ಇಂದಿರಾ ಕ್ಯಾಂಟೀನ್ ಆರಂಭ
•ಜನತೆಗೆ ಗುಣಮಟ್ಟ-ಸ್ವಚ್ಛತೆಯಿಂದ ಕೂಡಿದ ಆಹಾರ ಕೊಡಿ: ಸಂಸದ ನಾರಾಯಣಸ್ವಾಮಿ
Team Udayavani, Aug 16, 2019, 1:30 PM IST
ಚಳ್ಳಕೆರೆ: ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಸಂಸದ ಎ. ನಾರಾಯಣಸ್ವಾಮಿ ಉದ್ಘಾಟಿಸಿದರು.
ಚಳ್ಳಕೆರೆ: ಸಮಾಜದಲ್ಲಿ ಎರಡು ಹೊತ್ತಿನ ಊಟವನ್ನು ಮಾಡುವ ಸ್ಥಿತಿ ಇಲ್ಲ. ಬಡತನ ಸಂಕಷ್ಟಕ್ಕೆ ಸಿಲುಕಿಸಿದ್ದು, ನಾನಾ ಕಾರಣಗಳಿಂದಾಗಿ ಹಸಿವು ಮತ್ತು ಬಡತನ ಸದಾ ಕಾಲ ಬೆನ್ನ ಹಿಂದೆ ಸುತ್ತುತ್ತಿರುತ್ತದೆ. ಇಂತಹ ಜನರಿಗೆ ಕಡೇ ಪಕ್ಷ ಕಡಿಮೆ ದರದಲ್ಲಾದರೂ ಊಟ ಒದಗಿಸುವ ದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.
ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಗುರುವಾರ ಸಾರ್ವಜನಿಕ ಸೇವೆಗೆ ಸಮರ್ಪಿಸಿ ಅವರು ಮಾತನಾಡಿದರು. ಗುಣಮಟ್ಟ ಹಾಗೂ ಸ್ವಚ್ಚತೆಯಿಂದ ಕೂಡಿದ ಆಹಾರವನ್ನು ಜನತೆಗೆ ನೀಡಬೇಕು. ಈ ನಿಟ್ಟಿನಲ್ಲಿ ನಗರಸಭೆ ಪೌರಾಯುಕ್ತರು ಸೂಕ್ತ ಗಮನ ಹರಿಸಬೇಕು. ಆಗ ಹಸಿದ ಹೊಟ್ಟೆಗೆ ಉತ್ತಮ ಆಹಾರ ನೀಡಿದ ಸಂತೃಪ್ತಿ ದೊರೆಯುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಇಂದಿರಾ ಕ್ಯಾಂಟೀನ್ ಮೂಲಕ ನಗರದಲ್ಲಿರುವ ಸಾವಿರಾರು ಕೂಲಿ ಕಾರ್ಮಿಕರು ಹಾಗೂ ಬಡವರು ತಮಗೆ ಬರುವ ಅಲ್ಪ ಹಣದಲ್ಲೇ ಉಪಹಾರ ಮತ್ತು ಊಟವನ್ನು ಮಾಡುವ ಮೂಲಕ ತಮ್ಮ ಹಸಿವನ್ನು ನೀಗಿಸಿಕೊಳ್ಳಬೇಕು. ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಜಾಗರೂಕತೆ ವಹಿಸಲಾಗುವುದು. ಯಾವುದೇ ಹಂತದಲ್ಲೂ ವ್ಯಕ್ತಿ ಅನ್ನವಿಲ್ಲದೆ ಹಸಿವಿನಿಂದ ಕೊರಗಿ ರೋಗಿಯಾಗಿ ನರಳುವ ಪರಿಸ್ಥಿತಿ ಉಂಟಾಗದಂತೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಸಂಸದರು ಮತ್ತು ಶಾಸಕರು ನೀಡಿರುವ ಎಲ್ಲಾ ಸಲಹೆ-ಸೂಚನೆಗಳನ್ನು ಪಾಲಿಸಲಾಗುವುದು. ಯಾವುದೇ ಹಂತದಲ್ಲೂ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜು, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಡಿವೈಎಸ್ಪಿ ರೋಷನ್ ಜಮೀರ್, ತಾಲೂಕು ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ಗಿರಿಯಪ್ಪ, ತಾಪಂ ಸದಸ್ಯರಾದ ಎಚ್. ಆಂಜನೇಯ, ಜಿ. ವೀರೇಶ್, ನಗರಸಭಾ ಸದಸ್ಯರಾದ ಎಸ್. ಜಯಣ್ಣ, ಶಿವಕುಮಾರ್, ಪಾಲಮ್ಮ, ಸುಜಾತಾ, ನಿರ್ಮಲಾ, ನಾಗಮಣಿ, ಜಿಪಂ ಮಾಜಿ ಸದಸ್ಯ ಜಯಪಾಲಯ್ಯ, ಆರ್. ಜಗದೀಶ್, ಮೋಹನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.