ಸಾಧನೆಗಳನ್ನು ಮನೆಮನೆಗಳಿಗೂ ತಲುಪಿಸುವ ಅಭಿಯಾನ ಆರಂಭ
Team Udayavani, Jun 7, 2020, 5:01 AM IST
ಚಾಮರಾಜನಗರ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಸಾಧನೆಗಳನ್ನು ಮನೆಮನೆಗಳಿಗೂ ತಲುಪಿಸುವ ಅಭಿಯಾನ ಆರಂಭಿಸಲಾಗಿದೆ ಎಂದು ಗುಂಡ್ಲು ಪೇಟೆ ಕ್ಷೇತ್ರದ ಶಾಸಕ ಸಿ.ಎಸ್. ನಿರಂಜನಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಿನಂಜನಪುರದಿಂದ ಮನೆ ಮನೆಗೆ ಸಾಧನೆಯ ಕರಪತ್ರಗಳನ್ನು ಹಂಚುವ ಮೂಲಕ ಅಭಿಯಾನ ನಡೆಯುತ್ತಿದೆ. ಕರಪತ್ರದಲ್ಲಿ ಕೇಂದ್ರ ಈ ಒಂದು ವರ್ಷದಲ್ಲಿ ಕೈಗೊಂಡ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ಮುದ್ರಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿದ್ದು, ಅಕ್ರಮ ವಲಸಿಗರಿಗೆ ತಡೆ, ರಾಮಮಂದಿರ ನಿರ್ಮಾಣ ಆರಂಭ,
ಆಯು ಷ್ಮಾನ್ ಭಾರತ, ಅಟಲ್ ಪೆನ್ಶನ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಅಟಲ್ ಭೂಜಲ ಯೋಜನೆ, ಜನಧನ್ ಯೋಜನೆ ನಮ್ಮ ಸರ್ಕಾರದ ಉತ್ತಮ ಕಾರ್ಯಕ್ರಮಗಳಾಗಿವೆ. ಅಭಿಯಾನ ಜೂ.14ರವರೆಗೂ ನಡೆಯಲಿದೆ ಎಂದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಂದರ್, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಮಾಜಿ ಶಾಸಕ ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.