ಉತ್ತಮ ಜೀವನಕ್ಕೆ ನಿತ್ಯ ಯೋಗ ಸಹಕಾರಿ

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸಲಹೆ

Team Udayavani, Jun 22, 2019, 3:00 PM IST

22–June-30

ಬ್ಯಾಡಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 5ನೇ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ.

ಬ್ಯಾಡಗಿ: ಆರೋಗ್ಯಕರ ಜೀವನಕ್ಕಾಗಿ ಜಗತ್ತಿಗೆ ಭಾರತ ನೀಡಿದ ಅದ್ಭುತ ಹಾಗೂ ಅಮೂಲ್ಯ ಕೊಡುಗೆಯೆಂದರೆ ಯೋಗ. ಇತ್ತೀಚಿನ ದಿನಗಳಲ್ಲಿ ರೋಗಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲದಕ್ಕೂ ವೈದ್ಯರನ್ನೇ ಅವಲಂಬಿಸಿದ್ದೇವೆ. ನಿತ್ಯವೂ ಯೋಗವನ್ನು ಅಳವಡಿಸಿಕೊಂಡಿದ್ದೇ ಆದಲ್ಲಿ ರೋಗದ ಮೇಲೆ ನಿಯಂತ್ರಣ ಸಾಧಿಸಬಹುದಾಗಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 5ನೇ ವಿಶ್ವಯೋಗ ದಿನಾಚರಣೆ ಅಂಗವಾಗಿ ಪತಂಜಲಿ ಯೋಗ ಸಮಿತಿ ಬ್ಯಾಡಗಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲ ಆಚರಣೆಗಳಿಗಿಂತಲೂ ಯೋಗ ಭಿನ್ನ, ಮನುಷ್ಯ ರೋಗಮುಕ್ತವಾಗಬೇಕಿದ್ದರೆ ನಿತ್ಯ ಬದುಕಿನಲ್ಲಿಯೋಗ ಅಳವಡಿಸಿ ಕೊಳ್ಳಬೇಕು, ದೇಹವನ್ನು ಆರೋಗ್ಯಯುತವಾಗಿ ನಿಯಂತ್ರಣದಲ್ಲಿಡುವ ಶಕ್ತಿ ಯೋಗಕ್ಕಿದೆಎಂದರು.

ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಛತ್ರದ ಮಾತನಾಡಿ, ಪ್ರಕೃತಿ ನಿಯಮಗಳಿಗೆ ವಿರುದ್ಧವಾಗಿ ಬದುಕಿನ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿಯಾಗಲು ಸಾಧ್ಯವಿಲ್ಲ. ಪ್ರಕೃತಿ ಜೊತೆಗೆ ಮಾನವನ ದೈಹಿಕ ಸಾಮ್ಯತೆಯನ್ನು ಸಾಧಿಸುವುದೇ ಯೋಗ. ಕೇವಲ ಒಂದು ಧರ್ಮಕ್ಕೆ ಸೀಮಿತವಲ್ಲ. ಇದನ್ನುಒಂದು ಚೌಕಟ್ಟಿಗೆ ಸೀಮಿತಗೊಳಿಸದಂತೆ ಮನವಿ ಮಾಡಿದರು.

ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ ಮಾತನಾಡಿ, ಮಿತಆಹಾರ ಸೇವನೆ ನಿಗದಿತ ವ್ಯಾಯಾಮಗಳಿಲ್ಲದೇ ದೈಹಿಕ ಸ್ಥಿತಿ ನಿಯಂತ್ರಿಸುವುದಾಗಲಿ ಅಥವಾ ಆರೋಗ್ಯಕರವಾಗಿಟ್ಟುಕೊಳ್ಳುವುದಾಗಲಿ ಕಷ್ಟ ಸಾಧ್ಯ, ಒತ್ತಡದ ಬದುಕು ಮನುಷ್ಯನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಖನ್ನರಾಗುವಂತೆ ಮಾಡುತ್ತಿದೆ. ಇದರಿಂದ ಮನುಷ್ಯ ಎಷ್ಟೇ ಹಣವಂತನಾಗಿದ್ದರೂ ಕೂಡ ಆರೋಗ್ಯದ ವಿಷಯದಲ್ಲಿ ಬಡವನಾಗುತ್ತಿದ್ದಾನೆ. ನಿತ್ಯವೂ ಯೋಗ ಮಾಡುವುದರಿಂದ ಮನುಷ್ಯ ಆರೋಗ್ಯವಂತನಾಗಿರುವ ಮೂಲಕ ದೀರ್ಘ‌ಕಾಲದ ರೋಗಗಳಿಂದ ಮುಕ್ತನಾಗಿರಲು ಸಾಧ್ಯವಾಗುತ್ತದೆ ಎಂದರು.

ಸಾವಿರಾರು ವಿದ್ಯಾರ್ಥಿಗಳು ಭಾಗಿ: ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಯೋಗಗುರು ಬಿ.ಎಸ್‌. ಭೀಮಣ್ಣ ಯೋಗ ತರಬೇತಿಯನ್ನು ನೀಡಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಗುರುನಾಥ ಅಂಕಲಗಿ, ನಂದೀಶ ವೀರನಗೌಡ್ರ, ಸಿಪಿಐ ಭಾಗ್ಯವತಿ ಬಂಟಿ, ತಹಶೀಲ್ದಾರ ಗುರುಬಸವರಾಜ, ಉಮಾದೇವಿ ಪತ್ತಾರ, ಮಾಜಿ ಸೈನಿಕ ಎಂ.ಡಿ. ಚಿಕ್ಕಣ್ಣನವರ, ಶಿವು ಗಡಾದ, ರುದ್ರೇಶ ಸಿ. ದ್ರಾಕ್ಷಾಯಣಿ ಹರಮಗಟ್ಟಿ, ಪಾಂಡುರಂಗ ಸುತಾರ ಇದ್ದರು.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.