ಬಾಲ್ಯವಿವಾಹ ನಿರ್ಮೂಲನೆಗೆ ಶಿಕ್ಷಣವೇ ಮದ್ದು
ಮಹಿಳೆಯರು ಕಾನೂನು ಅರಿವು ರೂಢಿಸಿಕೊಳ್ಳುವುದು ಅತ್ಯಗತ್ಯ: ನ್ಯಾ| ದೇವೇಂದ್ರ ಪಂಡಿತ್
Team Udayavani, Jun 9, 2019, 12:12 PM IST
ಚಳ್ಳಕೆರೆ: ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ದೇವೇಂದ್ರ ಪಂಡಿತ್ ಮಾತನಾಡಿದರು.
ಚಳ್ಳಕೆರೆ: ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಬದುಕನ್ನು ಉತ್ತಮ ರೀತಿಯಲ್ಲಿ ಸಾಗಿಸುವಂತೆ ಕಾನೂನು ಅವಕಾಶ ಕಲ್ಪಿಸಿದೆ. ಕಾನೂನಿನ ಸಹಕಾರವಿಲ್ಲದೆ ಯಾವುದೇ ರೀತಿಯ ಚಟುವಟಿಕೆ ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕಾನೂನು ಮಾನವ ಜೀವನದ ಅವಿಭಾಜ್ಯ ಅಂಗ ಎಂದು ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ಇಲ್ಲಿನ ಎಚ್ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬಾಲ್ಯವಿವಾಹದ ಬಗ್ಗೆ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಹಾಗೂ ಡಿವಿಜಿಯವರ ಮಂಕುತಿಮ್ಮನ ಕಗ್ಗ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶತಮಾನಗಳಿಂದ ಮಾನವ ಸಮಾಜಕ್ಕೆ ಕಳಂಕಪ್ರಾಯವಾದ ಬಾಲ್ಯವಿವಾಹ ಪದ್ಧತಿಯನ್ನು ದೂರ ಮಾಡುವ ಶಕ್ತಿ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಎಲ್ಲಾ ಹೆಣ್ಣುಮಕ್ಕಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಹಿಂದೆ ನಮ್ಮ ಹಿರಿಯರು ಸಂಪ್ರದಾಯಗಳ ಆಚರಣೆ ಹಿನ್ನೆಲೆಯಲ್ಲಿ ಮಹಿಳೆಯರನ್ನು ಕೇಳದೆ, ವಯಸ್ಸನ್ನು ಲೆಕ್ಕಿಸದೆ ಮಹಿಳೆಯರ ಅಭಿಪ್ರಾಯ ಸಂಗ್ರಹಿಸದೆ ಏಕಪಕ್ಷೀಯವಾಗಿ ತಮಗೆ ತೋಚಿದ ರೀತಿಯಲ್ಲಿ ವಿವಾಹವನ್ನು ನೆರವೇರಿಸುತ್ತಿದ್ದರು. ಅತಿ ಚಿಕ್ಕ ವಯಸ್ಸಿನಲ್ಲಿ ಲೌಕಿಕ ಜ್ಞಾನವಿಲ್ಲದ ಹಾಗೂ ಜೀವನ ನಿರ್ವಹಿಸಲು ಸಮರ್ಥಳಾಗದ ಪುಟ್ಟ ಬಾಲಕಿಗೆ ಮದುವೆ ಎಂಬ ಹಣೆಪಟ್ಟಿ ಕಟ್ಟಿ ಜವಾಬ್ದಾರಿ ನೀಡುತ್ತಿದ್ದರು. ಬಾಲಕಿ ಹಿರಿಯರ ಮಾತಿಗೆ ಅಂಜಿ ತೋರಿಸಿದ ಗಂಡಿನೊಂದಿಗೆ ಮದುವೆಯಾಗುತ್ತಿದ್ದಳು. ಇಲ್ಲಿ ಸ್ತ್ರೀಸಮಾನತೆ ಮಾಯವಾಗಿ ಕಾನೂನಿನ ಪರಿಪಾಲನೆ ಆಗುತ್ತಿರಲಿಲ್ಲ. ಹಾಗಾಗಿ ಬಾಲ್ಯವಿವಾಹಕ್ಕೆ ಪ್ರೋತ್ಸಾಹಿಸುವ ಮತ್ತು ಬಾಲ್ಯವಿವಾಹ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶ ನ್ಯಾಯಾಂಗ ಇಲಾಖೆಗೆ ಇದೆ. ಈ ಕಾರ್ಯಕ್ಕೆ ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಕೈಜೋಡಿಸುವಂತೆ ಮನವಿ ಮಾಡಿದರು.
ನ್ಯಾಯಾಧಿಧೀಶ ಮನು ಪಾಟೀಲ್ ಮಾತನಾಡಿ, ಮಹಿಳೆಯರ ಸಂರಕ್ಷಣೆಗೆ ಹಲವಾರು ಕಾನೂನುಗಳಿದ್ದರೂ ಅವುಗಳ ಬಗ್ಗೆ ತಿಳಿಯದ ಮಹಿಳೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾಳೆ. ಆದ್ದರಿಂದ ಪ್ರತಿಯೊಬ್ಬ ಮಹಿಳೆಯೂ ತನಗೆ ರಕ್ಷಣೆ ನೀಡುವ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಿದೆ. ಇಂತಹ ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನ್ಯಾಯಾಂಗ ಇಲಾಖೆ ಮಾಡುತ್ತಿದೆ ಎಂದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಬಗ್ಗೆ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಜಿ.ವಿ.ಶ್ರೀರಾಮ ರೆಡ್ಡಿ, ಸಾಹಿತಿಗಳೆಂದರೆ ಬಡವರು ಎಂದೇ ಅರ್ಥ. ಡಿ.ವಿ. ಗುಂಡಪ್ಪನವರು ತಮ್ಮ ಇಡೀ ಬದುಕನ್ನು ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಮೀಸಲಿಟ್ಟರು. ಶಾಲೆಯ ಉಪಾಧ್ಯಾಯರಾಗಿ ತಮ್ಮ ಬದುಕು ಆರಂಭಿಸಿದ ಅವರು, ಕನ್ನಡ ಸಾಹಿತ್ಯ ಲೋಕ ಎಂದೂ ಮರೆಯದಂತಹ ಅಮೋಘ ಸಾಹಿತ್ಯವನ್ನು ಕೊಡುಗೆಯಾಗಿ ನೀಡಿದರು. ಬದುಕಿನ ಏರಿಳಿತವನ್ನು ಬಿಂಬಿಸುವ ಹಾಗೂ ಮೌಲ್ಯಯುತ ಬದುಕಿಗೆ ಸ್ಪರ್ಶ ನೀಡುವ ಮಂಕುತಿಮ್ಮನ ಕಗ್ಗ ಅವರ ಸಾಹಿತ್ಯದ ಶಕ್ತಿಯ ರೂಪ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಗಿರೀಶ್, ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ನಾಗರಾಜು, ಕಾರ್ಯದರ್ಶಿ ಹನುಮಂತಪ್ಪ ಮೊದಲಾದವರು ಪಾಲ್ಗೊಂಡಿದ್ದರು. ಪ್ರಭಾರಿ ಮುಖ್ಯಶಿಕ್ಷಕ ಎ. ರಾಜಣ್ಣ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.