಬಾಲಕರೆನ್ನಿಸಿಕೊಳ್ಳುವ ಉದ್ದೇಶದಿಂದ ಗೆಲ್ಲುವ ವ್ಯಕ್ತಿ ಯತ್ನಾಳರೇ ಇಲ್ಲಿ ಸ್ಪ ರ್ಧಿಸಬೇಕು ಎನ್ನುವ ಅಪೇಕ್ಷೆ ನಮ್ಮೆಲ್ಲರದ್ದಾಗಿದೆ
ಎಂದು ಸ್ಪಷ್ಟಪಡಿಸಿದರು.
ರಾಘವೇಂದ್ರ ಪತ್ತಾರ, ಕೇಶವ ಪತ್ತಾರ, ಮಹಾಂತೇಶ ಹಡಪದ, ದೀಪಕ ರಾಯಚೂರ, ಶಿವಪ್ರಸಾದ ಬಳ್ಳೊಳ್ಳಿ, ವಿಠ್ಠಲ ಪತ್ತಾರ, ಹೊನ್ನೇಶ ಕೋಲಕಾರ, ಈರಣ್ಣ ಕೋಲಕಾರ, ಪ್ರಶಾಂತ ಸಜ್ಜನ, ಸಚಿನ ಸಾಳುಂಕೆ, ಉದಯ ನಲವಡೆ, ಶರಣಪ್ಪ ಯರಝರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.