ಅಕ್ರಮ ನೇಮಕಾತಿ ವಿರುದ್ಧ ಅನಿರ್ದಿಷ್ಠಾವಧಿ ಧರಣಿ 4ನೇ ದಿನಕ್ಕೆ
Team Udayavani, Dec 30, 2019, 3:00 AM IST
ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಅಕ್ರಮ ನೇಮಕಾತಿ ವಿರುದ್ಧ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ, ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕುದೇರಿನ ಚಾಮುಲ್ ಮುಂಭಾಗ ನಡೆಸುತ್ತಿರುವ ಪ್ರತಿಭಟನಾ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.
ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಪರಶಿವಮೂರ್ತಿ ಮಾತನಾಡಿ, ಚಾಮುಲ್‌ನ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಪ್ರತಿಭಟನಾಧರಣಿ ನಡೆಸಲಾಗುತ್ತಿದೆ. ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಅಥವಾ ಜಿಲ್ಲೆಯ ಶಾಸಕರಾಗಲಿ ಭೇಟಿನೀಡಿ ಸಮಸ್ಯೆ ಆಲಿಸಿಲ್ಲ. ಇದನ್ನು ನೋಡಿದರೆ ಚಾಮುಲ್ ಅಕ್ರಮ ನೇಮಕಾತಿಯಲ್ಲಿ ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರು ಶಾಮೀಲಾಗಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತದೆ ಎಂದರು.
ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವಿವಿಧ 72 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಮೀಸಲಾತಿ ವರ್ಗೀಕರಣದ ಅನ್ವಯ ನೇಮಕ ಮಾಡಿಕೊಂಡಿಲ್ಲ. ಮಂಗಳೂರು ಸಂಸ್ಥೆಯಿಂದ ಪರೀಕ್ಷೆ ನಡೆಸಿ ತಮಗಿಷ್ಟ ಬಂದಂತೆ ನೇಮಕ ಮಾಡಿಕೊಂಡಿದ್ದಾರೆ. ಆದರೆ ಒಕ್ಕೂಟದ ಅಧ್ಯಕ್ಷ ಗುರುಮಲ್ಲಪ್ಪ ಹುದ್ದೆಗಳನ್ನು ನಿಯಮ ಬದ್ಧವಾಗಿಯೇ ಇದೆ. ಪಾರದರ್ಶಕತೆ ಪಾಲಿಸಿದ್ದೇವೆ. ಯಾವುದೇ ಭ್ರಷ್ಟಾಚಾರ, ಅಕ್ರಮ ನಡೆದಿಲ್ಲ ಎನ್ನುತ್ತಾರೆ.
ಹಾಗಾದರೆ ನೇಮಕಾತಿ ದಾಖಲಾತಿಗಳನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು. ಜಿಲ್ಲೆಯ ಶಾಸಕರು ಚಾಮುಲ್‌ನ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮವನ್ನು ಸರ್ಕಾರದ ಗಮನಕ್ಕೆ ತಂದು ನೇಮಕಾತಿ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಮೂಲಕ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದರು.
ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಮಾತನಾಡಿ, ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಅಕ್ರಮ ನೇಮಕಾತಿ ವಿರುದ್ಧ ಕಳೆದ 4 ದಿನಗಳಿಂದ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ. ಸ್ಥಳಕ್ಕೆ ಯಾವ ಅಧಿಕಾರಿ ಭೇಟಿ ನೀಡಿ ಸಮಸ್ಯೆ ಆಲಿಸದ ಕಾರಣ ಸೋಮವಾರ ಸಂತೇಮರಹಳ್ಳಿ ಹೋಬಳಿ ಸ್ವಯಂಪ್ರೇರಿತ ಬಂದ್ ಕರೆ ನೀಡಲಾಗಿದೆ, ನಂತರದ ದಿನಗಳಲ್ಲಿ ತೀವ್ರತರ ನಿರಂತರ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಸಂತಾಪ: ಧರಣಿ ಸಂದರ್ಭದಲ್ಲಿ ಪೇಜಾವರ ಶ್ರೀಗಳ ನಿಧನಕ್ಕೆ 2 ನಿಮಿಷಗಳ ಕಾಲ ಮೌನ ಆಚರಿಸಿ ಗೌರವ ಸಂತಾಪ ಸೂಚಿಸಿಲಾಯಿತು. ಧರಣಿಯಲ್ಲಿ ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರಸ್ವಾಮಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ, ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪಿ.ಗೋವಿಂದರಾಜು, ಜಯಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷ ಎಸ್.ಮರಪ್ಪ, ಬದನಗುಪ್ಪೆ ಮಹೇಶ್, ರಾಮಸಮುದ್ರ ಸುರೇಶ್, ವೀಣಾ, ಉಮ್ಮತ್ತೂರು ನಾಗೇಶ್, ಶಂಭುಲಿಂಗಸ್ವಾಮಿ, ನಾಗರಾಜು, ಸಿದ್ದು, ಮಹೇಶ್, ನಂಜುಂಡಯ್ಯ, ಶ್ರೀನಿವಾಸಮೂರ್ತಿ, ವೃಷಭೇಂದ್ರಸ್ವಾಮಿ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.