ಬಬಲೇಶ್ವರ ಕ್ಷೇತ್ರದಿಂದ ಬಸನಗೌಡ ಯತ್ನಾಳ ಸ್ಪರ್ಧಿಸಲು ಆಗ್ರಹ


Team Udayavani, Apr 4, 2023, 3:01 PM IST

Yatnal should contest from Babaleshwar Constituency: demand

ವಿಜಯಪುರ: ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುವ ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ನಾಲ್ಕು ಅವಧಿಯಲ್ಲಿ ಬಿಜೆಪಿ ಗೆಲ್ಲಲಾಗದ ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ರವೀಂದ್ರ ಬಗಲಿ, ರಾಜು ಬಿರಾದಾರ, ವಿಜಯಪುರ ನಗರ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ ಅವರು ಕಳೆದ ಬಾರಿ ಯತ್ನಾಳ ಅವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಈ ಬಾರಿ ಪಟ್ಟಣಶಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಹಾಲಿ ಶಾಸಕರಾದ ಬಸನಗೌಡ ಪಾಟೀಲ ಅವರು ತಮ್ಮನ್ನು ತಾವು ಪ್ರಭಾವಿ ನಾಯಕರೆಂದು, ಹಿಂದು ಹುಲಿ ಎಂದು ಬಣ್ಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕಳೆದ 4 ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಗಿಲ್ಲದ ಬಬಲೇಶ್ವರ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ, ಬಸನಗೌಡ ಅವರ ಹುಟ್ಟೂರು ಯತ್ನಾಳ ಕೂಡ ಬಬಲೇಶ್ವರ ಕ್ಷೇತ್ರದಲ್ಲಿರುವ ಕಾರಣ ಅವರ ಗೆಲುವು ಸುಲಭವಾಗಲಿದೆ ಎಂದು ಆಗ್ರಹಿಸಿದರು.

ಬಬಲೇಶ್ವರ ಕ್ಷೇತ್ರಕ್ಕೆ ಯತ್ನಾಳ ಅವರಿಗೆ ಟಿಕೆಟ್ ನೀಡಿದರೆ ಗೆಲ್ಲಿಸಲು ನಾವೂ ಪರಿಶ್ರಮ ಪಡುತ್ತೇವೆ. ಯತ್ನಾಳ ಅವರು ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಸಹಕಾರಿ ಆಗಲಿದೆ ಎಂದರು.

ಎಲ್ಲ ಜಾತಿ, ಸಮುದಾಯಗಳೊಂದಿಗೆ ಆತ್ಮೀತೆಯಿಂದ ವರ್ತಿಸುವ ಅಪ್ಪು ಪಟ್ಟನಶಟ್ಟಿ ಅವರು ಕಳೆದ ಅವಧಿಯಲ್ಲಿ ಟಿಕೆಟ್ ತಪ್ಪಿದರೂ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಚಕಾರ ಎತ್ತದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ ಯತ್ನಾಳ ಅವರು ತಮಗೆ ಟಿಕೆಟ್ ಕೈತಪ್ಪಿದಾಗ ಪಕ್ಷದ ವರಿಷ್ಠರ ವಿರುದ್ಧವೇ ಹಗುರವಾಗಿ ಮಾತನಾಡುವ ಪ್ರವೃತ್ತಿ ಹಾಗೂ ಪಕ್ಷ ವಿರೋಧಿ ಚಟುವಟಿಕೆಯಿಂದ ಎರಡು ಬಾರಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾರೆ ಎಂದು ದೂರಿದರು.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷನಿಷ್ಟ ಕಾರ್ಯಕರ್ತರನ್ನು ಕಡೆಗಣಿಸಿದ್ದಲ್ಲದೇ, ಬಂಡಾಯವೆದ್ದು ಸ್ಪರ್ಧಿಸಿದ ಪಕ್ಷದ ಅತೃಪ್ತ ಸ್ಪರ್ಧಿಗಳನ್ನು ಕರೆಸಿ ಮಾತನಾಡುವ ಸೌಜನ್ಯ ತೋರಿಲ್ಲ. ಪಕ್ಷದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ನಮ್ಮ ವಿರುದ್ಧ ಜಿಲ್ಲಾಧ್ಯಕ್ಷರನ್ನು ಬಳಸಿಕೊಂಡು ನಮ್ಮನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಸೇಡಿನ ರಾಜಕೀಯ ಮಾಡಿದರು ಎಂದು ಹರಿಹಾಯ್ದರು.

ಯತ್ನಾಳ ಅವರಿಗೆ ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ಪಕ್ಷದ ಮೂಲ ಕಾರ್ಯಕರ್ತರು ನಿರ್ಲಕ್ಷಕ್ಕೆ ಗುರಿಯಾಗಲಿದ್ದಾರೆ. ಪಕ್ಷದ ಕಾರ್ಯಕರ್ತರ ಪರಿಶ್ರಮದ ಬಗ್ಗೆ ಹಗುರವಾಗಿ ಮಾತನಾಡುವ ಹಾಗೂ ಜಾತಿಗಳ ಮಧ್ಯೆ ಸಂಘರ್ಷ ತಂದೊಡ್ಡು ಯತ್ನಾಳ ಅವರಿಗೆ ನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಬಿಜೆಪಿ ಮೂಲ ಕಾರ್ಯಕರ್ತರು ತಟಸ್ಥರಾಗಿ ಉಳಿಯಲಿದ್ದೇವೆ ಎಂದು ಎಚ್ಚರಿಸಿದರು.

ಪಕ್ಷದ ವರಿಷ್ಠರು ಸ್ಥಳೀಯವಾಗಿ ಪರಿಸ್ಥಿತಿಯನ್ನು ಅರಿತು ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು.ಅವಕಾಶ ತಪ್ಪಿದರೂ ಪಕ್ಷನಿಷ್ಟೆ ಬಿಡದ ಅಪ್ಪು ಪಟ್ಟಣಶಟ್ಟಿ ಅವರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪಕ್ಷ ನಿಷ್ಟೆ ಇಲ್ಲದ ಯತ್ನಾಳ ಅವರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ, ತಮ್ಮ ಹಿಂಬಾಲಕರಿಗೆ ಟಿಕೆಟ್ ನೀಡುತ್ತ ಬಂದಿದ್ದಾರೆ. ತಮ್ಮನ್ನು ತಾವು ಶುದ್ಧಹಸ್ತರೆಂದು ಕರೆದುಕೊಳ್ಳುವ ಯತ್ನಾಳ ಅವರು, ತಮ್ಮ ಆಪ್ತ ಸಹಾಯಕರ ಮೂಲಕ ನಡೆಸುವ ಅವ್ಯವಹಾರಗಳ ಕುರಿತು ಶೀಘ್ರವೇ ಸಾರ್ವಜನಿಕವಾಗಿ ಬಹಿರಂಗ ಮಾಡುವುದಾಗಿ ಹೇಳಿದರು.

ತಮ್ಮನ್ನು ತಾವು ಒಂದೆ ಹಿಂದು ಹುಲಿ ಎಂದು ಕರೆದುಕೊಳ್ಳುವ ಯತ್ನಾಳ, ಪಂಚಮಸಾಲಿ ಮೀಸಲು ಹೋರಾಟದ ಮುಂಚೂಣಿ ನಾಯಕರ ವಿರುದ್ಧವೇ ಷಡ್ಯಂತ್ರ ಮಾಡಿದರು. ಸಮಾಜಕ್ಕೆ 2-ಎ ಮೀಸಲಾತಿಗಾಗಿ ಹೋರಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳನ್ನೇ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಲಿಪಶು ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.