ಜನರ ಸಮಸ್ಯೆ ಪರಿಹಾರಕ್ಕೆ “ಹಿತೈಷಿ’ ಸಹಕಾರಿ

ನಗರಸಭೆಗೆ ಆಗಮಿಸುವ ಸಾರ್ವಜನಿಕರೊಂದಿಗೆ ಗೌರವದಿಂದ ವರ್ತಿಸಿ: ವಿನೋತ್‌ ಪ್ರಿಯಾ

Team Udayavani, Dec 14, 2019, 1:02 PM IST

14-December-11

ಚಳ್ಳಕೆರೆ: ನಗರಸಭೆ ಸಾರ್ವಜನಿಕರ ಎಲ್ಲ ರೀತಿಯ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರ ನೂತನವಾಗಿ “ಹಿತೈಷಿ’ ಆ್ಯಪ್‌ ಜಾರಿಗೊಳಿಸಿದ್ದು, ನಾಗರಿಕರು ಅವಶ್ಯವಿರುವ ಸಮಸ್ಯೆಗಳನ್ನು ಹಿತೈಷಿ ಆ್ಯಪ್‌ನಲ್ಲಿ ಆಪ್‌ಲೋಡ್‌ ಮಾಡಿದಲ್ಲಿ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಭರವಸೆ ನೀಡಿದರು.

ಇಲ್ಲಿನ ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕಚೇರಿ ವಿವಿಧ ಸಿಬ್ಬಂದಿ ಜತೆಗೆ ಪ್ರಗತಿ ಮಾಹಿತಿ ಪಡೆದುಕೊಂಡರು. ನಗರಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಕಾನೂನು ನಿಯಮದಡಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿವಿಧ ಕಾರ್ಯಗಳಿಗಾಗಿ ನಗರಸಭೆಗೆ ಆಗಮಿಸುವ ಎಲ್ಲ ನಾಗರಿಕರಿಗೆ ಸಿಬ್ಬಂದಿ ಗೌರವ ನೀಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ನಗರಸಭೆ ಆಡಳಿತ ಮೇಲೆ ಬೇಸರಪಟ್ಟುಕೊಳ್ಳದಂತಹ ವಾತಾವರಣ ನಿರ್ಮಿಸಬೇಕು ಎಂದರು.

ನಗರಸಭಾ ಸದಸ್ಯರಾದ ಎಸ್‌.ಜಯಣ್ಣ, ಆರ್‌.ರುದ್ರನಾಯಕ, ರಮೇಶ್‌ಗೌಡ, ಹೊಯ್ಸಳ ಗೋವಿಂದ, ಎಚ್‌.ಪ್ರಶಾಂತ್‌ಕುಮಾರ್‌, ಟಿ.ವೀರಭದ್ರಪ್ಪ, ಮಹಿಳಾ ಸದಸ್ಯರಾದ ಕವಿತಾ ಬೋರಣ್ಣ, ಸುಮಾ ಭರಮಣ್ಣ, ನಿರ್ಮಲ, ಸಾಕಮ್ಮ, ಎಂ.ನಾಗವೇಣಿ, ತಿಪ್ಪಮ್ಮ, ಆರ್‌.ಮಂಜುಳಾ, ಟಿ.ಮಲ್ಲಿಕಾರ್ಜುನ, ಸುಜಾತಾ ಪಾಲಯ್ಯ ಮುಂತಾದವರು ನಗರದ ಸ್ವತ್ಛತೆಯ ಬಗ್ಗೆ ನಗರಸಭೆ ಆಡಳಿತ ಗಮನಹರಿಸುತ್ತಿಲ್ಲ. ನಗರದ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ತುಂಬಿ ಚರಂಡಿ ಗಲೀಜು ನೀರು ರಸ್ತೆಯ ಮೇಲೆ ಹರಿದು ದುರ್ವಾಸನೆಯಾಗುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರಸ್ತುತ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ನೌಕರರ ಸಂಖ್ಯೆ ಕಡಿಮೆ ಇದ್ದು, ಒಂದೇ ಹಂತದಲ್ಲಿ ಎಲ್ಲ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ. ಹೆಚ್ಚಿನ ಪೌರ ಕಾರ್ಮಿಕರ ಅವಶ್ಯಕತೆ ಇದ್ದು, ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಬಳ್ಳಾರಿ ರಸ್ತೆಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಕಸ ಸಂಸ್ಕರಣಾ ಘಟಕ ಸ್ಥಾಪಿಸುವ ಹಿನ್ನೆಲೆಯಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಟೆಂಡರ್‌ ಕಾರ್ಯನಿರ್ವಹಿಸಲಾಗುತ್ತಿದ್ದು, ಅಲ್ಲಿನ ಕಾಮಗಾರಿಗಳ ಗುಣಮಟ್ಟ ಹಾಗೂ ವಾಸ್ತುಸ್ಥಿತಿ ಅರಿಯಲು ಜಿಲ್ಲಾಧಿಕಾರಿಗಳು ಕಸ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪ್ರಭಾರಿ ಪೌರಾಯುಕ್ತ ಪಿ.ಪಾಲಯ್ಯ, ಎಇಇ ಜೆ.ಶ್ಯಾಮಲ, ವಿನಯ್‌, ನೈರ್ಮಲ್ಯ ಇಂಜಿನಿಯರ್‌ ಫಿರೋಜ್‌, ಸಹಾಯಕ ಇಂಜಿನಿಯರ್‌ ಲೋಕೇಶ್‌, ಹಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಮುಂತಾದವರು ಜಿಲ್ಲಾ ಧಿಕಾರಿಗೆ ಘಟಕದ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.

2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಸ ಸಂಸ್ಕರಣಾ ಘಟಕ ಕಾಮಗಾರಿ ಉತ್ತಮ ಮಟ್ಟದಲ್ಲಿರಬೇಕು. ಸಂಬಂಧಪಟ್ಟ ಅಧಿಕಾರಿಗಳು ಪ್ರತಿಯೊಂದು ಹಂತದಲ್ಲೂ ಕಾಮಗಾರಿಯ ಪರಿಶೀಲಿಸಬೇಕು. ಕಾಮಗಾರಿಗೆ ಪ್ರಗತಿಯ ಬಗ್ಗೆ ಪೌರಾಯುಕ್ತರು ಹೆಚ್ಚು ಗಮನಿಸಬೇಕು ಎಂದು ಡಿಸಿ ತಿಳಿಸಿದರು.

ಚಿತ್ರಯ್ಯನಹಟ್ಟಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು. ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ, ಹಾಜರಾತಿ, ಮಕ್ಕಳ ಲಸಿಕಾ ಕಾರ್ಡ್‌, ತಾಯಿ ಕಾರ್ಡ್‌ ಮುಂತಾದ ದಾಖಲೆ ಪರಿಶೀಲಿಸಿದರು. ಮಕ್ಕಳ ಲಸಿಕಾ ಕಾರ್ಡ್‌ ವಿವರಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಕಾರ್ಡ್‌ 6 ತಿಂಗಳಿನಿಂದ 6 ವರ್ಷದ ತನಕ ಯಾವ ಯಾವ ಲಸಿಕೆ ಹಾಕಿಸಬೇಕೆಂಬ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಂಗನವಾಡಿ ಶಿಕ್ಷಕಿಯವರು ಗಮನ ಹರಿಸಬೇಕು.

ಯಾವುದೇ ಮಗು ಈ ಸಂದರ್ಭದಲ್ಲಿ ಗೈರು ಹಾಜರಾಗಿದ್ದಲ್ಲಿ ಅಂತಹವರನ್ನು ಹುಡುಕಿ ಲಸಿಕೆ ಹಾಕಿಸಿ ಕಾರ್ಡ್‌ನಲ್ಲಿ ನಮೂದಿಸಬೇಕು ಎಂದರು. ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ, ಸಿಡಿಪಿಒ ಸಿ.ಕೆ. ಗಿರಿಜಾಂಬ, ಪ್ರಭಾರಿ ಕಂದಾಯ ನಿರೀಕ್ಷಕ ರಾಜೇಶ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

banner

Maharastra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

banner

Maharastra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.