ಹೆದ್ದಾರಿಗಳಲ್ಲಿನ ಅಪಘಾತ ತಡೆಗೆ ಕ್ರಮ: ತಿಮ್ಮಣ್ಣ

ಸಂಜೆಯಿಂದ ಬೆಳಗಿನ ಜಾವದ ಸಮಯದಲ್ಲೇ ಹೆಚ್ಚು ಅಪಘಾತ

Team Udayavani, May 31, 2019, 12:45 PM IST

1-June-17

ಚಳ್ಳಕೆರೆ: ತಾಲ್ಲೂಕಿನ ರಾಜ್ಯ ಹೆದ್ದಾರಿ ಹಾದುಹೋಗುವ ರಸ್ತೆಗಳಲ್ಲಿ ನಾಮಫಲಕ ಅಳವಡಿಕೆಯ ಬಗ್ಗೆ ಪ್ರಾಧಿಕಾರದ ಇಂಜಿನಿಯರ್‌ ಪ್ರವೀಣ್‌ಕುಮಾರ್‌, ವೃತ್ತ ನಿರೀಕ್ಷಕ ಎನ್‌.ತಿಮ್ಮಣ್ಣ ಪರಿಶೀಲಿಸಿದರು.

ಚಳ್ಳಕೆರೆ: ಹೆಗ್ಗೆರೆ ಗ್ರಾಮದ ಕ್ರಾಸ್‌ನಿಂದ ತಳಕು ಠಾಣಾ ವ್ಯಾಪ್ತಿಯ ಗರಣಿ ಕ್ರಾಸ್‌ವರೆಗಿನ ಅಪಘಾತ ವಲಯಗಳನ್ನು ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗುರುತಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೃತ್ತ ನಿರೀಕ್ಷಕ ಎನ್‌. ತಿಮ್ಮಣ್ಣ, ತಾಲೂಕಿನ ವೃತ್ತ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಪಘಾತಗಳು ಹಾಗೂ ದುರ್ಮರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕಾಯೋನ್ಮುಖವಾಗಿದೆ. ಪ್ರಸ್ತುತ ಶ್ರೀರಂಗಪಟ್ಟಣ-ಬೀದರ್‌ನ ರಾಷ್ಟ್ರೀಯ, ರಾಜ್ಯ ಹೆದ್ದಾರಿ 150(ಎ)ವ್ಯಾಪ್ತಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆ ಸನ್ನದ್ಧವಾಗಿದೆ ಎಂದರು.

ಕಳೆದ ವರ್ಷ ನಡೆದ ಅಪಘಾತಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಡಾ| ಕೆ.ಅರುಣ್‌, ಹೆಚ್ಚುವರಿ ರಕ್ಷಣಾಧಿಕಾರಿ ಮಹಾಲಿಂಗ ನಂದಗಾವಿ ಮಾರ್ಗದರ್ಶನದಲ್ಲಿ ಉಪವಿಭಾಗದ ಡಿವೈಎಸ್ಪಿಯವರ ನೇತೃತ್ವದಲ್ಲಿ ಅಪಘಾತ ನಡೆಯುವ ಸ್ಥಳಗಳನ್ನು ಗುರುತಿಸಿ ಅವುಗಳ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಕಾಯೋನ್ಮುಖವಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ನಡೆಯುವ ಅಪಘಾತಗಳನ್ನು ನಿಯಂತ್ರಣಗೊಳಿಸಲು ಹೆಚ್ಚು ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಪ್ರತಿವರ್ಷ ಸರಾಸರಿ ಈ ಭಾಗದಲ್ಲಿ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ ಭೀಕರ ರಸ್ತೆ ಅಪಘಾತ ಹಾಗೂ ಲಘು ವಾಹನಗಳ ಡಿಕ್ಕಿಯೂ ಸೇರಿದ್ದು ನೂರಾರು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. 500ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿ ಚಿಕಿತ್ಸೆ ಪಡೆದಿರುತ್ತಾರೆ. ಹೆಚ್ಚಿನ ಅಪಘಾತಗಳು ಸಂಜೆಯಿಂದ ಬೆಳಗಿನ ಜಾವದ ತನಕ ನಡೆಯುತ್ತಿದ್ದು ಹಗಲು ವೇಳೆಯಲ್ಲಿ ಮಾತ್ರ ಹೆಚ್ಚಿನ ಅಪಘಾತಗಳು ಕಂಡು ಬಂದಿಲ್ಲ ಎಂದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪ್ರಾದೇಶಿಯ ವ್ಯವಸ್ಥಾಪಕರಿಗೆ ಪತ್ರ ಬರೆದು ಅಪಘಾತಗಳ ನಿಯಂತ್ರಣ ಕುರಿತು ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು ಎಂದರು.

ಹೆಗ್ಗೆರೆ ಗೇಟ್, ಸಾಣೀಕೆರೆ, ಗೋಪನಹಳ್ಳಿ ಕ್ರಾಸ್‌, ಹೊಟ್ಟೆಪ್ಪನಹಳ್ಳಿ ಕ್ರಾಸ್‌, ಲಕ್ಷ್ಮೀ ಪುರ ಗೇಟ್, ನಗರಂಗೆರೆ ಗೇಟ್, ಬಳ್ಳಾರಿ ರಸ್ತೆ ಚಳ್ಳಕೆರೆಯಮ್ಮ ದೇವಸ್ಥಾನ ಸೇತುವೆ, ನಾಯಕನಹಟ್ಟಿ ಕ್ರಾಸ್‌, ಬುಡ್ನಹಟ್ಟಿ ಬಸ್‌ ನಿಲ್ದಾಣ, ಚಿಕ್ಕಮ್ಮನಹಳ್ಳಿ ಬಸ್‌ ನಿಲ್ದಾಣ, ಗಿರಿಯಮ್ಮನಹಳ್ಳಿ ಬಸ್‌ ನಿಲ್ದಾಣ, ತಳಕು, ನಾಯಕನಹಟ್ಟಿ, ಪರಶುರಾಂಪುರ ವ್ಯಾಪ್ತಿಯ ಅಪಘಾತ ಸ್ಥಳಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಕೆಲವೆಡೆ ಬಿಳಿ ಬಣ್ಣದ ಎಚ್ಚರಿಕೆ ಮಾಹಿತಿ ಫಲಕ ಹಾಗೂ ರಿಫ್ಲೆಕ್ಟಿಂಗ್‌ ಲೈಟ್, ಮಿರರ್‌, ಹಂಪ್ಸ್‌ ನಾಮಫಲಕ ಅಳವಡಿಸುವ ಬಗ್ಗೆ ಮುಕ್ತವಾಗಿ ಚರ್ಚಿಸಿ ಈ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡಿ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಚಳ್ಳಕೆರೆ ವೃತ್ತ ವ್ಯಾಪ್ತಿಯಲ್ಲಿ ನಡೆಯುವ ಅಪಘಾತಗಳು ನಿಯಂತ್ರಣಗೊಂಡಲ್ಲಿ ನೂರಾರು ಜನರ ಪ್ರಾಣವನ್ನು ರಕ್ಷಣೆ ಮಾಡಿದಂತಾಗುತ್ತದೆ. ವಿಶೇಷವಾಗಿ ಸಂಜೆಯಿಂದ ಬೆಳಗಿನ ತನಕ ಒಮ್ಮೆಮ್ಮೆ ಒಂದೇ ರಾತ್ರಿಯಲ್ಲಿ ಎರಡ್ಮೂರು ಅಪಘಾತಗಳು ನಿರಂತರವಾಗಿ ನಡೆದು ಹಲವರು ಪ್ರಾಣ ಕಳೆದುಕೊಂಡ ಉದಾಹರಣೆಗಳು ಹಲವಾರು ಇವೆ. ರಾತ್ರಿವೇಳೆ ಸಂಚರಿಸುವ ವಾಹನಗಳಿಗೆ ರಿಪ್ಲೆಕ್ಟರ್‌ ಲೈಟ್ ಹಾಗೂ ಮಿರರ್‌ ಕಂಡು ಬಂದಲ್ಲಿ ವಾಹನದ ವೇಗವನ್ನು ನಿಯಂತ್ರಿಸಿ ಅಪಘಾತಗಳನ್ನು ತಪ್ಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ವಾಹನ ಚಾಲಕರು ಹಾಗೂ ಸಾರ್ವಜನಿಕರು ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕು.
ಎನ್‌.ತಿಮ್ಮಣ್ಣ, ವೃತ್ತ ನಿರೀಕ್ಷಕ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.