20 ಸಾವಿರ ಜನರಿಗೆ ನರೇಗಾದಡಿ ಕೆಲಸ
Team Udayavani, May 23, 2020, 4:37 AM IST
ಹನೂರು: ನರೇಗಾ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 20 ಸಾವಿರ ಜನರಿಗೆ ನರೇಗಾ ಯೋಜನೆಯಡಿ ಉದ್ಯೋಗ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಶಾಸಕ ನರೇಂದ್ರ ತಿಳಿಸಿದರು.
ತಾಲೂಕಿನ ಗೋಪಿನಾಥಂ, ಮಲೆ ಮಹದೇಶ್ವರ ಬೆಟ್ಟ ಮತ್ತು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಪ್ರತಿ ಗ್ರಾಮಸ್ಥರಿಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತಿಂಗಳಿಗೆ 11 ಕೋಟಿ ಕೂಲಿ: ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ 275 ರೂ. ಕೂಲಿ ನೀಡಲಾಗುತ್ತಿದ್ದು ಕ್ಷೇತ್ರದಲ್ಲಿಯೇ ದಿನಕ್ಕೆ 37 ಲಕ್ಷ ಕೂಲಿ ಹಣ ನೀಡಲಾಗುತ್ತಿದೆ. ಕಾರ್ಮಿಕರು ಇದೇ ರೀತಿ ಕಾರ್ಯನಿರ್ವಹಿಸಿದಲ್ಲಿ ತಿಂಗಳಿಗೆ 11 ಕೋಟಿ ಕೂಲಿ ಹಣ ಲಭಿಸಲಿದೆ. ಇದರಿಂದ ಗ್ರಾಮೀಣರು ಆರ್ಥಿಕವಾಗಿ ಸದೃಢರಾಗುವುದರ ಜೊತೆಗೆ ಆರ್ಥಿಕ ವಹಿವಾಟು ಕೂಡ ಹೆಚ್ಚಲಿದೆ ಎಂದು ಹೇಳಿದರು.
ಪಿಡಿಒಗಳಿಗೆ ಸೂಚನೆ: ಗೋಪಿನಾಥಂ, ಮಲೆ ಮಹದೇಶ್ವರ ಬೆಟ್ಟ, ಪೊನ್ನಾಚಿ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿದರು. ಬಳಿಕ ಪುದೂರು ಕೆರೆ, ಕೀರನಹೊಲ ಕೆರೆ ಮತ್ತು ರಾಮೇಗೌಡನಹಳ್ಳಿ ಕೆರೆ ಅಭಿವೃದ್ದಿ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜು, ಗ್ರಾಪಂ ಅಧ್ಯಕ್ಷರಾದ ಮುರುಗೇಶ್, ರುಕ್ಮಿಣಿ, ಶಿವಬಸಪ್ಪ, ಪಿಡಿಒಗಳಾದ ಕಿರಣ್, ಪ್ರದೀಪ್, ರಾಜ್‌ಕುಮಾರ್, ಈಶ್ವರ್, ಬಸಪ್ಪನದೊಡ್ಡಿ ಪ್ರಸಾದ್, ಹನುಮಂತು, ರಾಜು ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.