ರಸ್ತೆ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ
Team Udayavani, Jun 7, 2020, 5:03 AM IST
ಯಳಂದೂರು: ಪಟ್ಟಣದ ರಸ್ತೆ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳ ಗುರುತಿಸಿ ವ್ಯಾಪಾರ ವಹಿವಾಟು ನಡೆಸಲು ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿ ಕಾರಿ ನಿಖೀತಾ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ರಸ್ತೆಬದಿ ವ್ಯಾಪಾರ, ಆಟೋ, ಕಾರು ಚಾಲಕರ ಸಂಘದ ಸದಸ್ಯರ ಸಭೆ ಬಳಿಕ, ಪಟ್ಟಣದ ಆಟೋ, ಕಾರು, ಬಸ್ ನಿಲ್ದಾಣಗಳಿಗೆ ತೆರಳಿ ಸಮಸ್ಯೆ ಆಲಿಸಿದರು.
ಪಟ್ಟಣದಲ್ಲಿ ಈಗಿರುವ ಸ್ಥಳದಲ್ಲೇ ಕಾರು ನಿಲ್ದಾಣ, ಆಟೋ ನಿಲ್ದಾಣಕ್ಕೆ ಹಳೆ ಕುಡಿಯುವ ನೀರಿನ ಟ್ಯಾಂಕ್ ಬಳಿಯೇ ಸೂಕ್ತವಾಗಿದೆ. ಜತೆಗೆ ಸಿಡಿಎಸ್ ಸಮುದಾಯ ಭವ ನದ ಆವರಣ ಹಾಗೂ ದಿವಾನ್ ಪೂರ್ಣಯ್ಯ ವಸ್ತು ಸಂಗ್ರಹಾಲಯದ ಬಳಿ ತಿಂಡಿ ತಿನಿಸು ತಳ್ಳುಗಾಡಿಗಳು ಹಾಗೂ ಹಣ್ಣು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಶಾಸಕ ಬಾಲರಾಜು ಸೇರಿದಂತೆ ಪಪಂ ಸದಸ್ಯರು ಆಗ್ರಹಿಸಿದರು.
ಪಟ್ಟಣದ ವಿವಿಧೆಡೆ ತೆರಳಿದ ಉಪವಿಭಾಗಾಧಿಕಾರಿ ಸ್ಥಳ ಪರಿಶೀಲಿಸಿ ಮಾತನಾಡಿ, ತರಕಾರಿ ಮಾರಾಟಕ್ಕೆ ಸಂತೆಮೈದಾನದಲ್ಲೇ ಅವಕಾಶ ಮಾಡಿಕೊಡಲಾಗು ವುದು. ಇದಕ್ಕೆ 2 ವಾರಗಳ ಗಡುವು ನೀಡಲಾಗಿದೆ. ಹಾಗಾಗಿ ಈಗಿರುವ ಸ್ಥಳದಲ್ಲೇ ಮಾರಾಟಗಾರರು ತಮ್ಮ ವಹಿವಾಟು ನಡೆಸಲು ಸೂಚಿಸಿದರು. ಚೆಲುವ ಚಾಮರಾಜನಗರ ಅಭಿಯಾನದಲ್ಲಿ ಸಾರ್ವಜನಿಕರು ಪಂಚಾಯಿತಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಜಿಪಂ ಸದಸ್ಯ ಯೋಗೇಶ್ ಪಪಂ ಸದಸ್ಯ ರಾದ ಮಹೇಶ್, ರಂಗನಾಥ, ಮಹದೇವನಾಯಕ, ಮಂಜು, ಪುಷ್ಪಾವತಿ, ಸುಶೀಲಾ, ರವಿ, ತಹಶೀಲ್ದಾರ್ ಮಹೇಶ್, ಮುಖ್ಯಾಧಿಕಾರಿ ನಾಗರತ್ನ, ಆರೋಗ್ಯಾಧಿಕಾರಿ ಮಹೇಶ್‌ಕುಮಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.