ಸರ್ಕಾರದ ವಿರುದ್ಧ ಇಂದು ಮತ್ತೂಂದು ಬಾಂಬ್ ಸಿಡಿಸುವೆ
Team Udayavani, Feb 12, 2017, 3:45 AM IST
ಗುಂಡ್ಲುಪೇಟೆ: ಭಾನುವಾರ ಮಧ್ಯಾಹ್ನ 12 ಘಂಟೆಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಮತ್ತೂಂದು ಬಾಂಬ್ ಸಿಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶನಿವಾರ ನಡೆದ ಬಿಜೆಪಿಯ ಚುನಾವಣಾ ಪೂರ್ವ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ನಾಲ್ಕು ವರ್ಷದ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಹೊಡೆದಿದೆ. ಸಣ್ಣ ನೀರಾವರಿ ಇಲಾಖಾ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರು 18.5 ಕೋಟಿ ರೂ.ಲೂಟಿ ಹೊಡೆದಿದ್ದು ಸಾಬೀತಾಗಿದ್ದರೂ ಹಣ ವಸೂಲಿ ಮಾಡಲಾಗಿಲ್ಲ.
ಇದೀಗ ಸಿಎಂ.ಆಪ್ತ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಈ ವೇಳೆ ಸಿಕ್ಕ ಡೈರಿಯಲ್ಲಿ 1 ಸಾವಿರ ಕೋಟಿ ರೂ.ಹಣವನ್ನು ಕೇಂದ್ರದ ನಾಯಕರಿಗೆ ನೀಡಿರುವ ಮತ್ತು ಅವರಿಂದ ಸಹಿ ಪಡೆದಿರುವ ಬಗ್ಗೆ ದಾಖಲೆಗಳಿವೆ. ಈ ವಿಚಾರ ಮುಖ್ಯಮಂತ್ರಿಗೆ ತಿಳಿದಿದ್ದರೂ ಈ ಬಗ್ಗೆ ಸಾಕ್ಷಿ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ಭಾನುವಾರ 12 ಘಂಟೆಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮತ್ತೂಂದು ಬಾಂಬ್ ಸಿಡಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.