ಬಸ್‌ಪಾಸ್ ದರ ಹೆಚ್ಚಳ ಕೈಬಿಡಿ: ಭಾನುಪ್ರಸಾದ್
Team Udayavani, Jun 19, 2019, 4:05 PM IST
ಚಳ್ಳಕೆರೆ: ವಿದ್ಯಾರ್ಥಿ ಬಸ್ ಪಾಸ್ ದರ ಹೆಚ್ಚಳ ಖಂಡಿಸಿ ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಚಳ್ಳಕೆರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳ ನಡುವೆ ಶಾಲಾ- ಕಾಲೇಜುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಾಸ್ತವ ಸ್ಥಿತಿಯನ್ನು ಅರಿಯದೆ ಏಕಾಏಕಿ ಬಸ್ ಪಾಸ್ ಶುಲ್ಕವನ್ನು ಹೆಚ್ಚಳ ಮಾಡಿರುವುದನ್ನು ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ ಎಂದು ಎಬಿವಿಪಿ ತಾಲೂಕು ಸಂಚಾಲಕ ಭಾನುಪ್ರಸಾದ್ ಹೇಳಿದರು.
ಬಸ್ ಪಾಸ್ ದರ ಏರಿಕೆ ವಿರುದ್ಧ ತಾಲೂಕು ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದ ಸರ್ಕಾರ ವಿದ್ಯಾರ್ಥಿಗಳ ಪಾಸ್ ದರವನ್ನು ಹೆಚ್ಚಿಸದೆ ಸಹಕರಿಸಿತ್ತು. ಬಹುತೇಕ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಪಾಸ್ ಪಡೆದು ನಿತ್ಯ ಶಾಲಾ-ಕಾಲೇಜುಗಳಿಗೆ ಓಡಾಡುತ್ತಾರೆ. ಆದರೆ ರಾಜ್ಯ ಸರ್ಕಾರ ಯಾವುದೇ ಸೂಚನೆ ನೀಡದೆ ವಿದ್ಯಾರ್ಥಿಗಳ ಪಾಸ್ ದರವನ್ನು ಸಹ ಹೆಚ್ಚಿಸಿರುವುದು ಖಂಡನೀಯ. ಕೂಡಲೇ ಹೆಚ್ಚಿಸಿದ ದರವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಎಬಿವಿಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಚ್ಪಿಪಿಸಿ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಜಗಜೀವನರಾಮ್ ವೃತ್ತ, ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ನೆಹರೂ ವೃತ್ತಕ್ಕೆ ಆಗಮಿಸಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ವೈಭವ ಬಾದ್ವಿ, ನಗರ ಘಟಕದ ಸಂಚಾಲಕ ಲವಕುಮಾರ್, ತೇಜು, ವೆಂಕಟೇಶ್, ಅಮರ್, ಶಿವು ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.