ಗಮನ ಸೆಳೆದ ಮಿಂಚಿನ ನೋಂದಣಿ ಜಾಗೃತಿ ಜಾಥಾ

Team Udayavani, Jan 8, 2020, 1:03 PM IST

cn-tdy-2

ಚಾಮರಾಜನಗರ: ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಿಂಚಿನ ನೋಂದಣಿ ಜಾಗೃತಿಗಾಗಿ ನಗರದಲ್ಲಿ ವಿದ್ಯಾರ್ಥಿಗಳು ನಡೆಸಿದ ಜಾಗೃತಿ ಜಾಥಾ ಗಮನ ಸಳೆಯಿತು. ಜಿಲ್ಲಾ ಸ್ವೀಪ್‌ ಸಮಿತಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಂಚಿನ ನೋಂದಣಿ ಅರಿವು ಜಾಥಾಕ್ಕೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಚಾಲನೆ ನೀಡಿದರು.

ಮೂರು ದಿನಗಳ ಕಾಲ ಜಾಥಾ: ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಮತದಾನದ ಹಕ್ಕು ಎಷ್ಟು ಮಹತ್ವ ಎಂದು ಪ್ರತಿ ಬಿಂಬಿಸುವ ನಿಟ್ಟಿನಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. 2020 ಜ.1ಕ್ಕೆ ಅನ್ವಯವಾಗುವಂತೆ 18 ವರ್ಷ ಪೂರೈಸಿದ ಪ್ರತಿಯೊಬ್ಬರು ಸಹ ಹೆಸರನ್ನು ನೋಂದವಣೆ ಮಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸುವ ಮೂರು ದಿನದ ಜಾಥಾ ಇದಾಗಿದೆ ಎಂದು ತಿಳಿಸಿದರು. 18 ವರ್ಷ ತುಂಬಿದ ಕೆಲವರು ಮತದಾರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳದೆ ಇರಬಹುದು. ಅವರಿಗೆ ಮತ್ತು ಮತದಾರ ಪಟ್ಟಿಯಲ್ಲಿ ಹೆಸರು ಬಿಟ್ಟಿರುವವರಿಗೂ ಸಹ ಹೆಸರು ಸೇರಿಸುವುದಕ್ಕೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದರು.

ಹೆಸರು ನೋಂದಾಣಿಗೆ ಜ.15 ಕಡೆ ದಿನ: ಯಾವುದೇ ಅಭ್ಯರ್ಥಿಯನ್ನು ಚುನಾವಣೆ ಮೂಲಕ ಯಾವುದೇ ನಿಷ್ಪಕ್ಷಪಾತವಿಲ್ಲದೆ ಆಯ್ಕೆ ಮಾಡುವಂತಹ ಜವಾಬ್ದಾರಿಯುತ ಕೆಲಸ ಮತದಾರದಾಗಿದೆ. ನಮೂನೆ 6 ಭರ್ತಿಮಾಡಿ ಕೊಟ್ಟಲ್ಲಿ ಮತದಾರಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳ ಬಹುದಾಗಿದೆ. ಹೆಸರು ನೋಂದಾಯಿಸಿಕೊಳ್ಳಲು ಜನವರಿ 15 ಕಡೆಯ ದಿನವಾಗಿದೆ ಎಂದು ತಿಳಿಸಿದರು. ಮತದಾನವು ಸಮಾನತೆಯ ಪ್ರತೀಕವಾಗಿದ್ದು, ಯಾವುದೇ ಜಾತಿ-ಧರ್ಮ,ಭೇದ-ಭಾವಗಳಿಲ್ಲದೆ ಕೂಡಿದೆ. ಸಂವಿಧಾನಕ್ಕೆ ಚ್ಯುತಿಯಾಗದ ಹಾಗೇ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಜಾಗೃತಿ ಮೂಡಿಸಲು ವಿದ್ಯಾರ್ಥಿಗಳು ಸಹಕರಿಸಿ: ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎಚ್‌. ನಾರಾಯಣ್‌ರಾವ್‌ ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನವು ಬಹಳ ಜವಾಬ್ದಾರಿಯುತ ಕಾರ್ಯವಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ಹೆಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.