ಮುಂಬೈ ಸೋಂಕಿತನ 26 ಸಂಪರ್ಕಿತರ ವರದಿ ನೆಗೆಟಿವ್
Team Udayavani, Jun 16, 2020, 5:26 AM IST
ಚಾಮರಾಜನಗರ: ಮಹಾರಾಷ್ಟ್ರದ ಮುಂಬೈ ಮೂಲದ ಕೋವಿಡ್ ಸೋಂಕು ದೃಢೀಕೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮೂವರು ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ 23 ಜನರು ಸೇರಿದಂತೆ ಒಟ್ಟು 26 ಜನರ ಗಂಟಲಿನ ದ್ರವ ಮಾದರಿಯ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ.
ಸೋಂಕು ದೃಢೀಕೃತ ವ್ಯಕ್ತಿಯ ಸಂಪರ್ಕ ಹೊಂದಿದ್ದ ಒಟ್ಟು 26 ಜನರ ವರದಿಯು ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ಕ್ವಾರೆಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ, ಮುಂಬೈನಿಂದ ಬಂದಿದ್ದ ಸೋಂಕಿತನ ಜೊತೆಯಲ್ಲಿದ್ದ ಉಳಿದವರಿಗೆ ಸೋಂಕು ಹರಡಿರಬಹುದೆಂಬ ಆತಂಕ ದೂರವಾಗಿದೆ.
ಸೋಂಕಿತನ ಸೋದರಮಾವ ಸ್ಥಳೀಯರಾಗಿದ್ದರು. ಅವರ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಬಂದಿರುವ 38 ಜನರನ್ನು ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ವಿವಿಧ ಹಾಸ್ಟೆಲ್ ಗಳಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
ಪ್ರಸ್ತುತ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಯಾರನ್ನೂ ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.