ಬಿಎಸ್ ವೈ ವಿರುದ್ಧ ಮಾತನಾಡಲ್ಲ ಎಂದಿರುವ ಯತ್ನಾಳ್ ನಡೆ ಒಳ್ಳೆಯದು: ವಿಜಯೇಂದ್ರ

Team Udayavani, Jan 27, 2023, 4:11 PM IST

vijayendra

ವಿಜಯಪುರ: ಕರ್ನಾಟಕ ರಾಜ್ಯದಲ್ಲಿ ನಾಲ್ಕು ಬಾರಿ‌ ಮುಖ್ಯಮಂತ್ರಿ ಆಗಿರುವ ಬಿ.ಎಸ್. ಯಡಿಯೂರಪ್ಪ ವಿರುದ್ಧ ಟೀಕೆ ಮಾಡುವುದಿಲ್ಲ ಎಂದು ಹಿರಿಯರಾದ ಯತ್ನಾಳ ಅವರು ಹೇಳಿರುವುದು ಪಕ್ಷದ ಬೆಳವಣಿಗೆ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮದವರು‌ ಹೈಕಮಾಂಡ್ ಸೂಚನೆ ಮೇರೆಗೆ ಬಿಎಸ್. ಯಡಿಯೂರಪ್ಪ ಕುರಿತು ಮಾತನಾಡುವುದಿಲ್ಲ ಎಂದಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಗಮನ ಸೆಳೆದರು.

ಇದಕ್ಕೆ ಪ್ರತಿಯಿಸಿದ ವಿಜಯೇಂದ್ರ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪಕ್ಷದ ಹಿರಿಯರಾದ ಯತ್ನಾಳ ಅವರ ನಡೆ ಒಳ್ಳೆಯ ಬೆಳವಣಿಗೆ ಎಂದು ಭಾವಿಸಿರುವೆ.  ಹಿರಿಯರಾದ ಯತ್ನಾಳ ಅವರ ಬಗ್ಗೆ ನಾನು ಹೆಚ್ಚಿಗೆ ಹೇಳಲು ಬಯಸುವುದಿಲ್ಲ ಎಂದರು.

ನಾಲ್ಕು ಬಾರಿ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ಎಲ್ಲ ಸಮುದಾಯದ ಜನರು ಒಪ್ಪಿಕೊಂಡಿರುವ ಧೀಮಂತ ನಾಯಕ. ಹೀಗಾಗಿ ಯಡಿಯೂರಪ್ಪ ಅವರಿಗೆ ಎಸೆಯುವ ಕಲ್ಲು ಪಕ್ಷಕ್ಕೆ ಪೆಟ್ಟು ನೀಡಲಿದೆ. ಪಕ್ಷದ ಮೇಲಾಗುವ ಹೊಡೆತ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಭವಿಷ್ಯದ ದಿನಗಳಲ್ಲಿ ಇದು ಎಲ್ಲರಿಗೂ ಅರ್ಥವಾಗಲಿದೆ ಎಂದರು.

ಇದನ್ನೂ ಓದಿ:ಯಾರಿಗೂ ಹೆದರುವ ಮಾತಿಲ್ಲ..: ರಾಯಚೂರಿನಲ್ಲಿ ಗಾಲಿ ರೆಡ್ಡಿ ಟೆಂಪಲ್ ರನ್

ಏನೇ ಸಮಸ್ಯೆ ಇದ್ದರೂ ಆಂತರಿಕವಾಗಿ ಬಗೆ ಹರಿಸಿಕೊಳ್ಳಬೇಕು. ಇಂಥ ವಿಷಯದ ಬಗ್ಗೆ ಮಾತನಾಡಲು ರಾಜಕೀಯದಲ್ಲಿ ನಾನಿನ್ನೂ ಅಂಬೆಗಾಲಿಡುತ್ತಿದ್ದೇನೆ ಎಂದರು.

ಹಿರಿಯರಾದ ಯತ್ನಾಳ ಅವರ ಬಗ್ಗೆ ನಮಗೆ ವೈಯಕ್ತಿಕ ವಿರೋಧಗಳಿಲ್ಲ. ನಮ್ಮ ಹೇಳಿಕೆ, ಆಲೋಚನೆಗಳು ಪಕ್ಷಕ್ಕೆ ಪೂರಕವಾಗಿರಬೇಕೇ ಹೊರತು, ಪಕ್ಷಕ್ಕೆ ಧಕ್ಕೆ ತರುವಂತೆ ಇರಬಾರದು. ಚುನಾವಣೆ ಹೊತ್ತಿನಲ್ಲಿರುವ ಈ ಹಂತದಲ್ಲಿ ಇಂಥ ವಿಷಯಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಕೈಯನ್ನು ಇನ್ನಷ್ಟು ಬಲಪಡಿಸಬೇಕಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ. ಹೀಗಾಗಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಬಲಪಡಿಸಿ, ಮುನ್ನಡೆಸಿಕೊಂಡು ಹೋಗುವ ಕರ್ತವ್ಯ ನಿಭಾಯಿಸಬೇಕಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.