ಚಾ.ನಗರ ಜಿಲ್ಲೆಯಲ್ಲಿ 5,422 ಮಂದಿಗೆ ಲಸಿಕೆ

Team Udayavani, Apr 16, 2021, 3:00 PM IST

5,422 Vaccines Vaccination in Changanagar District

ಚಾಮರಾಜನಗರ: ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕೊರೊನಾಲಸಿಕಾ ಉತ್ಸವದಲ್ಲಿ 5,422 ಮಂದಿ ಲಸಿಕೆ ಪಡೆದಿದ್ದಾರೆ. ಒಟ್ಟಾರೆಇದುವರೆಗೆ ಜಿಲ್ಲೆಯಲ್ಲಿ 1,07,686 ಮಂದಿ ಕೋವಿಡ್‌ ಲಸಿಕೆತೆಗೆದುಕೊಂಡಿದ್ದಾರೆ.ಕೋವಿಡ್‌ ಲಸಿಕಾ ಉತ್ಸವದ ಮೊದಲ ದಿನವಾದ ಏ.11ರಂದು 878ಮಂದಿ ಲಸಿಕೆ ಪಡೆದರೆ, ಏ.12ರಂದು 1,834 ಮಂದಿ, 13ರಂದು 715ಮಂದಿ, 14ರಂದು 1,995 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಲಸಿಕೋತ್ಸವದ ಮೊದಲ ದಿನ ಭಾನುವಾರವಾದ್ದರಿಂದ ಹೆಚ್ಚಿನ ಜನರುಲಸಿಕೆ ಪಡೆದಿಲ್ಲ. 2ನೇ ದಿನ ಉತ್ತಮ ಪ್ರತಿಕ್ರಿಯೆ ದೊರೆತಿದೆ. 3ನೇ ದಿನಯುಗಾದಿ ಹಬ್ಬವಾದ್ದರಿಂದ ಹೆಚ್ಚು ಮಂದಿ ಲಸಿಕಾ ಕೇಂದ್ರದತ್ತ ಬಂದಿಲ್ಲ.ನಾಲ್ಕನೇ ದಿನ 1995 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.ಮಾರ್ಚ್‌ 1ರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿವಿಧಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲುಪ್ರಾರಂಭಿಸಲಾಯಿತು.

ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂಉಚಿತವಾಗಿ ಲಸಿಕೆ ನೀಡುವ ಮಹತ್ತರ ಅಭಿಯಾನ ಆರಂಭಗೊಂಡಿತು.ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರು 2,97,000 ಮಂದಿ ಇದ್ದು, ಈಎಲ್ಲರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ಪೈಕಿ 45ರಿಂದ 59 ರ ವಯೋಮಾನದವರು 1,96,530 ಜನರಿದ್ದಾರೆ. 60 ವರ್ಷಮೇಲ್ಪಟ್ಟವರು 1,00,470 ಜನರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 1,07,686ಮಂದಿಗೆ ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿರುವ 60 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಂತೆಮರಹಳ್ಳಿ,ಬೇಗೂರು ಹಾಗೂ ಕಬ್ಬಳಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ,ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ತಾಲೂಕು ಆಸ್ಪತ್ರೆ,ಕೊಳ್ಳೇಗಾಲ, ಚಾಮರಾಜನಗರ ಪಟ್ಟಣದಲ್ಲಿರುವ ನಗರ ಸಮುದಾಯಆರೋಗ್ಯ ಕೇಂದ್ರ ಹಾಗೂ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ಲಸಿಕೆ ನೀಡಲಾಗುತ್ತಿದೆ. 14 ಆರೋಗ್ಯ ಉಪ ಕೇಂದ್ರಗಳಲ್ಲಿಯೂ ಕೋವಿಡ್‌ಲಸಿಕೆ ನೀಡುವ ಕಾರ್ಯ ಪ್ರಾರಂಭಗೊಂಡಿದೆ. ಹೋಬಳಿ ಕೇಂದ್ರಗಳನ್ನುಕೇಂದ್ರವಾಗಿರಿಸಿಕೊಂಡು ಕೋವಿಡ್‌ ಲಸಿಕಾ ಕಾರ್ನರ್‌ಗಳನ್ನು ತೆರೆಯಲಾಗಿದ್ದು, ಇಲ್ಲಿಯೂ ಸಹ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.