ಕಾಲ್ನಡಿಗೆಯಲ್ಲಿ 40 ಕಿ.ಮೀ. ದೂರದಿಂದ ನೀರು ತಂದು ಶಿವನಿಗೆ ಅಭಿಷೇಕ

Team Udayavani, Feb 22, 2020, 3:00 AM IST

kalnadige

ಚಾಮರಾಜನಗರ: ಗಂಗಾಧರ ಶಿವನಿಗೆ ಗಂಗೆಯೆಂದರೆ ಪ್ರಿಯವಾದವಳು. ಮಹಾ ಶಿವರಾತ್ರಿಯಂದು ಶಿವ ಪೂಜೆ ಅಭಿಷೇಕಕ್ಕೆ 40 ಕಿ.ಮೀ. ದೂರದಿಂದ ಕಪಿಲಾ ನದಿಯ ನೀರನ್ನು ತಲೆಯ ಮೇಲೆ ಹೊತ್ತು ಬರಿಗಾಲಲ್ಲಿ ನಡೆದು ತರುವ ವಿಶಿಷ್ಟ ಆಚರಣೆ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿದೆ.

ಹೆಗ್ಗೊಠಾರ ಗ್ರಾಮದ ಆರು ಕುಟುಂಬದ ಪ್ರತಿನಿಧಿಗಳು 40 ಕಿ.ಮೀ. ದೂರದಿಂದ ಕಪಿಲಾ ನದಿ ನೀರನ್ನು ಬರಿಗಾಲಲ್ಲಿ ಹೊತ್ತು ತಂದು ಶಿವನಿಗೆ ಅಭಿಷೇಕ ಮಾಡುತ್ತಾರೆ. ಹೆಗ್ಗೊಠಾರ ಗ್ರಾಮದ ಆರು ಮನೆಗಳ ತಲಾ ಒಬ್ಬೊಬ್ಬರು ಶಿವರಾತ್ರಿ ದಿನ ಬೆಳ್ಳಂಬೆಳಗ್ಗೆಯೇ ಹೊರಟು 40 ಕಿ.ಮೀ. ದೂರದ ಕಪಿಲಾ ನದಿಯಿಂದ ಬರಿಗಾಲಲ್ಲಿ ನಡೆದು ತಾಮ್ರದ ಬಿಂದಿಗೆಯಲ್ಲಿ ನೀರು ಹೊತ್ತು ತಂದು ಗ್ರಾಮದ ಸಿದ್ಧªರಾಮೇಶ್ವರನ ಅಭಿಷೇಕಕ್ಕೆ ನೀಡುತ್ತಾರೆ.

ಅಭಿಷೇಕದ ಕೈಂಕರ್ಯ: ಗ್ರಾಮದ ಆರು ಮನೆಗಳ ಒಬ್ಬೊಬ್ಬ ಪುರುಷರು ಈ ರೀತಿ ಕಪಿಲಾ ನದಿಯಿಂದ ನೀರು ಹೊತ್ತು ತಂದು ಅಭಿಷೇಕದ ಕೈಂಕರ್ಯ ಸಲ್ಲಿಸುತ್ತಾರೆ. ಈ ಬಾರಿಯೂ ಆ ಕುಟುಂಬದಿಂದ ಒಬ್ಬೊಬ್ಬರು ತಲೆಯ ಮೇಲೆ ಕಪಿಲಾ ನದಿಯ ನೀರನ್ನು ಹೊತ್ತು ಬಿರು ಬಿಸಿಲಿನಲ್ಲಿ 40 ಕಿ.ಮೀ. ದೂರ ಬರಿಗಾಲಲ್ಲಿ ನಡೆದು ತಮ್ಮೂರಿಗೆ ಬಂದು ಶಿವನ ಅಭಿಷೇಕಕ್ಕೆ ಕಪಿಲೆಯನ್ನು ತಂದರು.

ಈ ಆರು ಮಂದಿ ಬೆಳಿಗ್ಗೆ ಆರು ಗಂಟೆಗೆ ಬಸ್‌ನಲ್ಲಿ ನಂಜನಗೂಡು ಮೂಲಕ ನಗರ್ಲೆ ಗ್ರಾಮಕ್ಕೆ ತೆರಳಿದರು. ಅಲ್ಲಿರುವ ಕಪಿಲಾ ತಟಕ್ಕೆ ಹೋಗಿ ಸ್ನಾನ ಮಾಡಿ, ತಾಮ್ರದ ಬಿಂದಿಗೆಗಳನ್ನು ಬೆಳಗಿ, ಅದಕ್ಕೆ ವಿಭೂತಿ, ಅರಿಶಿನ ಕುಂಕುಮ ಹಚ್ಚಿ, ಕಾಯಿ ಒಡೆದು ಪೂಜೆ ಮಾಡುತ್ತಾರೆ. ಬಳಿಕ ಕಪಿಲೆಯನ್ನು ಬಿಂದಿಗೆಗೆ ತುಂಬಿಕೊಂಡು ತಲೆಮೇಲೆ ಹೊತ್ತು 10 ಕಿ.ಮೀ. ದೂರ ನಡೆದು ಆನಂಬಳ್ಳಿ ತಲುಪಿ,

ಅಲ್ಲಿ ಪದ್ಧತಿಯಂತೆ ಬಸವರಾಜಪ್ಪ ಎಂಬುವರ ಮನೆಯಲ್ಲಿ ಬಿಂದಿಗೆ ಇಳಿಸಿ, ಉಪಾಹಾರ ಸೇವಿಸಿ ಬಳಿಕ ಹೊರಡುತ್ತಾರೆ. ಅಲ್ಲಿಂದ ದೇವನೂರಿಗೆ ಬಂದು ಅಲ್ಲಿನ ಗುರುಮಲ್ಲೇಶ್ವರ ಮಠದಲ್ಲಿ ಕೊಡವನ್ನು ಇಳಿಸಿ, ಪ್ರಸಾದ ಸೇವಿಸಿ ಮತ್ತೆ ಬಿಂದಿಗೆ ಹೊತ್ತು, ಕೌಲಂದೆ, ಹೆಗ್ಗವಾಡಿ, ಬೆಂಡರವಾಡಿಗೆ ಬರುತ್ತಾರೆ. ಬೆಂಡರವಾಡಿ ಕೆರೆಯ ಬಳಿ ಸ್ವಲ್ಪ ವಿಶ್ರಾಂತಿ ಪಡೆದು ತಮ್ಮೂರಿಗೆ ಸಂಜೆ ತಲುಪುತ್ತಾರೆ.

ಸಿದ್ಧರಾಮೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ: ಸಿದ್ಧರಾಮೇಶ್ವರ ದೇವಸ್ಥಾನದಲ್ಲಿ ಬಿಂದಿಗೆ ಇಳಿಸುತ್ತಾರೆ. ಇವರ ಜೊತೆಗೆ ಗ್ರಾಮದ ಬಾವಿಯಿಂದ 101 ಬಿಂದಿಗೆ ನೀರು ಹೊತ್ತುಕೊಂಡು ಜನರು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿ, ಸಿದ್ಧರಾಮೇಶ್ವರನ ಸನ್ನಿಧಿಯಲ್ಲಿ ಕಪಿಲಾ ಜಲಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ನಂತರ ಕಪಿಲಾ ಜಲದೊಂದಿಗೆ ಬಿಲ್ವಪತ್ರೆಯನ್ನು ಹಾಕಿ ಸಿದ್ಧರಾಮೇಶ್ವರನಿಗೆ ರಾತ್ರಿಯಿಡೀ 5 ಬಾರಿ ಅಭಿಷೇಕ, ಪೂಜೆ ಸಲ್ಲಿಸಲಾಗುತ್ತದೆ. ಇಡೀ ರಾತ್ರಿ ಗ್ರಾಮಸ್ಥರೆಲ್ಲ ಒಟ್ಟಾಗಿ ದೇವಸ್ಥಾನದಲ್ಲಿ ಜಾಗರಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಚೋಳರ ಕಾಲದ ಸಿದ್ಧರಾಮೇಶ್ವರ ದೇಗುಲ: ಹೆಗ್ಗೊಠಾರ ಗ್ರಾಮದಲ್ಲಿ ಸುಮಾರು 700 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ನಿರ್ಮಾಣ ಮಾಡಲಾಗಿರುವ ಸಿದ್ಧರಾಮೇಶ್ವರ ದೇವಾಲಯದಲ್ಲಿ ಪ್ರತಿ ವರ್ಷ ಶಿವರಾತ್ರಿಯಂದು ಈ ವಿಶೇಷ ಪೂಜೆ ನಡೆಯುತ್ತದೆ. ಸಿದ್ಧರಾಮೇಶ್ವರನಿಗೆ ಕಪಿಲಾ ನದಿಯಿಂದ ನೀರು ತಂದು ಪೂಜೆ ಸಲ್ಲಿಸುವ ವಾಡಿಕೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.