Chamarajanagar: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 20ವರ್ಷ ಜೈಲು ಶಿಕ್ಷೆ
Team Udayavani, Aug 23, 2023, 6:27 PM IST
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ 20 ವರ್ಷಗಳ ಕಠಿಣ ಜೈಲು ಸಜೆ ವಿಧಿಸಿ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ತಾಲೂಕಿನ ಗ್ರಾಮವೊಂದರ ನಾಗೇಂದ್ರ (23) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ತನ್ನ ಗ್ರಾಮದ 12 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಹೇಳಿ ಅಪಹರಿಸಿಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ 2021ರ ಸೆ. 13ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅಂದಿನ ಸರ್ಕಲ್ ಇನ್‌ಸ್ಪೆಕ್ಟರ್ ಶೇಖರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:Chandrayaan 3 ಸೂಪರ್ ಸಕ್ಸಸ್ ; ಪ್ರಧಾನಿ ಮೋದಿ ಸಂಭ್ರಮದ ಮಾತುಗಳು
ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಗೇಂದ್ರನಿಗೆ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿಗೆ ನಾಲ್ಕು ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೀಡಲು ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಆದೇಶಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.