ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Team Udayavani, Jan 15, 2025, 9:22 PM IST
ಚಾಮರಾಜನಗರ: ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಚಾಮರಾಜನಗರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಪಕ್ಷದ ವ್ಹಿಪ್ ಉಲ್ಲಂಸಿ ಅಡ್ಡ ಮತದಾನ ನಡೆಸಿದ ಕಾರಣ ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ.
ನಗರಸಭೆಯ 15ನೇ ವಾರ್ಡ್ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, 1ನೇ ವಾರ್ಡ್ ಸದಸ್ಯೆ ಎಸ್. ನೀಲಮ್ಮ, 16ನೇ ವಾರ್ಡ್‌ನ ಚಂದ್ರಕಲಾ, ಹಾಗೂ ವಾರ್ಡ್‌ನ ನಂ. 24ರ ಸದಸ್ಯೆ ಭಾಗ್ಯ ಅವರ ಸದಸ್ಯತ್ವನ್ನು ಜಿಲ್ಲಾಧಿಕಾರಿ ಅನರ್ಹಗೊಳಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ 2024ರ ಸೆಪ್ಟೆಂಬರ್ 9 ರಂದು ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲು 17 ಮತಗಳು ಬೇಕಾಗಿತ್ತು. ಕಾಂಗ್ರೆಸ್ 8, ಎಸ್‌ಡಿಪಿಯ 6, ಪಕ್ಷೇತರ 1 ಮತ, ಶಾಸಕ, ಸಂಸದ ತಲಾ ಒಂದು ಮತಗಳು ಕಾಂಗ್ರೆಸ್ ಪಾಲಿಗಿದ್ದವು. ಆದರೆ ಕಾಂಗ್ರೆಸ್ ಸದಸ್ಯರಾದ ಆರ್.ಪಿ. ನಂಜುಂಡಸ್ವಾಮಿ, ಎಸ್. ನೀಲಮ್ಮ, ಭಾಗ್ಯ ಚುನಾವಣಾ ಸಭೆಗೆ ಗೈರು ಹಾಜರಾಗಿದ್ದರು. ಇನ್ನೋರ್ವ ಸದಸ್ಯೆ ಚಂದ್ರಕಲಾ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದರು. ಹೀಗಾಗಿ ಬಿಜೆಪಿ ಅಧಿಕಾರ ಹಿಡಿದಿತ್ತು.
ತಮ್ಮ ಪಕ್ಷದ ಸದಸ್ಯರೇ ಕೈಕೊಟ್ಟ ಕಾರಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹಾಗೂ ಕಾಂಗ್ರೆಸ್ ಸದಸ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆರ್.ಎಂ. ರಾಜಪ್ಪ ಅವರು 2024ರ ಸೆ. 9 ರಂದು ನಡೆದ ಚಾ.ನಗರ ನಗರಸಭೆ ವರಿಷ್ಠ ಸ್ಥಾನಗಳ ಚುನಾವಣೆ ವೇಳೆ ತಮ್ಮ ಪಕ್ಷದ ನಾಲ್ವರು ಸದಸ್ಯರು ವ್ಹಿಪ್ ಉಲ್ಲಂಸಿದ್ದು , ಅವರ ವಿರುದ್ಧ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರು ನೀಡಿದ್ದರು.
ಅದರನ್ವಯ ದೂರುದಾರರು ನೀಡಿರುವ ದಾಖಲೆಗಳು, ಪಕ್ಷದ ನಿರ್ದೇಶನಕ್ಕೆ ವಿರುದ್ಧವಾಗಿ ನಡೆದುಕೊಂಡಿರುವುದು ಹಾಗೂ ಪ್ರತಿವಾದಿಗಳು ಗೈರು ಹಾಜರಿಗೆ ಸಮಂಜಸವಾದ ಉತ್ತರ ನೀಡದಿರುವುದರಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ಅಧಿನಿಯಮ 1987ರ ಸೆಕ್ಷನ್ 3(1) ಬಿ (ಪಕ್ಷಾಂತರ ನಿಷೇಧ) ಅನ್ವಯ ನಾಲ್ವರು ಸದಸ್ಯರ ಸದಸ್ಯತ್ವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.