ಸಿದ್ಧಸಿರಿ ಸಹಕಾರಿಯಿಂದ ರೈತರಿಗೆ ಸೌಲಭ್ಯ : ಶಾಸಕ ಯತ್ನಾಳ್

Team Udayavani, Mar 30, 2021, 8:42 PM IST

ಕಜಹಗ್ದ

ವಿಜಯಪುರ: ನಗರದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಲಂಡನ್‌ ಹಾಗೂ ಟರ್ಕಿ ದೇಶಗಳಿಂದ ಅತ್ಯಂತ ಸುಧಾರಿತ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಸಿದ್ಧಸಿರಿ ಶೀತಲ ಘಟಕ ಸ್ಥಾಪಿಸಲಾಗಿದೆ. ದೇಶದಲ್ಲೇ ಈ ನೂತನ ತಂತ್ರಜ್ಞಾನ ಹೊಂದಿದ ಪ್ರಥಮ ಸೌಲಭ್ಯ ಇಲ್ಲಿ ದೊರೆಯಲಿದೆ ಎಂದು ಶಾಸಕರೂ ಆಗಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸೋಮವಾರ ಐನಾಪುರ ಗ್ರಾಮದಲ್ಲಿ ನಡೆದ ಪೂಜಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅತಿ ಶೀಘ್ರವೇ ಸಿದ್ದೇಶ್ವರ ಶ್ರೀಗಳಿಂದ ಈ ಘಟಕ ಲೋಕಾರ್ಪಣೆಗೊಂಡು ದ್ರಾಕ್ಷಿ ಬೆಳೆಗಾರರ ಸೇವೆಗೆ ಲಭ್ಯವಾಗಲಿದೆ. ದ್ರಾಕಿ ಬೆಳೆಗಾರರಿಗಾಗಿ ಇಂತಹ ಸುಧಾರಿತ ತಂತ್ರಜ್ಞಾನದಲ್ಲಿ ಈ ಸೇವೆ ನೀಡುವ ಭಾರತದ ಪ್ರಪ್ರಥಮ ಅತ್ಯಾಧುನಿಕ ಘಟಕವಾಗಲಿದೆ ಎಂದರು.

ಸದರಿ ಯಂತ್ರ ಸಂಪೂರ್ಣ ಸ್ವಯಂ ಚಾಲಿತವಾಗಿದೆ. ಒಣದ್ರಾಕ್ಷಿಯನ್ನು ಗುಣಮಟ್ಟಕ್ಕೆ ತಕ್ಕಂತೆ ವಿಂಗಡಿಸಿ, ಸ್ವತ್ಛಗೊಳಿಸಿ ಸ್ವಯಂ ತೂಕ ಮಾಡುತ್ತದೆ. ಪ್ಯಾಕಿಂಗ್‌ ಮಾಡಿ ಬಾರ್‌ಕೋಡ್‌ ನಮೂದಿಸುವ ವ್ಯವಸ್ಥೆ ಇದೆ. ಇದರಿಂದ ರೈತರಿಗೆ ಕಡಿಮೆ ಅವ ಧಿ, ವೆಚ್ಚದಲ್ಲಿ ಉತ್ಕೃಷ್ಟ ಸೇವೆ ಸಿಗಲಿದೆ. ನೆಟ್ಟಿಂಗ್‌, ಶಾರ್ಟಿಂಗ್‌ ಮತ್ತು ಗ್ರೈಂಡಿಂಗ್‌ ಪ್ರತಿ ಕೆ.ಜಿ.ಗೆ ಕೇವಲ 5 ರೂ. ವಾಶಿಂಗ್‌ 2 ರೂ. ದರ ನಿಗದಿ ಮಾಡಲಾಗಿದೆ ಎಂದರು. ರೈತರು ಇಡಲಾದ ಪ್ರತಿ ಟನ್‌ ಒಣದ್ರಾಕ್ಷಿ 1 ತಿಂಗಳಿಗೆ 550 ರೂ. ಬಾಡಿಗೆ ನಿಗದಿಪಡಿಸಿದೆ. ಶೀತಲ ಘಟಕದಲ್ಲಿ ದಾಸ್ತಾನಿಗೆ ತಕ್ಕಂತೆ ರೈತರಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಮೂಲಕ ಅಡಮಾನ ಸಾಲ ನೀಡಲಾಗುತ್ತದೆ.

ಗುಣಮಟ್ಟದ ಪ್ರತಿ ಕೆ.ಜಿ.ಗೆ 100 ರೂ. ಮಾರುಕಟ್ಟೆ ಬೆಲೆಯಿಂದ ನಿಗದಿ ಮಾಡಿದ್ದು, ಶೇ. 50 ಸಾಲ ನೀಡಲಾಗುತ್ತದೆ. ರೈತರ ಬೆಳೆ ರಕ್ಷಣೆಗಾಗಿ ಉತ್ತಮ ಗುಣಮಟ್ಟದ ಕೀಟನಾಶಕ, ರಸಗೊಬ್ಬರ ಮಾರಾಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು. ಸಿದ್ಧಸಿರಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂ.ಗು. ಸಜ್ಜನ, ಜಗದೀಶ ಕ್ಷತ್ರಿ, ರಾಮನಗೌಡ ಪಾಟೀಲ ಯತ್ನಾಳ, ಶೈಲಜಾ ಪಾಟೀಲ ಯತ್ನಾಳ, ಸೀಮಾ ಕೋರೆ, ಶಿವಾನಂದ ಅಣ್ಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕ ಜ್ಯೋತಿಬಾ ಖಂಡಾಗಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ್‌ ಅಣ್ಣಿಗೇರಿ ಇದ್ದರು.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.