ನಗರಸಭೆಯಿಂದ ಶಿಥಿಲ ಮಳಿಗೆಗಳಿಗೆ ಬೀಗಮುದ್ರೆ

Team Udayavani, Nov 10, 2019, 4:55 PM IST

10-November-29

ಚಳ್ಳಕೆರೆ: ನಗರದ ಚಿತ್ರದುರ್ಗ ರಸ್ತೆ ಮತ್ತು ಖಾಸಗಿ ಬಸ್‌ ನಿಲ್ದಾಣದ ಬಳಿ ನಗರಸಭೆಯ ಒಟ್ಟು ಏಳು ಮಳಿಗೆಗಳು ಶಿಥಿಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಸ್ಥಿತಿಯಲ್ಲಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಶಿಫಾರಸು ಪರಿಗಣಿಸಿ ಶನಿವಾರ ಮಳಿಗೆಗಳ ಮಾಲೀಕರಿಗೆ ಮಾಹಿತಿ ನೀಡಿ ಮಳಿಗೆಗಳನ್ನು ಖಾಲಿ ಮಾಡಿಸಿ ಬೀಗ ಹಾಕಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ತಿಳಿಸಿದರು.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳ ಹಿಂದೆಯೇ ಸಂಬಂಧಪಟ್ಟ ಮಳಿಗೆಗಳ ಮಾಲೀಕರಿಗೆ ಮಾಹಿತಿ ನೀಡಿದ್ದರೂ ಮಳಿಗೆಗಳನ್ನು ತೆರವುಗೊಳಿಸಲಿಲ್ಲ. ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ರವರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸ್ಪಷ್ಟವಾಗಿ ವರದಿ ನೀಡಿದ್ದು, ಏಳು ಮಳಿಗೆಗಳು ಯಾವ ಸಮಯದಲ್ಲಾದರೂ ಕುಸಿಯುವ ಸಂದರ್ಭವಿದೆ ಎಂದಿದ್ದಾರೆ. ಚಳ್ಳಕೆರೆ ನಗರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕೆಲವೆಡೆ ಗುಡಿಸಲುಗಳಿಗೆ ನೀರು ನುಗ್ಗಿದ್ದರೆ, ಕೆಲವೆಡೆ ಮಳಿಗೆಗಳು ಕುಸಿಯುವ ಹಂತ ತಲುಪಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಕಂದಾಯಾಧಿಕಾರಿ ವಿ. ಈರಮ್ಮ, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ ಮತ್ತು ಸಿಬ್ಬಂದಿ ವರ್ಗ ಸ್ಥಳಕ್ಕೆ ತೆರಳಿ ಮಳಿಗೆಯಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿ ಬೀಗ ಹಾಕಿಸಿದ್ದಾರೆ ಎಂದರು.

ಮಳಿಗೆಗಳಿರುವ ರಸ್ತೆಯಲ್ಲಿ ಸದಾ ಕಾಲ ಸಾರ್ವಜನಿಕರು ಹಾಗೂ ವಾಹನಗಳು ನಿರಂತರವಾಗಿ ಓಡಾಡುತ್ತಿದ್ದು, ಮಳಿಗೆ ಕುಸಿದು ಬಿದ್ದರೆ ಪ್ರಾಣಾಪಾಯವಾಗುವ ಸಂದರ್ಭವಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಗದಲ್ಲಿ ನಾಮಫಲಕವನ್ನೂ ಹಾಕಲಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಹಲವಾರು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದೆ. ಸಾರ್ವಜನಿಕರು ನಗರಸಭೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ಮಳಿಗೆ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಅವರು ನ್ಯಾಯಾಲಯದ ಮೆಟ್ಟಿಲೇರಿ ಕಟ್ಟಡವನ್ನು ಕೆಡವದಂತೆ ಆದೇಶ ತಂದಿದ್ದಾರೆ. ಹಾಗಾಗಿ ಸಾರ್ವಜನಿಕರ ಪ್ರಾಣ ರಕ್ಷಣೆಗೋಸ್ಕರ ನಗರಸಭೆ ಆಡಳಿತ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಕಟ್ಟಡವನ್ನು ಕೆಡವದೆ ಮಳಿಗೆಯಲ್ಲಿರುವ ವಸ್ತುಗಳನ್ನು ಹೊರಗಿಟ್ಟು ಮಳಿಗೆಗೆ ಬೀಗ ಹಾಕಿಸಿದೆ.

ಮಳಿಗೆ ಬಳಿ ಯಾರೂ ಓಡಾಡದಂತೆ ನಾಮಫಲಕವನ್ನೂ ಹಾಕಲಾಗಿದೆ ಎಂದರು. ಕಳೆದ ಕೆಲವು ವರ್ಷಗಳಿಂದ ಮಳಿಗೆ ಬಾಡಿಗೆದಾರರು ಹಾಗೂ ನಗರಸಭೆ ಮಧ್ಯೆ ಕಟ್ಟಡ ತೆರವುಗೊಳಿಸುವ ಬಗ್ಗೆ ತಿಕ್ಕಾಟ ನಡೆಯುತ್ತಿತ್ತು. ನಗರಸಭೆಯ ಆಡಳಿತ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಕೆಲವು ವರ್ಷಗಳ ಕಾಲ ಬಾಡಿಗೆದಾರರಿಗೆ ಅವಕಾಶ ಕಲ್ಪಿಸಿತ್ತು. ಆದರೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ರವರು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡ ಬಗ್ಗೆ ವರದಿ ನೀಡಿದ್ದರು. ಆ ವರದಿ ಅನ್ವಯ ನಗರಸಭೆ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.