ಮಲೆ ಮಹದೇಶ್ವರ ಬೆಟ್ಟದಲ್ಲಿ72 ಸಾವಿರ ಲಾಡು ದಾಸ್ತಾನು
Team Udayavani, Mar 24, 2020, 4:05 PM IST
ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 72 ಸಾವಿರ ಲಾಡು ದಾಸ್ತಾನು ಉಳಿದಿದೆ. ಆ ಲಾಡುಗಳನ್ನು ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲು ಮತ್ತು ಪ್ರಾಧಿಕಾರದ ಸಿಬ್ಬಂದಿಗೆ ತಲಾ 10 ಲಾಡು ವಿತರಿಸಲು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಿಎಂ ಅವರಿಂದ ಅನುಮತಿ ಪಡೆಯಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದರು.
ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯಲ್ಲಿ ಭಕ್ತರಿಗೆ ಮಾರಾಟ ಮಾಡಲು ಲಾಡು ತಯಾರಿಕೆ ಮಾಡಿ, ದಾಸ್ತಾನು ಮಾಡಲಾಗುತಿತ್ತು. ಅಂತಿಮವಾಗಿ ಮಾ.18ರವರೆಗೆ 72 ಸಾವಿರ ಲಾಡು ತಯಾರು ಮಾಡಲಾಗಿತ್ತು. ಆದರೆ, ಕೊರೊನಾ ತಡೆ ಹಿನ್ನೆಲೆ ಸರ್ಕಾರದ ದೇವಾಲಯವನ್ನು ಬಂದ್ ಮಾಡಲು ನಿರ್ಧಾರ ಮಾಡಿದೆ. ಈ ಹಿನ್ನೆಲೆ ಲಾಡು ತಯಾರಿಕೆಯನ್ನು ಸ್ಥಗಿತಗೊಳಿಸಿ, ದಾಸ್ತಾನಿನಲ್ಲಿರುವ 72 ಸಾವಿರ ಲಾಡನ್ನು ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲು ಅನುಮತಿಗೆ ಮನವಿ ಮಾಡಲಾಗಿತ್ತು.
ಈ ಹಿನ್ನೆಲೆ ಅನುಮತಿ ನೀಡಿರುವ ಸಿಎಂ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 550 ಸಿಬ್ಬಂದಿಗೆ ತಲಾ 10 ಲಾಡು, ಶ್ರೀಕ್ಷೇತ್ರದ ಸಾಲೂರು ಮಠಕ್ಕೆ ಭೇಟಿ ನೀಡುವ ಭಕ್ತಾದಿಗಳು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಭೇಟಿ ನೀಡುವ ಭಕ್ತಾದಿಗಳಿಗೆ ನೀಡಲು 1 ಸಾವಿರ ಲಾಡು ಉಚಿತವಾಗಿ ನೀಡಲು ಅನುಮತಿ ನೀಡಲಾಗಿದೆ. ಅಲ್ಲದೆ, ಡೀಸಿ ಅಧೀನಕ್ಕೆ 20 ಸಾವಿರ ಲಾಡು ನೀಡಿ, ಆ ಲಾಡುಗಳನ್ನು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಆಗಮಿಸುವ ಭಕ್ತಾದಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬಾಕಿ ಉಳಿದ ಲಾಡನ್ನು ತಾಳಬೆಟ್ಟ ಮತ್ತು ಪಾಲಾರ್ ಗಡಿಗಳಲ್ಲಿ ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಿ, ದೇವಾಲಯಕ್ಕೆ ಪ್ರವೇಶ ನಿರ್ಬಂಧ ವಿಧಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.