ಜನರ ಸಮಸ್ಯೆಗೆ ಪರಿಹಾರ ಒದಗಿಸಿ
ಸರ್ಕಾರ-ಆಡಳಿತದ ಮಧ್ಯೆ ಸಾಮರಸ್ಯ ಮುಖ್ಯಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ
Team Udayavani, Oct 26, 2019, 1:17 PM IST
ಚಳ್ಳಕೆರೆ: ಸರ್ಕಾರ ರೈತರ ಬಳಿಗೆ ಹೋಗಿ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದಲೇ ಮಾಹಿತಿ ಪಡೆದು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಗ್ರಾಮೀಣ ಜನರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಲಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಶುಕ್ರವಾರ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಂಧ್ರ ಪ್ರದೇಶ ಗಡಿಭಾಗದಲ್ಲಿನ ತಳಕು ಹೋಬಳಿಯ ಓಬಳಾಪುರ ಗ್ರಾಮದಲ್ಲಿ ಜಿಲ್ಲಾಮಟ್ಟದ ಎರಡನೇ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾರಂಭದ ಹಂತದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ನಂತರ ಸುಮಾರು 3 ಗಂಟೆಗಳ ಕಾಲ ಜಿಲ್ಲಾ ಮಟ್ಟದ ಅಧಿಕಾರಿ ಅವರವರ ಇಲಾಖೆಯ ವಿವಿಧ ಕಾರ್ಯಕ್ರಮ, ಅವುಗಳನ್ನು ಪಡೆಯುವ ಬಗ್ಗೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕೆಲವು ಗ್ರಾಮಸ್ಥರು ನಮಗೆ ಇಲ್ಲಿನ ಅಧಿಕಾರಿ ವರ್ಗ ಯಾವುದೇ ಯೋಜನೆಯ ಮಾಹಿತಿ ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕರ ಹಲವಾರು ಸಮಸ್ಯೆ ಆಲಿಸಿದ ನಂತರ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಗ್ರಾಮೀಣ ಭಾಗದ ಈ ಜನಸಂಪರ್ಕ ಸಭೆಗೆ ನೀವೆಲ್ಲರೂ ಆಗಮಿಸಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಸ್ಪಂದಿಸಿರುವುದು ಸಂತಸ ತಂದಿದೆ. ಜನಸಂಪರ್ಕ ಸಭೆಯ ಮೂಲ ಉದ್ದೇಶವನ್ನು ನೀವೆಲ್ಲರೂ ಸೇರಿ ಈಡೇರಿಸಿದ್ದೀರಿ. ನೀವು ಸರ್ಕಾರದಿಂದ ಹಲವಾರು ನಿರೀಕ್ಷೆ ಇಟ್ಟುಕೊಂಡಿರುತ್ತೀರಿ. ಸರ್ಕಾರ ಕಲ್ಪಿಸುವ ಸೌಲಭ್ಯ ಪಡೆಯುವ ಕಾತರ ನಿಮ್ಮಲ್ಲಿರುತ್ತದೆ. ಆದರೆ, ಅವುಗಳನ್ನು ಪಡೆಯುವ ಚಿಂತನೆ ನಿಮ್ಮನ್ನು ಕಾಡುತ್ತದೆ.
ಆದ್ದರಿಂದ ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಆಡಳಿತದಲ್ಲಿ ಅನೇಕ ಬದಲಾವಣೆ ತಂದಿದೆ ಎಂದರು. ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ವಿವಿಧ ಯೋಜನೆಯಡಿ ಮಂಜೂರಾದ ಮಂಜೂರಾತಿ ಪತ್ರ, ಕಾರ್ಮಿಕ ಇಲಾಖೆಯ ಕಾರ್ಡ್‌ಗಳನ್ನು ಸಹ ವಿತರಿಸಿದರು. ಓಬಳಾಪುರ ಗ್ರಾಮದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಮ್ಯಾರಾಥಾನ್ 5 ಮತ್ತು 10 ಸಾವಿರ ಓಟದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಗ್ರಾಮದ ಕ್ರೀಡಾಪಟು ನಾಗರಾಜ, ಜೈನ ಸಾಹಿತ್ಯಕ್ಕೆ ಪಂಪನ ಕೊಡುಗೆ ವಿಷಯದಲ್ಲಿ ಕನ್ನಡದಲ್ಲೇ ಮಹಾಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದ ಗ್ರಾಮದ ಹನುಮಂತರೆಡ್ಡಿಯನ್ನು ಸಹ ಜಿಲ್ಲಾಧಿಕಾರಿಗಳು ಅಭಿನಂದಿಸಿ ಸನ್ಮಾನಿಸಿದರು.
ಜಿಪಂ ಸಿಇಒ ಸತ್ಯಭಾಮ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಡೆಯುವ ಹಲವಾರು ಸರ್ಕಾರ ಯೋಜನೆಗಳಲ್ಲಿ ಪಾರದರ್ಶಕತೆ ಕಾಣಬೇಕಿದೆ. ಯಾವುದೇ ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳು ಲೋಪವೆಸಗಿದಲ್ಲಿ ಅದರ ಬಗ್ಗೆ ಮಾಹಿತಿ ನೀಡಿದರೆ ಸರಿಪಡಿಸಲಾಗುವುದು. ಇಂದು ಜಿಲ್ಲಾಡಳಿತವೇ ನಿಮ್ಮ ಗ್ರಾಮಕ್ಕೆ ಬಂದು ನಿಮ್ಮ ಮುಂದೆ ನಿಂತು ನಿಮ್ಮ ಸಮಸ್ಯೆಗಳಿಗೆ ಸಾಧ್ಯವಾಷ್ಟು ಮಟ್ಟಿಗೆ ಪರಿಹಾರವನ್ನು ಒದಗಿಸಿದೆ ಎಂದರು.
ಪಶು ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಪ್ಪ ಮಾಹಿತಿ ನೀಡುವ ಸಂದರ್ಭದಲ್ಲಿ ಗ್ರಾಮದ ಪಶುಸಂಗೋಪನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಗ್ರಾಮಕ್ಕೆ ಬರದೆ ಮೂರನೇ ವ್ಯಕ್ತಿಯಿಂದ ಜಾನುವಾರುಗಳಿಗೆ ಚಿಕಿತ್ಸೆ ಕೊಡುತ್ತಾನೆಂದು ಆರೋಪಿಸಿ ಹಲವಾರು ಜನರು ಈ ಬಗ್ಗೆ ವಾಗ್ವಾದಕ್ಕೆ ಇಳಿದಾಗ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಮುಂಬರುವ ದಿನಗಳಲ್ಲಿ ಈ ಅಧಿಕಾರಿ ನಿಗದಿಪಡಿಸಿದ ಕೇಂದ್ರದಲ್ಲೇ ಕಾರ್ಯನಿರ್ವಹಿಸಬೇಕು.
ಸದರಿ ಕೇಂದ್ರದಲ್ಲಿ ಬಯೋಮೆಟ್ರಿಕ್ ಅಳವಡಿಸಿ ಅಧಿಕಾರಿಯ ಹಾಜರಾತಿ ಸರಿಪಡಿಸುವುದಾಗಿ ಹೇಳಿದರು.
ಕಾರ್ಮಿಕ ಇಲಾಖೆ ಜಿಲ್ಲಾ ಉಪ ನಿರ್ದೇಶಕ ವಿನುತಾ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಕೆಲವು ಗ್ರಾಮಸ್ಥರು ಆಕ್ಷೇಪ ವೆತ್ತಿ ನಮಗೆ ಈ ಬಗ್ಗೆ ಮಾಹಿತಿ ಇದುವರೆಗೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಅಂಗವಿಕಲ ಅಧಿಕಾರಿ ವೈಶಾಲಿ, ಎಸ್ಟಿ ನಿಮಗದ ಅಧಿಕಾರಿ ರಾಜು, ತೋಟಗಾರಿಕೆ ಇಲಾಖೆ ಅಧಿಕಾರಿ ಸವಿತಾ, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಸುಧಾ, ಬಿಸಿಎಂ ಅಧಿಕಾರಿ ಅವಿನ್, ಡಿಡಿಪಿಐ ರವಿಶಂಕರರೆಡ್ಡಿ ಇಲಾಖೆ ಮಾಹಿತಿ ನೀಡಿದರು.
ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ತಾಪಂ ಇಒ ಶ್ರೀಧರ್ ಬಾರಿಕೇರ್, ಡಿವೈಎಸ್ಪಿ ಎಸ್.ರೋಷನ್ ಜಮೀರ್, ವೃತ್ತ ನಿರೀಕ್ಷಕ ಈ.ಆನಂದ, ತಾಪಂ ಸದಸ್ಯೆ ಸಾಕಮ್ಮ, ಗ್ರಾಪಂ ಅಧ್ಯಕ್ಷೆ ಸುವಿತ್ರಮ್ಮ, ಸದಸ್ಯ ಲಕ್ಷ್ಮಕ್ಕ, ತಾಪಂ ಸದಸ್ಯ ತಿಮ್ಮಾರೆಡ್ಡಿ, ಕಂದಾಯಾಧಿಕಾರಿ ಮಹಮ್ಮದ್ ರಫೀ, ಗ್ರಾಪಂ ಸದಸ್ಯರು ಜನಸ್ಪಂದನಾ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.