ಅಣಬೆ ಕೃಷಿಗೆ ಸ್ತ್ರೀಶಕ್ತಿ ಸಂಘಗಳಿಗೆ ನೆರವು

Team Udayavani, Feb 6, 2019, 7:28 AM IST

anabe.jpg

ಕೊಳ್ಳೇಗಾಲ: ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಅಣಬೆ ಬೇಸಾಯ ಕೈಗೊಳ್ಳಲು ರಾಜ್ಯ ಸರ್ಕಾರ 130 ಕೋಟಿ ರೂ.ವ್ಯಯಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಹರೀಶ್‌ಕುಮಾರ್‌ ಸಲಹೆ ನೀಡಿದರು.

ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಶ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆ ಪಂಕಜ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಸಂಜೀವಿನಿ ಅಣಬೆ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಿದ ಅವರು, ಮಹಿಳೆಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಣಬೆ ಬೇಸಾಯವನ್ನು ಮತ್ತಷ್ಟು ವೃದ್ಧಿಗೊಳಿಸಬೇಕು ಎಂದು ತಿಳಿಸಿದರು.

ಸಾಲ ಸೌಲಭ್ಯ: ಅಣಬೆಗೆ ಸಾಕಷ್ಟು ಬೇಡಿಕೆ ಯಿದ್ದು, ರಾಜ್ಯ ಸರ್ಕಾರ ಸ್ವಸಹಾಯ ಸಂಘಗಳಿಗೆ ಸುಮಾರು 23 ಲಕ್ಷ ರೂ. ನೀಡಿದೆ. ಸ್ವಸಹಾಯ ಸಂಘದ ಮಹಿಳೆ ಯರು ಸರ್ಕಾರದ ಹಣದಿಂದ ಅಣಬೆ ಘಟಕ ನಿರ್ಮಿಸಿಕೊಂಡು ಉತ್ತಮ ಬೇಸಾಯ ಮಾಡುತ್ತಿದ್ದು, ಇದನ್ನು ಜಿಲ್ಲಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾರುಕಟ್ಟೆ: ಮಹಿಳೆಯರು ಅಣಬೆ ಬೇಸಾಯ ಮಾಡುವುದರಿಂದ ಮಾರುಕಟ್ಟೆ ಯಲ್ಲಿ ಉತ್ತಮ ಬೆಲೆಗೆ ಮಾರಾಟ ಮಾಡಿ ಹೆಚ್ಚು ಹಣ ಗಳಿಸುವುದರಿಂದ ಆರ್ಥಿಕ ವಾಗಿ ಬಲವರ್ಧನೆಯಾಗುತ್ತಾರೆ. ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಗ್ರಾಮದ ಮಂಜುಳಾ ಅಣಬೆ ಬೇಸಾಯ ಮಾಡಿ ಮಾದರಿಯಾಗಿದ್ದು, ಎಲ್ಲಾ ಸ್ವಸಹಾಯ ಸಂಘದ ಮಹಿಳೆಯರು ಮುಂದೆ ಬಂದು ಅಣಬೆ ಬೇಸಾಯ ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಿವಿಮಾತು ಹೇಳಿದರು.

ಸಹಕಾರ, ಮಾಹಿತಿ: ಸರ್ಕಾರ ನಿರಂತರ ಸಹಕಾರ ನೀಡುತ್ತದೆ. ಬೇಸಾಯ ಮಾಡಲು ಮುಂದೆ ಬರುವ ಮಹಿಳೆಯರಿಗೆ ತರಬೇತಿ ಯನ್ನೂ ನೀಡಲಾಗುವುದು. ಅವರು ಬೆಳೆದ ಅಣಬೆಯನ್ನು ಖರೀದಿಸಲು ಮಾರು ಕಟ್ಟೆಯ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗು ವುದು. ಇದಕ್ಕೆ ಸ್ವಸಹಾಯ ಸಂಘದ ಮಹಿಳೆಯರು ಮತ್ತು ಎನ್‌ಜಿಒಗಳು ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದು, ಇದೊಂದು ಹೊಸ ಪ್ರಯತ್ನ ವಾಗಿದೆ. ಗ್ರಾಮಸ್ಥರು ಇದರ ಬಗ್ಗೆ ಹೆಚ್ಚು ಮಾಹಿತಿ ಪಡೆದು ಕೊಂಡು, ಅಣಬೆ ಬೇಸಾಯಕ್ಕೆ ಮುಂದಾಗ ಬೇಕೆಂದರು.

ಸರ್ಕಾರ ಸ್ವಸಹಾಯ ಸಂಘಗಳಿಗೆ ನೀಡುವ ಸಾಲ ಸೌಲಭ್ಯದ ಮಾದರಿಯಲ್ಲೇ ಅಣಬೆ ಬೇಸಾಯಕ್ಕೆ ಸಾಲ ಮಂಜೂರು ಮಾಡಲಾಗಿದ್ದು, ಪ್ರತಿವಾರ ಸ್ವಸಹಾಯ ಸಂಘಗಳಿಗೆ ಕಟ್ಟುವ ರೀತಿಯಲ್ಲೇ ಸಾಲವನ್ನು ಪಾವತಿಸಲು ಅವಕಾಶವಿರುತ್ತದೆ. ಇದರ ಬಗ್ಗೆ ಸೂಕ್ತ ಅರಿವು ಮೂಡಿಸುವ ಸಲುವಾಗಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಸ್ವಸಹಾಯ ಸಂಘದ ಮಹಿಳೆಯರಿಗೆ ಮಾಹಿತಿ ನೀಡುವು ದಾಗಿ ಹೇಳಿದರು.

ಭೇಟಿಯ ಸಂದರ್ಭದಲ್ಲಿ ಜಿಪಂ ಸಹಾಯಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹನುಮರಾಯಪ್ಪ, ಸಿದ್ದಯ್ಯನ ಪುರ ಗ್ರಾಪಂ ಅಧ್ಯಕ್ಷೆ ಶಶಿಕುಮಾರಿ, ಇಒ ಉಮೇಶ್‌, ವ್ಯವಸ್ಥಾಪಕ ಶಂಕರ್‌, ಯೋಜನಾಧಿಕಾರಿ ಲಿಂಗರಾಜು, ಸಿದ್ದಯ್ಯನಪುರ ಗ್ರಾಪಂ ಪಿಡಿಒ ಸೌಭಾಗ್ಯ ಮತ್ತು ವಿವಿಧ ಎನ್‌ಜಿಒಗಳು, ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.