ಶಾಲೆಗೆ ಹೋಗಲು ನಿತ್ಯ 10 ಕಿ.ಮೀ. ನಡೆಯಲೇಬೇಕು!


Team Udayavani, Feb 6, 2020, 3:00 AM IST

SHALEGE

ಹನೂರು: ಶಾಲೆಗೆ ಹೋಗಬೇಕಾದರೆ ಪ್ರತಿದಿನ 10 ಕಿ.ಮೀ. ನಡೆಯಲೇಬೇಕು, ಅದು ಕೂಡ ಕಲ್ಲು, ಮುಳ್ಳು, ಗುಂಡಿಗಳಿರುವ ಕಡಿದಾದ ಹಾದಿಯಲ್ಲಿ ಸಂಚರಿಸಬೇಕು, ಇದರ ಮಧ್ಯೆ ಕಾಡುಪ್ರಾಣಿಗಳ ಭೀತಿ ಕೂಡ ಇದೆ, ಕನಿಷ್ಠ ಏನಿಲ್ಲವೆಂದರೂ ಎರಡೂವರೆ ಗಂಟೆ ಸಮಯವನ್ನು ನಡೆಯಲು ಮೀಸಲಿಡಬೇಕಿದೆ, ನಿತ್ಯ 10 ಕಿ.ಮೀ. ನಡೆದು ದಣಿದು ಮೈ ಕೈ ನೋಯಿಸಿಕೊಂಡು ವಿದ್ಯಾರ್ಥಿಗಳು ಬಸವಳಿದಿರುತ್ತಾರೆ…

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿರುವ ಸುರೇಶ್‌ ಕುಮಾರ್‌ ಉಸ್ತುವಾರಿ ಹೊಣೆ ಹೊತ್ತಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಕಂಡು ಬರುವ ದಾರುಣ ದೃಶ್ಯಗಳು ಇವು. ಆಧುಕಿನ ಯುಗದಲ್ಲಿ ಇಂತಹ ಪರಿಸ್ಥಿತಿ ಇರುವುದು ಶೋಚನೀಯ.

ಶಿಕ್ಷಣಕ್ಕಾಗಿ ಇಲ್ಲಿನ ಮಕ್ಕಳು ಪಡಬಾರದ ಕಷ್ಟು ಅನುಭವಿಸುತ್ತಿರುವುದನ್ನು ನೋಡಿದರೆ ಕಣ್ಣಾಲಿಗಳು ತುಂಬಿಕೊಳ್ಳುತ್ತವೆ. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರತಿ ವರ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿದ್ದರೂ ಇಲ್ಲಿನ ಮಕ್ಕಳಿಗೆ ಮಾತ್ರ ಹಿಂಸೆ ತಪ್ಪಿಲ್ಲ.

5ನೇ ತರಗತಿಗೆ ಸೀಮಿತ: ಹನೂರು ತಾಲೂಕಿನ ಪಚ್ಚೆದೊಡ್ಡಿ ಕಾಡಂಚಿನ ಗ್ರಾಮವಾಗಿದ್ದು, ಇಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, 200ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಮಾತ್ರ ಶಿಕ್ಷಣ ನೀಡುತ್ತಿದ್ದು, 5ನೇ ತರಗತಿ ಮುಗಿದ ಬಳಿಕ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ಸುಮಾರು 5 ಕಿ.ಮೀ. ದೂರವಿರುವ ಅಜ್ಜೀಪುರ ಗ್ರಾಮಕ್ಕೆ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿ ಇದೆ.

ನಿತ್ಯ 10 ಕಿ.ಮೀ. ಸಂಚಾರ: ಪಚ್ಚೆದೊಡ್ಡಿ ಗ್ರಾಮದಿಂದ ಅಜ್ಜೀಪುರ ಗ್ರಾಮದ ಪ್ರೌಢಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ಪ್ರತಿದಿನ 10 ಕಿ.ಮೀ. ನಡೆದುಕೊಂಡು ಬರಬೇಕಿದೆ. ಬೆಳಗ್ಗೆ ಮನೆಯಿಂದ ಹೊರಟು ಶಾಲೆ ತಲುಪುವ ವೇಳೆಗೆ ನಡೆದು ದಣಿದು ಮೈ ಕೈ ನೋಯಿಸಿಕೊಂಡು ವಿದ್ಯಾರ್ಥಿಗಳು ಬಸವಳಿದಿರುತ್ತಾರೆ.

ಇನ್ನು ಸಂಜೆ ಮನೆಗೆ ಹಿಂದಿರುಗುವಾಗಲು 5 ಕಿ.ಮೀ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಿರುವಾಗ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಆಯಾಸಪಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇನ್ನುಳಿದ ಸಮಯವನ್ನು ಓದಲು ಮೀಸಲಿಡಬೇಕಾಗಿದೆ. ಈ ಯಾತನ ತಾಳಲಾದರೇ ಕೆಲವರು ಶಿಕ್ಷಣವನ್ನೇ ಮೊಟುಕುಗೊಳಿಸಿದ್ದಾರೆ.

ಸಂಜೆ ಕಾಡುಪ್ರಾಣಿಗಳ ಕಾಟ: ಪಚ್ಚೆದೊಡ್ಡಿ ಅರಣ್ಯದಂಚಿನ ಗ್ರಾಮವಾಗಿದ್ದು, ಈ ಮಾರ್ಗದಲ್ಲಿ ಕಾಡಾನೆ, ಕಾಡುಹಂದಿಯಂತಹ ಪ್ರಾಣಿಗಳು ಹೆಚ್ಚಾಗಿ ಓಡಾಡುತ್ತಲೇ ಇರುತ್ತವೆ. ಅಲ್ಲದೇ ಸಂಜೆ ವೇಳೆ ಕಾಡಾನೆಗಳು ರಸ್ತೆಯ ಬದಿಯಲ್ಲಿಯೇ ಓಡಾಡುತ್ತಿದ್ದು, ಒಮ್ಮೆ ರೈತನೋರ್ವನನ್ನು ಸಂಜೆ 6 ಗಂಟೆ ವೇಳೆಗೆ ದಾಳಿ ನಡೆಸಿ ಕೊಂದಿರುವ ನಿದರ್ಶನಗಳು ಕೂಡ ಇವೆ.

ಇಂತಹ ರಸ್ತೆಯಲ್ಲಿ ವಿದ್ಯಾರ್ಥಿಗಳು ಸಂಜೆ ಮನೆಗಳಿಗೆ ಹಿಂದಿರುಗುವಾಗ ಪ್ರಾಣಭಯದಿಂದಲೇ ಸಂಚರಿಸಬೇಕಾದಂತಹ ಪರಿಸ್ಥಿತಿಯಿದೆ. ಅಲ್ಲದೇ ಕಾಡುಹಂದಿಗಳು ಈ ರಸ್ತೆಯಲ್ಲಿ ಹಿಂಡು ಹಿಂಡಾಗಿ ಸಂಚರಿಸುವುದು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಕೈಯಲ್ಲಿ ಪ್ರಾಣವನ್ನಿಟ್ಟುಕೊಂಡು ಕಡಿದಾದ ರಸ್ತೆಯಲ್ಲೇ ಶಾಲೆ ಹಾಗೂ ಮನೆಯನ್ನು ತಲುಪಬೇಕಾಗಿದೆ.

ಕಲ್ಲು-ಮುಳ್ಳುಗಳ ಹಾದಿ: ಇನ್ನು ಪಚ್ಚೆದೊಡ್ಡಿ ಅಜ್ಜೀಪುರ ಮಾರ್ಗದ ರಸ್ತೆಯು ತೀರಾ ಹದಗೆಟ್ಟಿದ್ದು, ಕಲ್ಲು-ಮುಳ್ಳುಗಳಿಂದ ಕೂಡಿರುವ ಕಡಿದಾದ ಹಾದಿಯಾಗಿದೆ. ಈ ಗ್ರಾಮವು ಅರಣ್ಯ ವ್ಯಾಪಿಗೆ ಒಳಪಟ್ಟಿರುವುದರಿಂದ ಸುಸಜ್ಜಿತ ಡಾಂಬರು ರಸ್ತೆಯನ್ನೂ ಸಹ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಮಾರ್ಗದಲ್ಲಿ ನಿರ್ಮಿಸಿರುವ ಮಣ್ಣಿನ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದಿದ್ದು, ಕಲ್ಲಿನ ರಾಶಿ ಬಿದ್ದಿವೆ. ಇದರಿಂದ ವಿದ್ಯಾರ್ಥಿಗಳು ಕಲ್ಲು ಮುಳ್ಳುನ ಹಾದಿಯಲ್ಲಿಯೇ ನಡೆದು ಸಾಗಬೇಕಾದ ಪರಿಸ್ಥಿತಿಯಿದೆ.

ನಿತ್ಯ 10 ಕಿ.ಮೀ. ಸಂಚಾರಕ್ಕೆ 3 ಗಂಟೆ ಬೇಕು: ಪಚ್ಚೆದೊಡ್ಡಿಯಿಂದ ವಿದ್ಯಾರ್ಥಿಗಳು ಅಜ್ಜೀಪುರ ಗ್ರಾಮದ ಶಾಲೆ ತಲುಪಲು 5 ಕಿ.ಮಿ. ಬೇಕಾಗುತ್ತದೆ. ಹೋಗಿ ಬರಲು ಸೇರಿ 10 ಕಿ.ಮೀ. ಸಂಚರಿಸಬೇಕಾಗಿದೆ. ಅದು ಕೂಡ ಕಡಿದಾದ ಹಾದಿಯಲ್ಲಿ ಸಂಚರಿಸಬೇಕಾಗಿದೆ. ಇಂತಹ ರಸ್ತೆಯಲ್ಲಿ 1 ಕಿ.ಮೀ. ಸಂಚರಿಸಲು ಕನಿಷ್ಠ 15 ನಿಮಿಷ ಬೇಕಾಗಲಿದೆ.

ಅಂದರೆ 10 ಕಿ.ಮೀ. ನಡೆಯಲು ಏನಿಲ್ಲವೆಂದರೂ 2.30 ರಿಂದ 3 ಗಂಟೆ ಸಮಯ ಹಿಡಿಯಲಿದೆ. ಕಲ್ಲು ಮುಳ್ಳುಗಳ ಹಾದಿಯಲ್ಲಿ ಓಡಾಡುವುದರಿಂದ ಭಾರೀ ಆಯಾಸ ಪಡೆಯಬೇಕಾಗುತ್ತದೆ. ಅದ ಕೂಡ ಕಾಡುಪ್ರಾಣಿಗಳ ಹಾವಳಿ ಇರುವುದರಿಂದ ಭಯಭೀತಿ ಕೂಡ ಇರುತ್ತದೆ ಎಂದು ವಿದ್ಯಾರ್ಥಿಗಳು ಅಲವತ್ತುಕೊಂಡಿದ್ದಾರೆ.

ಇದಕ್ಕೆ ಪರಿಹಾರ ಏನು?: ಪಚ್ಚೆದೊಡ್ಡಿ-ಅಜ್ಜೀಪುರ ಮಾರ್ಗವು ಕಲ್ಲು-ಮುಳ್ಳುಗಳಿಂದ ಕೂಡಿರುವ ಕಡಿದಾದ ಹಾದಿಯಾಗಿದೆ. ಈ ಗ್ರಾಮವು ಅರಣ್ಯ ವ್ಯಾಪಿಗೆ ಒಳಪಟ್ಟಿರುವುದರಿಂದ ಡಾಂಬರು ರಸ್ತೆಯನ್ನೂ ನಿರ್ಮಿಸಲು ಸಾಧ್ಯವಿಲ್ಲ ಎನ್ನಲಾಗುತ್ತದೆ. ಇದರ ಸಾಧಕ ಬಾಧಕಗಳನ್ನು ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿದೆ.

ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಗ್ರಾಮ ಹಾಗೂ ಶಾಲೆಯನ್ನು ತಲುಪಲು ಒಂದು ವಾಹನ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಇದೀಗ ಪರೀಕ್ಷಾ ಸಮಯ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಸಮಯಬೇಕಾಗಿರುವುದರಿಂದ ವಾಹನ ವ್ಯವಸ್ಥೆ ಒದಗಿಸಲು ಕ್ಷೇತ್ರದ ಶಾಸಕರು ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತುರ್ತಾಗಿ ಗಮನ ಹರಿಸಬೇಕಾಗಿದೆ.

* ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.