ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇನ್ನೆಷ್ಟು ತಿಂಗಳು ಬೇಕು?


Team Udayavani, Jan 28, 2021, 1:02 PM IST

article on govt hospital

ಎಚ್‌.ಡಿ.ಕೋಟೆ: ತಾಲೂಕು ಕೇಂದ್ರ ಸ್ಥಾನದ ಸಾರ್ವಜನಿಕ ಆಸ್ಪತ್ರೆ ದುರಸ್ತಿ ಕಾರ್ಯ ಆಮೆಗತಿ ಯಲ್ಲಿ ಸಾಗುತ್ತಿದ್ದು, 2 ಕೋಟಿ ರೂ. ಅಂದಾಜು ವೆಚ್ಚದ ದುರಸ್ತಿ ಕಾಮಗಾರಿ ಪ್ರಾರಂಭವಾಗಿ ವರ್ಷ ಕಳೆದರೂ ಪೂರ್ಣಗೊಂಡಿಲ್ಲ.  ಎಚ್‌.ಡಿ.ಕೋಟೆ ತೀರ ಹಿಂದುಳಿದ ತಾಲೂಕು. ಇತರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಈ ತಾಲುಕು ವಿಸ್ತೀರ್ಣದಲ್ಲಿ 3 ಪಟ್ಟು ದೊಡ್ಡದಾಗಿದೆ. ಅಂದರೆ 1700 ಚ.ಕಿ ವ್ಯಾಪ್ತಿ ಒಳಗೊಂಡಿದೆ. ಇಂತಹ ತಾಲೂಕಿಗೆ ಸಮರ್ಪಕ ಆರೋಗ್ಯ ಸೇವೆ ನೀಡಬೇಕಿದ್ದ ಸಾರ್ವಜನಿಕ ಆಸ್ಪತ್ರೆಯನ್ನು ಶೀಘ್ರದುರಸ್ತಿಪಡಿಸುವ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ ತಾಲೂಕಿನ ಜನತೆಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುತ್ತಿಲ್ಲ.

ಮೈಸೂರು  ಮತ್ತಿತರ ನಗರಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಇಲ್ಲಿನ ಆರೋಗ್ಯ ಸೇವೆ ಗಳನ್ನು ತಾಯಿ ಮಗುವಿನ ಆಸ್ಪತ್ರೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆ. 100 ಹಾಸಿಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಬಹುತೇಕ ಭಾಗ ಶಿಥಿಲಾವಸ್ಥೆ ತಲುಪಿದ್ದರಿಂದ ದುರಸ್ತಿಪಡಿಸಲು 2 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಆರೋಗ್ಯ ಇಲಾಖೆಯ ಎಂಜಿಯರ್‌ಗಳಿಂದಲೇ ಟೆಂಡರ್‌ ಆಹ್ವಾನಿಸಿತ್ತೆಂದು ತಿಳಿದು ಬಂದಿದೆ.

ಟೆಂಡರ್‌ ತಮ್ಮದಾಗಿಸಿಕೊಂಡ ಗುತ್ತಿಗೆದಾರ ಇಂಜಿನಿಯರ್‌, ಕಳೆದ 1 ವರ್ಷದ ಹಿಂದೆ ಆಸ್ಪತ್ರೆ ದುರಸ್ತಿ ಕಾರ್ಯ ಆರಂಭಿಸಿ, ಮೂರು ತಿಂಗಳಲ್ಲಿ ಪೂರ್ಣ ಗೊಳಿಸುವ ಭರವಸೆ ನೀಡಿದ್ದರು. ವರ್ಷವೇ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಸದ್ಯಕ್ಕೆ ಪೂರ್ಣಗೊಳ್ಳುವ ಲಕ್ಷಣಗಳು ಕೂಡ ಕಂಡು ಬರುತ್ತಿಲ್ಲ. ಬೆರಳೆಣಿಕೆಯಷ್ಟು ಮಂದಿ ಕಾರ್ಮಿಕರು ಮಾತ್ರ ಸಾರ್ವಜನಿಕ ಆಸ್ಪತ್ರೆ ದುರಸ್ತಿ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು ಕಾಮಗಾರಿ  ವಳಂಬಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಇದನ್ನೂ ಓದಿ:ಹೊಸ ಪಕ್ಷಿಗಳಿರುವ ಜಾಗದಲ್ಲಿ ಮತ್ತಷ್ಟು ಸಮೀಕ್ಷೆ

ಟೆಂಡರ್‌ ನಿಯಮದಂತೆ ಕಾಮಗಾರಿ ಪೂರ್ಣ ಗೊಳ್ಳಬೇಕಾದ ಅವಧಿ ಮುಗಿದು 8-9ತಿಂಗಳು ಗಳೇ ಕಳೆದಿವೆ. ಮತ್ತೆ ಟೆಂಡರ್‌ ಅವಧಿ ವಿಸ್ತರಿಸಿ ಕೊಂಡು ಆಮೆವೇಗದ ಕಾಮಗಾರಿ ನಡೆಸಲಾಗು ತ್ತಿದೆ. ಸಂಬಂಧ ಪಟ್ಟ ಮೇಲಧಿಕಾರಿಗಳು ಸ್ಥಳೀಯ ಶಾಸಕರು ಕೂಡಲೇ ಇತ್ತ ಗಮನ ಹರಿಸಿ ಸಾರ್ವ ಜನಿಕ ಆಸ್ಪತ್ರೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಬೇಕಿದೆ.  ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಹುತೇಕ ಮಂದಿ ಬಡಜನರೇ ಆಗಿದ್ದಾರೆ. ಆಸ್ಪತ್ರೆ ದುರಸ್ತಿ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್‌. ಪಳನಿಸ್ವಾಮಿ ಸೇರಿದಂತೆ ಮತ್ತಿತರರು ಆಗ್ರಹಿಸಿದ್ದಾರೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.