ಚಾಮರಾಜನಗರ: 52 ಹೊಸ ಪ್ರಕರಣ ಪತ್ತೆ: 67 ಗುಣಮುಖ, ಇಬ್ಬರು ಸಾವು
Team Udayavani, Aug 12, 2020, 9:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಕೋವಿಡ್ 19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇಂದು 52 ಹೊಸ ಪ್ರಕರಣಗಳು ಪತ್ತೆಯಾಗಿವೆ. 67 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ 69 ವರ್ಷದ ವೃದ್ಧ ಆ. 8ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ.
ಕೊಳ್ಳೇಗಾಲದ ದೇವಾಂಗಪೇಟೆಯ 80 ವರ್ಷದ ವೃದ್ಧ ಆ. 4ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಬುಧವಾರ 545 ಮಾದರಿಗಳನ್ನು ಪರೀಕ್ಷಿಸಲಾಗಿತ್ತು ಇವುಗಳಲ್ಲಿ 52 ಪ್ರಕರಣಗಳು ಪಾಸಿಟಿವ್ ಆಗಿವೆ. ಚಾಮರಾಜನಗರ ತಾಲೂಕಿನಿಂದ 23, ಕೊಳ್ಳೇಗಾಲ ತಾಲೂಕಿನಿಂದ 17, ಗುಂಡ್ಲುಪೇಟೆ ತಾಲೂಕಿನಿಂದ 3, ಯಳಂದೂರು ತಾಲೂಕಿನಿಂದ 2 ಹಾಗೂ ಹನೂರು ತಾಲೂಕಿನಿಂದ 7 ಪ್ರಕರಣಗಳು ವರದಿಯಾಗಿವೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ 925 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 1372ಕ್ಕೇರಿದೆ. ಇದರಲ್ಲಿ ಸಕ್ರಿಯ ಪ್ರಕರಣಗಳು 421. ಇದುವರೆಗೆ ಕೋವಿಡ್ ಸೋಂಕಿನಿಂದ 17 ಮಂದಿ ಹಾಗೂ ಕೋವಿಡೇತರ ಕಾರಣದಿಂದ 9 ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 23 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೋಂ ಐಸೋಲೇಷನ್: ಬುಧವಾರ 7 ಮಂದಿ ಸೋಂಕಿತರು ಹೋಂ ಐಸೋಲೇಷನ್‌ಗೊಳಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 112 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.