ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ
ಗುರುವಾರವೂ ಮುಂದುವರಿದ ಪ್ರತಿಭಟನೆ•ರೈತರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು
Team Udayavani, Aug 24, 2019, 5:11 PM IST
ಬ್ಯಾಡಗಿ: ವಿದ್ಯುತ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತ ಸಂಘದ ಹಸಿರು ಸೇನೆ ಸದಸ್ಯರು ಗುರುವಾರವೂ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಬ್ಯಾಡಗಿ: ಗ್ರಾಮೀಣ ಭಾಗದಲ್ಲಿನ ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ರೈತ ಸಂಘದ ಹಸಿರು ಸೇನೆ ಸದಸ್ಯರು ಗುರುವಾರ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ನಡೆಸಿದ್ದ ಪ್ರತಿಭಟನೆ ಶುಕ್ರವಾರವೂ ಮುಂದುವರೆಯಿತು.
ಬೆಳಗ್ಗೆ 10ಗಂಟೆಗೆ ಮತ್ತೆ ಕಚೇರಿಗೆ ಆಗಮಿಸಿದ ರೈತ ಸಂಘದ ಮುಖಂಡರು ಹಾಗೂ ಸದಸ್ಯರು ಕಚೇರಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ಆರಂಭಿಸಿದರು. ಪರಿಣಾಮ ಹೆಸ್ಕಾಂ ಸಿಬ್ಬಂದಿ ಕಚೇರಿ ಒಳಗೆ ಹೋಗಲಾರದೆ ಹೊರಗುಳಿಯುವಂತಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ, ಗುರುವಾರ ಇಡೀ ದಿನ ಕಚೇರಿ ಎದುರು ಧರಣಿ ನಡೆಸಿದ್ದೇವೆ. ಆದರೆ, ಯಾವೊಬ್ಬ ಅಧಿಕಾರಿಯೂ ಸಮರ್ಪಕ ಉತ್ತರ ನೀಡದೆ ಕಾಲ್ಕಿತ್ತಿದ್ದಾರೆ. ಇದ್ಯಾವ ರೀತಿಯ ಫಲಾಯನವಾದ? ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಒಂದುವರೆ ತಿಂಗಳಿನಿಂದ ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ವಿದ್ಯುತ್ ಪೂರೈಸಿ ರೈತರನ್ನು ಉಳಿಸಿ ಎಂದು ಕೇಳಿದ್ದೆ ತಪ್ಪಾಯಿತೇ ಎಂದು ಪ್ರಶ್ನಿಸಿದರು.
ಎಲ್ಲದಕ್ಕೂ ಹೋರಾಟ ಮಾಡಬೇಕಾ?: ಕೃಷಿಕ ಸಮಾಜದ ಅಧ್ಯಕ್ಷ ಗಂಗಣ್ಣ ಎಲಿ ಮಾತನಾಡಿ, ದೇಶದಲ್ಲಿ ರೈತ ಸಮೂಹಕ್ಕೆ ಬಂದಿರುವ ಪರಿಸ್ಥಿತಿ ಇನ್ಯಾರಿಗೂ ಬಂದಿರಲೂ ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ಅನ್ನದಾತ ಇಂದು ತನ್ನ ಹಕ್ಕನ್ನು ಪಡೆದುಕೊಳ್ಳಲು ಹೆಣಗಾಡುವಂತಾಗಿದ್ದು ನಮ್ಮ ದುರ್ದೈವ. ಬೆಳೆ ವಿಮೆ ಪರಿಹಾರ, ಸಾಲಮನ್ನಾ, ನೀರು, ಸೇರಿದಂತೆ ಪ್ರತಿಯೊಂದನ್ನು ಹೋರಾಟದ ಮೂಲಕವೇ ಪಡೆದುಕೊಳ್ಳುವಂತಾಗಿದೆ. ಇದು ನಮ್ಮನ್ನಾಳುವ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ತನಕ್ಕೆ ಹಿಡಿದ ಕನ್ನಡಿಯಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಪೂರೈಕೆ ಮಾಡುವವರೆಗೂ ಇಲ್ಲಿಂದ ಕದಲಲಿಲ್ಲ ಎಂದು ಎಚ್ಚರಿಸಿದರು.
ಹೆಸ್ಕಾಂ ಅಧಿಕಾರಿ ತರಾಟೆ: ರೈತರ ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಎಇಇ ಹಾಲೇಶ ಅಂತರವಳ್ಳಿ ರೈತರನ್ನು ಸಮಾಧಾನ ಪಡಿಸಲು ಮುಂದಾದರು. ಈಗಾಗಲೇ ಕೆಲ ಗ್ರಾಮಗಳಲ್ಲಿ ಸಮಸ್ಯೆಗೆ ಪರಿಹರಿಸಿ ವಿದ್ಯುತ್ ನೀಡಲಾಗಿದೆ. ಇನ್ನೂ ಕೆಲ ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ಆಕ್ರೋಶಗೊಂಡ ರೈತರು ಒಂದುವರೆ ತಿಂಗಳು ಎಲ್ಲಿ ಹೋಗಿತ್ತು? ನಿಮ್ಮ ಈ ಕರ್ತವ್ಯ ಪ್ರಜ್ಞೆ, ನಾವು ಹೋರಾಕ್ಕಿಳಿದ ಕೂಡಲೇ ಜವಾಬ್ದಾರಿ ಅರಿವಾಯಿತೆ? ನಿಮ್ಮ ಮಾತನ್ನು ನಾವು ನಂಬಲ್ಲ, ನಿಮ್ಮ ಮೇಲಧಿಕಾರಿ ಅವರನ್ನು ಕರೆಯಿಸಿ ಎಂದು ಪಟ್ಟು ಹಿಡಿದರು.
ರೈತರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಾರ್ಯ ನಿರ್ವಾಹಕ ಅಭಿಯಂತರ ಬಸವರಾಜ ಬೆಳಕೇರಿ ಮಾತನಾಡಿ, ಸಿಬ್ಬಂದಿ ಕೊರತೆ ಹಾಗೂ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಈ ಸಮಸ್ಯೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲ ಸರಿಪಡಿಸಿ ಮುಂದೇ ಈ ರೀತಿಯ ತೊಂದರೆಗಳಾಗದಂತೆ ನೊಡಿಕೊಳ್ಳುವುದು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಗಲು 7ಗಂಟೆ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಶಶಿಧರಸ್ವಾಮಿ ಛತ್ರದಮಠ, ಕಿರಣ ಗಡಿಗೋಳ, ಜಾನ್ ಪುನೀತ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.