ಕಣ್ಮನ ಸೆಳೆದ ಕಲಾತಂಡಗಳ ಮೆರವಣಿಗೆ
Team Udayavani, Oct 2, 2019, 3:00 AM IST
ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ನಗರದಲ್ಲಿ ನಡೆದ ಕಲಾತಂಡಗಳ ಮೆರವಣಿಗೆ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜಿಲ್ಲಾಡಳಿತ ಭವನದಿಂದ ಆರಂಭಗೊಂಡ ಕಲಾತಂಡಗಳ ಮೆರವಣಿಗೆಗೆ ದಸರಾ ಮಹೋತ್ಸವ ಸಮಿತಿಯಕ್ಷ ಹಾಗೂ ಶಾಸಕ ಸಿ. ಎಸ್. ನಿರಂಜನ್‌ಕುಮಾರ್, ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ನಂದಿ ಕಂಬಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಿಂದ ಬಿ. ರಾಚಯ್ಯ ಜೋಡಿ ರಸ್ತೆಯ ಮೂಲಕ ಚಾಮರಾಜೇಶ್ವರ ದೇವಾಲಯದವರೆಗೆ ಕಲಾತಂಡಗಳು ಸಾಗಿದವು. ವಿವಿಧ ಕಲಾತಂಡಗಳ ಮೆರವಣಿಗೆ ಸಾರ್ವಜನಿಕರನ್ನು ಆಕರ್ಷಿಸಿತು. ಗೊರವರ ಕುಣಿತ, ದೊಣ್ಣೆ ವರಸೆ, ನಂದಿ ಕಂಬ, ಹುಲಿವೇಷ, ನಾದಸ್ವರ, ವೀರಗಾಸೆ, ಡೊಳ್ಳು ಕುಣಿತ, ಸುಗ್ಗಿ ಕುಣಿತ, ಬೀಸು ಕಂಸಾಳೆ, ಟಿಬೇಟಿಯನ್ ನೃತ್ಯ, ಗೊರುಕನ ನೃತ್ಯ, ಗುಬ್ಬಿಹಾಲೆ ನೃತ್ಯ, ಪಿನಾಸಿ ನೃತ್ಯ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ತಮಟೆ, ಸೋಮನ ಕುಣಿತ, ನಗಾರಿ, ಗಾರುಡಿ ಗೊಂಬೆಗಳ ಪ್ರದರ್ಶನ ವಿಶೇಷವಾಗಿ ಆಕರ್ಷಿಸಿತು.
ಕಲಾವಿದರು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳು ನಿರ್ಮಿಸಿದ ಸ್ಥಬ್ಧಚಿತ್ರಗಳು ಸಹ ಭಾಗವಹಿಸಿ ಮೆರಗು ನೀಡುವುದರ ಜೊತೆಗೆ ಮಾಹಿತಿ ನೀಡುವಲ್ಲಿ ಮುಂದಾದವು. ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಿದ ಸ್ವಚ್ಚ ಭಾರತ್ ಕುರಿತ ಸ್ಥಬ್ಧಚಿತ್ರ ನೈರ್ಮಲ್ಯ ಮಹತ್ವವನ್ನು ಸಾರಿತು. ನಗರಸಭೆಯ ಜಲಶಕ್ತಿ ಅಭಿಯಾನ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಜಾಗೃತಿ ರಥ, ಆರೋಗ್ಯ ಇಲಾಖೆಯ ಪರ್ಯಾವರಣ ತುರ್ತು ಸ್ಥಬ್ಧಚಿತ್ರಗಳು ಆಕರ್ಷಕವಾಗಿ ನಿರ್ಮಾಣವಾಗಿದ್ದು ನೋಡುಗರ ಮೆಚ್ಚುಗೆಗೆ ಪಾತ್ರವಾದವು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್. ನಾರಾಯಣ್‌ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ವೈ. ಸೋಮಶೇಖರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.