ಯುವ ಜನರಲ್ಲಿ ಬೆಳೆಯಬೇಕಿದೆ ಭಾವೈಕ್ಯ-ಸಹೋದರತೆ ಭಾವ

Team Udayavani, Oct 27, 2018, 12:52 PM IST

vij-2.jpg

ವಿಜಯಪುರ: ರಾಷ್ಟ್ರ ನಿರ್ಮಾಣ ಹಾಗೂ ಭಾವೈಕ್ಯತೆ ಭಾವನೆ ಬೆಳೆಸುವುದು ಯುವಕರ ಆದ್ಯ ಕರ್ತವ್ಯ ಎಂದು ಜಾವೇದ್‌ ಜಮಾದಾರ ಹೇಳಿದರು. ವಿಜಯಪುರದ ಅಂಜುಮನ್‌ ಬಿ.ಎಡ್‌ ಕಾಲೇಜು ಸಭಾಭವನದಲ್ಲಿ ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ಎನ್ನೆಸ್ಸೆಸ್‌ ಘಟಕ ಅಂಜುಮನ್‌ ಇಸ್ಲಾಮ ಸಂಸ್ಥೆ ಆಶ್ರಯದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರದಿಂದಲೇ ನಿಸ್ವಾರ್ಥ ಸೇವೆ ಸಲ್ಲಿಸಿದರೆ ರಾಷ್ಟ್ರ ಸೇವೆಯಾಗುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಯುವ ಜನರಲ್ಲಿ ರಾಷ್ಟ್ರೀಯ ಭಾವೈಕ್ಯ ಮತ್ತು ಸಹೋದರತೆ ಭಾವನೆ ಬೆಳೆಸುವುದು ಅವಶ್ಯಕವಾಗಿದೆ. ಯುವಕರು ಸಮಾಜಕ್ಕೆ ಕೈಲಾದಷ್ಟು ಸೇವೆ ಸಲ್ಲಿಸಬೇಕು. ರಾಷ್ಟ್ರೀಯ ಭಾವೈಕ್ಯತೆಗೆ ಪ್ರಮಾಣಿಕವಾಗಿ ಶ್ರಮ ಹಾಗೂ ಸಮರ್ಪಣಾ ಭಾವ ಬೆಳೆಸಿಕೊಳ್ಳಬೇಕು ಎಂದರು.

ಎನ್ನೆಸ್ಸೆಸ್‌ ಜಿಲ್ಲಾ ನೋಡೆಲ್‌ ಅಧಿಕಾರಿ ಡಾ| ಎಚ್‌. ಎಂ. ಸಜ್ಜಾದೆ ಮಾತನಾಡಿ, ಯುವಕರು ಸಮಯ ವ್ಯರ್ಥ ಮಾಡದೆ ಹಿರಿಯರ ಮಾರ್ಗದರ್ಶನದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು. ಆದ್ದರಿಂದ ಯುವಕರು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೇ ಸಮಗ್ರ ಭಾರತದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಮೇಯರ್‌ ಸಜ್ಜಾದೆ ಪೀರಾ ಮುಶ್ರೀಫ್‌ ಮಾತನಾಡಿ, ನೆಹರು ಯುವ ಕೇಂದ್ರ ಯುವಕರನ್ನು ಗುರುತಿಸಿ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಾತ್ಮಕ ಕಾರ್ಯದಲ್ಲಿ ತೊಡಗಿಸುತ್ತಿರುವುದು ಶ್ಲಾಘನೀಯ. ಯುವಕರು ತನು-ಮನದಿಂದ ಸಕ್ರೀಯವಾಗಿ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಂಜುಮನ್‌ ಸಂಸ್ಥೆ ಚೇರಮನ್‌ ಅಲ್‌ಹಜ್‌ ಮಹಾಬೂಬಖಾದ್ರಿ ಮುಶ್ರೀಫ್‌, ಡಾ| ಶಾರದಾಮಣಿ ಹುಣಶ್ಯಾಳ, ಎನ್‌ವೈಕೆ ಜಿಲ್ಲಾ ಸಮನ್ವಯಾಧಿಕಾರಿ ಡಿ. ದಯಾನಂದ ಮಾತನಾಡಿದರು. ಸುನೀಲಕುಮಾರ ಯಾದವ, ಡಾ| ಆರ್‌.ಎಸ್‌. ಮೂಲಿಮನಿ, ಡಾ| ಎಸ್‌.ಎಸ್‌. ಹುಣಶ್ಯಾಳ ನಿರ್ಣಾಯಕರಾಗಿ ಪಾಲ್ಗೊಂಡಿದ್ದರು. ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನಬಾಗೇವಾಡಿ, ವಿಜಯಪುರ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ಪಾಲ್ಗೊಂಡಿದ್ದರು. ಧರೆಪ್ಪ ಪೂಜಾರಿ ಸ್ವಾಗತಿಸಿದರು. ಮಾಳಿಂಗರಾಯ ಕಡ್ಲಿಮಟ್ಟಿ ವಂದಿಸಿದರು.

ಬಹುಮಾನ ವಿತರಣೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎಎಸ್‌ಪಿ ಕಾಲೇಜಿನ ಶ್ವೇತಾ ಜೈನ್‌ ಪ್ರಥಮ ಸ್ಥಾನ ಪಡೆದು 5 ಸಾವಿರ ರೂ. ನಗದು ಸಹಿತ ಬಹುಮಾನ ಪಡೆದರು.  ಗಾರಮ್ಮ ಸಜ್ಜನ ಕಾಲೇಜಿನ ಲಾಲಬಿ ಎಲಗಾರ ದ್ವಿತೀಯ ಸ್ಥಾನ ಪಡೆದು 2 ಸಾವಿರ ರೂ. ನಗದು, ಬಸವನಬಾಗೇವಾಡಿಯ ಮಶಾಕ ಗೌಂಡಿ ತೃತೀಯ ಸ್ಥಾನ ಪಡೆದರು. ಪ್ರಥಮ ಹಾಗೂ ದ್ವಿತೀಯ ವಿಜೇತರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.