ಪಾಲಿಕೆ ಆಯುಕ್ತರ ಮೇಲೆ ಮದ್ಯವ್ಯಸನಿ ಯುವಕರ ಗುಂಪಿನಿಂದ ಹಲ್ಲೆ: ಓರ್ವನ ಬಂಧನ
Team Udayavani, Dec 20, 2021, 11:48 AM IST
Representative Image Used
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರ ಮೇಲೆ ಮದ್ಯ ವ್ಯಸನಿ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಾಲ್ವರು, ಕಾರಿನಿಂದ ಮೆಕ್ಕಳಕಿ ಅವರ ಕಾರಿಗೆ ಗುದ್ದಿದ್ದಾರೆ. ಇದನ್ನು ಪ್ರಶ್ನಿಸಿದ ಪಾಲಿಕೆ ಆಯುಕ್ತ ಮೆಕ್ಕಳಕಿ ಅವರ ಮೇಲೆ ಹಲ್ಲೆಗೆ ಮುಂದಾಗಿದೆ.
ಪಾಲಿಕೆ ಆಯುಕ್ತ ಎಂದು ಹೇಳಿದ ಮೇಲೂ ಸ್ಥಳೀಯ ನಿವಾಸಿಗಳಾದ ಸಮರ್ಥ ಸಿಂದಗಿ ಸೇರಿದಂತೆ ನಾಲ್ವರು ಮನಬಂದಂತೆ ಥಳಿಸಿದ್ದಾರೆ. ಇದರಿಂದ ತೀವ್ರ ಗಾಯಗೊಂಡು ಅಸ್ವಸ್ಥರಾದ ಮೆಕ್ಕಳಕಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಇದನ್ನೂ ಓದಿ:ರೈಲು ಹತ್ತುವಾಗ ಆಯತಪ್ಪಿ ಬಿದ್ದು ಬಿಬಿಎಂಪಿ ಅಧಿಕಾರಿ ದುರ್ಮರಣ
ಈ ಕುರಿತು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಆದರ್ಶನಗರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಸಮರ್ಥ ಸಿಂದಗಿ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.