ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 3 ವರ್ಷ ಜೈಲು
Team Udayavani, Feb 22, 2024, 11:25 PM IST
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆ, ಯುವಕನೋರ್ವನಿಗೆ ನಗರದ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಾಲೂಕಿನ ಉಮ್ಮತ್ತೂರು ಗ್ರಾಮದ ಪ್ರದೀಪ್ (21) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿ ಬೇಡವೆಂದರೂ ಮದುವೆ ಆಗುವುದಾಗಿ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದ. 2021 ರಲ್ಲಿ ಪ್ರಕರಣ ನಡೆದಿತ್ತು.
ಈ ಹಿಂದೆ 2019ರಲ್ಲಿ ಈತ ನೊಂದ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದ.ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿದ್ದ. ಮತ್ತೆ ಆತ ಅದೇ ತಪ್ಪನ್ನು ಪುನರಾವರ್ತನೆ ಮಾಡಿರುವುದು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳು, ತನಿಖೆಗಳಿಂದ ದೃಢಪಟ್ಟಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಧೀಶರಾದ ಎನ್ ಆರ್.ಲೋಕಪ್ಪ ಅವರು, ಆರೋಪವು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು, ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ.ಗಳನ್ನು 30 ದಿನಗಳೊಳಗೆ ನೊಂದ ಬಾಲಕಿಗೆ ನೀಡಬೇಕೆಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ಕೆ.ಯೋಗೇಶ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.