Lok Adalat: ಅದಾಲತ್‌ನಲ್ಲಿ 16,305 ಪ್ರಕರಣ ಇತ್ಯರ್ಥ
Team Udayavani, Sep 14, 2023, 1:15 PM IST
ಚಾಮರಾಜನಗರ: ಜನಸಾಮಾನ್ಯರ ಅನುಕೂಲಕ್ಕಾಗಿ ಶೀಘ್ರವಾಗಿ ಪ್ರಕರಣ ಇತ್ಯರ್ಥವಾಗಬೇಕು ಎಂಬ ಸದುದ್ದೇಶದಿಂದ ಸೆ. 9ರಂದು ನಡೆದ ಮೆಗಾ ಲೋಕ್ ಅದಾಲತ್ ನಲ್ಲಿ ಜಿಲ್ಲೆಯಲ್ಲಿ ಒಟ್ಟು 16,305 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆದ ಮೆಗಾ ಲೋಕ್ ಅದಾಲತ್ ನಲ್ಲಿ 2,431 ನ್ಯಾಯಾಲಯದ ಪ್ರಕರಣಗಳು ಹಾಗೂ 13,604 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟಾರೆ 16,035 ಪ್ರಕರಣಗಳು ಬಗೆಹರಿದಿವೆ. ಒಟ್ಟು 7.72 ಕೋಟಿ ರೂ. ನಷ್ಟು ದಂಡ ವಸೂಲಿ, ಪರಿಹಾರ, ವಿಮೆ ಮೌಲ್ಯ ಒಳಗೊಂಡಿದೆ ಎಂದರು.
ಚಾಮರಾಜನಗರ ತಾಲೂಕಿನಲ್ಲಿ 804 ನ್ಯಾಯಾಲಯದ ಪ್ರಕರಣಗಳು, 7,654 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 8,458 ಪ್ರಕರಣಗಳು ಇತ್ಯರ್ಥಗೊಂಡಿವೆ. ಯಳಂದೂರು ತಾಲೂಕಿನಲ್ಲಿ 236 ನ್ಯಾಯಾಲಯದ ಪ್ರಕರಣಗಳು, 858 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 1,094 ಪ್ರಕರಣಗಳು ಇತ್ಯರ್ಥಗೊಂಡಿವೆ.
ಕೊಳ್ಳೇಗಾಲ ತಾಲೂಕಿನಲ್ಲಿ 1,148 ನ್ಯಾಯಾಲಯದ ಪ್ರಕರಣಗಳು, 3,732 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 4,880 ಪ್ರಕರಣಗಳು ಇತ್ಯರ್ಥ ಗೊಂಡಿವೆ. ಗುಂಡ್ಲುಪೇಟೆ ತಾಲೂಕಿನಲ್ಲಿ 243 ನ್ಯಾಯಾಲಯದ ಪ್ರಕರಣಗಳು, 1,360 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 1,603 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ತಿಳಿಸಿದರು.
ಜುಲೈ 8ರಂದು ನಡೆದ ಲೋಕ್ ಅದಾಲತ್ ನಲ್ಲಿ ಇತ್ಯರ್ಥವಾದ ಪ್ರಕರಣಗಳಿಗಿಂತ ಸೆ. 9ರಂದು ನಡೆದ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿಯಾಗಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ನ್ಯಾಯಾಲಯಗಳ ಮೇಲಿನ ಪ್ರಕರಣಗಳ ಹೊರೆ ತಗ್ಗಿದೆ. ಲೋಕ ಅದಾಲತ್ ಯಶಸ್ಸಿಗೆ ಶ್ರಮಿಸಿದ ಎಲ್ಲಾ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್, ಕಂದಾಯ, ಅಬಕಾರಿ, ಕಾರ್ಮಿಕ ಇಲಾಖೆ, ಆಹಾರ ಇಲಾಖೆ, ಇತರ ಇಲಾಖೆಗಳು ಮಾಧ್ಯಮ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ದಾಂಪತ್ಯ ಕಲಹದ 3 ದಾವೆ ಇತ್ಯರ್ಥ: ಲೋಕ್ ಅದಾಲತ್ ನಲ್ಲಿ 20 ವರ್ಷಕ್ಕೂ ಹೆಚ್ಚಿನ ಲಿಟಿಗೇಶನ್ ಪ್ರಕರಣವೊಂದು ರಾಜಿಯಿಂದ ಬಗೆ ಹರಿದಿದೆ. ಅಲ್ಲದೇ ದಾಂಪತ್ಯ ಕಲಹದ 3 ವ್ಯಾಜ್ಯ ಪೂರ್ವ ಪ್ರಕರಣಗಳು ಸಹ ಇತ್ಯರ್ಥವಾಗಿದೆ. ಇದರಲ್ಲಿ ಚಾಮರಾಜನಗರದಲ್ಲಿ 2, ಕೊಳ್ಳೇಗಾಲದ 1 ಪ್ರಕರಣ ಸೇರಿವೆ. ಈ ಎಲ್ಲಾ ಪ್ರಕರಣಗಳು ಒಮ್ಮತದಿಂದ ತೀರ್ಮಾನವಾಗಿರುವುದು ಲೋಕ್ ಅದಾಲತ್ ನ ವಿಶೇಷ ಎನಿಸಿದೆ ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.