ಕಾಡುಹಂದಿ ಬೇಟೆಯಾಡಲು ಹೊಂಚುಹಾಕಿ ಕುಳಿತಿದ್ದ ಇಬ್ಬರ ಬಂಧನ: ನಾಡ ಬಂದೂಕು ವಶ
Team Udayavani, Jul 19, 2023, 4:16 PM IST
ಹನೂರು: ತೋಟದಲ್ಲಿ ಕಾಡುಹಂದಿ ಬೇಟೆಯಾಡಲು ಹೊಂಚುಹಾಕಿ ಕುಳಿತಿದ್ದ ಇಬ್ಬರನ್ನು ಬಂಧಿಸಿ ಒಂದು ನಾಡ ಬಂದೂಕು ವಶಪಡಿಸಿಕೊಳ್ಳುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಹನೂರು ಪಟ್ಟಣದ 13ನೇ ವಾರ್ಡಿ ಆರ್.ಎಸ್.ದೊಡ್ಡಿ ನಿವಾಸಿಗಳಾದ ಸಿದ್ದಪ್ಪಶೆಟ್ಟಿ(54) ಮತ್ತು ಬಸವರಾಜು (43) ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರೂ ಆರೋಪಿಗಳು ಎಡಳ್ಳಿದೊಡ್ಡಿ ರಸ್ತೆಯ ಜಮೀನೊಂದರಲ್ಲಿ ಕಾಡುಹಂದಿಯನ್ನು ಬೇಟೆಯಾಡಲು ಹೊಂಚುಹಾಕಿ ಕುಳಿತಿದ್ದರು.
ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡು ಈ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡು ಬಾಳೆಗಿಡದ ಕೆಳಗೆ ಅವಿತುಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸುತ್ತುವರೆದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ಅವರ ಬಳಿಯಿದ್ದ ಒಂದು ನಾಡಬಂದೂಕು, ಲೋಡ್ ಮಾಡಲಾಗಿದ್ದ ಮದ್ದುಗಳನ್ನು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದಾಳಿಯಲ್ಲಿ ಪೇದೆಗಳಾದ ರಾಘವೇಂದ್ರ, ಚಂದ್ರು, ಮಣಿಕಂಠ, ರಾಮಕೃಷ್ಣ, ರಾಜು ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.