ರಾಜಕೀಯ ದುರುದ್ದೇಶಕ್ಕೆ ಕೈ ಧರಣಿ

ಕಾಂಗ್ರೆಸ್‌ ನಾಯಕರ ವಿರುದ್ಧ ಸಚಿವ ಶ್ರೀರಾಮುಲು ಕಿಡಿ ವಿನಾಕಾರಣ ಟೀಕೆ ಸಲ್ಲ

Team Udayavani, Sep 22, 2019, 4:30 PM IST

22-Sepectember-19

ಚಳ್ಳಕೆರೆ: ಉತ್ತರ ಕರ್ನಾಟಕ ಸೇರಿದಂತೆ ನೆರೆಪೀಡಿತ ಪ್ರದೇಶಗಳ ಜನರಿಗೆ ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಶನಿವಾರ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಗೃಹ ಮತ್ತು ಹಣಕಾಸು ಸಚಿವರನ್ನು ರಾಜ್ಯಕ್ಕೆ ಕಳುಹಿಸಿ ಮಾಹಿತಿ ತರಿಸಿಕೊಂಡಿದ್ದಾರೆ. ಈಗಾಗಲೇ ಎರಡು ಹಂತದಲ್ಲಿ 2500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪರಿಹಾರ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ರೀತಿಯ ನೆರವು ನೀಡಲಿದೆ. ಆದರೆ ಕಾಂಗ್ರೆಸ್‌ ನಾಯಕರು ಮಾತ್ರ ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಿ ಧರಣಿ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಬಿ ಎಸ್‌. ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ನಾನು ನೆರೆಪೀಡಿತ ಪ್ರದೇಶಗಳಿಗೆ ಹಲವಾರು ಬಾರಿ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಚರ್ಚೆ ನಡೆಸಿದ್ದೇವೆ. ಆ ಭಾಗದ ಜನರು ಕೂಡ ಕೇಂದ್ರ ಸರ್ಕಾರದ ನೆರವಿನ ಬಗ್ಗೆ ಸ್ಪಷ್ಟ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಎರಡು ಬಾರಿ ಪ್ರತ್ಯೇಕವಾಗಿ ಹಣಕಾಸಿನ ನೆರವು ನೀಡಿದೆ. ಆದಾಗ್ಯೂ ಕಾಂಗ್ರೆಸ್‌ ನಾಯಕರು ನೆರೆ ಸಂತ್ರಸ್ತರ ಸಹಾನುಭೂತಿ ಗಳಿಸಲು ಹಾಗೂ ರಾಜಕೀಯ ದುರುದ್ದೇಶದಿಂದ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ. ಯಾವುದೇ ರೀತಿಯ ಸುಳ್ಳು ಪ್ರಚಾರಗಳಿಗೆ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಜೆ.ಪಿ. ಜಯಪಾಲಯ್ಯ, ತಾಪಂ ಸದಸ್ಯ ಈ. ರಾಮ ರೆಡ್ಡಿ, ಮೋಹನ್‌, ಸೋಮಶೇಖರ ಮಂಡಿಮಠ, ಟಿ.ಎಸ್‌.ಟಿ. ಪುಟ್ಟಕ್ಕ, ಹೊನ್ನೂರು ಪ್ರಕಾಶ್‌, ಚಿದಾನಂದ, ಇದ್ದರು.

ಟಾಪ್ ನ್ಯೂಸ್

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.