ಸತ್ತೇಗಾಲ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ
Team Udayavani, Apr 11, 2024, 9:06 PM IST
ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1.58 ಕೋಟಿ ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
ಸತ್ತೇಗಾಲ ಚೆಕ್ಪೋಸ್ಟ್ನಲ್ಲಿ ಬೆಳಿಗ್ಗೆ 10.45 ರ ಸಮಯದಲ್ಲಿ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಕೆಎ-17 ಜಡ್-9447 ಸಂಖ್ಯೆಯ ಹುಂಡೈ ವೆನ್ಯೂ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡುತ್ತಿದ್ದ ಕಾರ್ತಿಕ್ ಮತ್ತು ಚಿರಂತ್ ಎಂಬುವವರಿಂದ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿ ಎಂ. ರವಿಶಂಕರ್ ಅವರು ಜಪ್ತಿ ಮಾಡಿದ್ದಾರೆ.
ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದಾಯ ತೆರಿಗೆ ಇಲಾಖೆಯ ಅನ್ವೇಷಣೆ ವಿಭಾಗದ ಸಹಾಯಕ ನಿರ್ದೇಶಕ ಆರ್. ರಂಗನಾಥ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ಜಿ. ರಘು, ಜಿ. ದಿವಾಕರ್ ಅವರಿಂದ ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಇದನ್ನೂ ಓದಿ: Hindi,ಹಿಂದುತ್ವ, ಹಿಂದೂಸ್ಥಾನ’ ಪ್ರಾಬಲ್ಯ ಬಹುವಚನ ಪ್ರಜ್ಞೆಗೆ ಅಪಾಯಕಾರಿ: ತರೂರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.