ಚಾಮರಾಜನಗರ ಸಾರಿಗೆಸಂಸ್ಥೆ ಗೆ 15 ಕೋಟಿ ರೂ.ಲಾಭ


Team Udayavani, Mar 8, 2020, 4:44 PM IST

cn-tdy-1

ಕೊಳ್ಳೇಗಾಲ: ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯು ಹೊಸ ಹೊಸ ಬಸ್‌ಗಳನ್ನು ಬಿಡಲಾಗಿದೆ. ಚಾಮರಾಜನಗರ ವಿಭಾಗದ ಸಾರಿಗೆ ಸಂಸ್ಥೆ 15 ಕೋಟಿ ರೂ. ಲಾಭ ಗಳಿಸಿದೆ. ಅಪಘಾತದಲ್ಲಿ ನೊಂದವರಿಗೆ 4 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಚಾಮರಾಜನಗರ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್‌ ಹೇಳಿದರು.

ಪಟ್ಟಣದ ರಸ್ತೆ ಸಾರಿಗೆ ಬಸ್‌ ಘಟಕದಲ್ಲಿ ರಸ್ತೆ ಸಾರಿಗೆ ಸಂಸ್ಥೆಯಿಂದ ಆಯೋಜಿಸಿದ್ದ ಬದುಕಿ- ಬದುಕಿಸಿ ರಸ್ತೆ ಸುರಕ್ಷತೆ ಜೀವದ ರಕ್ಷೆ ಎಂಬ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಾಲಕರು ನಿಷ್ಠೆ ಹಾಗೂ ಪ್ರಮಾಣಿಕತೆಯಿಂದ ಬಸ್‌ ಚಾಲನೆ ಮಾಡಿ, ಸಾರಿಗೆ ಸಂಸ್ಥೆಗೆ ಆದಾಯ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಕುಟುಂಬವನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೋಗಿ ಆರ್ಥಿಕವಾಗಿ ಸದೃಢಗಾಗಬೇಕು ಎಂದು ತಿಳಿಸಿದರು.

ವಾಹನ ಚಾಲನೆಯಲ್ಲಿ ಎಚ್ಚರವಿರಲಿ: ಸಾರಿಗೆ ಇಲಾಖೆಯ ಟಿ.ಎಂ.ಬಾಲಕೃಷ್ಣ ನೇತೃತ್ವದಲ್ಲಿ ಸಾರಿಗೆ ಇಲಾಖೆಯ ಕಲಾವಿದರಿಂದ ನಾಟಕ ಪ್ರದರ್ಶನ ನಡೆಯಿತು. ಡಿಪೋನಲ್ಲಿ ಬಸ್‌ ರಿಪೇರಿ ಮಾಡುವ ಸಮಯದಲ್ಲಿ ಗೊಂದಲ ಇಲ್ಲದೆ ನಿಶ್ಚಬ್ಧದಿಂದ ಕೆಲಸ ಮಾಡಬೇಕು. ಸಣ್ಣದೊಂದು ನೆಟ್‌ ಹಾಕದಿದ್ದರೂ ಬಸ್‌ ಅಪಘಾತವಾಗುತ್ತದೆ. ಬಸ್‌ ಚಾಲನೆ ಮಾಡುವಾಗ ಚಾಲಕರು ಮೊಬೈಲ್‌ ಬಳಕೆ ಮಾಡಿದರೆ ಅಪಘಾತವಾಗಿ ಸಾವುನೋವು ಉಂಟಾಗುತ್ತದೆ. ಮದ್ಯಸೇವನೆ ಮಾಡಿ ಚಾಲನೆ ಮಾಡಿದರೆ ಅಪಘಾತವು ಆಗುವ ಸಾಧ್ಯತೆ ಹೆಚ್ಚಿದೆ ಎಂಬ ಸೂಚನೆಗಳನ್ನು ಪ್ರದರ್ಶನ ಮಾಡಿದರು.

ಬಸ್‌ನಲ್ಲಿ ಪ್ರಯಾಣಿಸುವಾಗ ನಿರ್ವಾಹಕರ ಜೊತೆ ಸಣ್ಣಪುಟ್ಟ ವಿಷಯಗಳಿಗೆ ಜಗಳ ತೆಗೆದು ಬಸ್‌ ನಿಲ್ಲಿಸಿ, ಪೊಲೀಸ್‌ ಠಾಣೆಗೆ ಹೋಗುವುದು. ಪ್ರಯಾಣಿಕರು ಟಿಕೆಟ್‌ ಪಡೆಯದೆ ಪ್ರಯಾಣಿಸುವುದು. ಬಸ್‌ನಲ್ಲೇ ಪುಂಡರು ಹುಡುಗಿಯರನ್ನು ಚುಡಾಯಿಸುವುದು. ಬಸ್‌ ಚಾಲಕರು ವೇಗವಾಗಿ ಚಾಲನೆ ಮಾಡಿ ಅಪಘಾತವಾದಾಗ, ಪ್ರಯಾಣಿಕರು ಮೃತಪಟ್ಟ ಸನ್ನಿವೇಶ ಹಾಗೂ ಮೃತಪಟ್ಟ ಕುಟುಂಬದವರ ದುಃಖದ ಸನ್ನಿವೇಶಗಳನ್ನು ನಾಟಕದಲ್ಲಿ ಪ್ರದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ರವೀಂದ್ರ, ರಸ್ತೆ ಸಾರಿಗೆ ವಿಭಾಗೀಯ ಆಡಳಿತಾಧಿಕಾರಿ ವಸಂತ, ತಾಂತ್ರಿಕ ವಿಭಾಗದ ಸೂರ್ಯಕಾಂತ, ಸಂಚಾರ ಅಧಿಕಾರಿ ಪರಮೇಶ್‌, ಕಾರ್ಮಿಕ ವಿಭಾಗದ ಅಧಿಕಾರಿ ರಶ್ಮಿ, ಘಟಕದ ವ್ಯವಸ್ಥಾಪಕಸುಬ್ರಹ್ಮಣ್ಯ, ಅಗ್ನಿಶಾಮಕ ಠಾಣಾಧಿಕಾರಿ ರಮೇಶ್‌, ಹೇಮಂತ್‌, ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.