ಅದಾಲತ್‌: 14 ಸಾವಿರಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ

Team Udayavani, Jul 9, 2023, 3:07 PM IST

ಅದಾಲತ್‌: 14 ಸಾವಿರಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ರಾಜೀಯಾಗ ಬಹುದಾದ ಹಲವು ಪ್ರಕರಣಗಳು ಇತ್ಯರ್ಥವಾದವು. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ನ್ಯಾಯಾಲಯಗಳಲ್ಲಿ ಏಕ ಕಾಲದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಹಲವು ವರ್ಷಗಳಿಂದಲೂ ಬಾಕಿ ಇದ್ದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಸಮ್ಮುಖದಲ್ಲಿ ಕಕ್ಷಿದಾರರು ರಾಜೀಯಾಗುವ ಮೂಲಕ ಇತ್ಯರ್ಥಪಡಿಸಿಕೊಂಡರು.

ಗುರಿಗಿಂತ ಹೆಚ್ಚು ಪ್ರಕರಣ ಇತ್ಯರ್ಥ: ಈ ಬಾರಿಯ ಲೋಕ ಅದಾಲತ್‌ನಲ್ಲಿ 13 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ ಹೊಂದಲಾಗಿತ್ತು. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್‌ ವಸೂಲಾತಿ, ಉದ್ಯೋಗದಲ್ಲಿ ಪುನರ್‌ ಸ್ಥಾಪಿ ಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ, ಗ್ರಾಹಕರ ವೇದಿಕೆ, ರಿಯಲ್‌ ಎಸ್ಟೇಟ್‌, ಸಾಲ ವಸೂಲಾತಿ, ಚೆಕ್‌ ಅಮಾನ್ಯ, ಮೋಟಾರ್‌ ಅಪಘಾತ ಪರಿಹಾರ, ವಿದ್ಯುತ್‌ ಮತ್ತು ನೀರಿನ ಶುಲ್ಕಕ್ಕೆ ಸಂಬಂಧಿಸಿದ, ಕಾರ್ಮಿಕ ವಿವಾದಗಳು, ಭೂಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿಗೆ ಸಂಬಂಧಿಸಿದ, ರಾಜೀ ಯೋಗ್ಯ ಸಿವಿಲ್‌, ಕ್ರಿಮಿನಲ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಅಧಿಕಾರಿಗಳೊಂದಿಗೆ ಪೂರ್ವ ಭಾವಿ ಸಭೆ: ಲೋಕ ಅದಾಲತ್‌ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದಲೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕುಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಅಬಕಾರಿ ಇಲಾ ಖೆ, ನ್ಯಾಯಾಧೀಶರು ಮತ್ತು ವಕೀಲರು ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಪೂರ್ವ ಭಾವಿ ಸಭೆ ನಡೆಸಲಾಗಿತ್ತು.

ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್‌ .ಭಾರತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್‌ ಸೇರಿದಂತೆ ಹಲವು ನ್ಯಾಯಾಧೀಶರು, ವಕೀಲರು ಇದ್ದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.