ಬಾಲ ಕಾರ್ಮಿಕರು ಕಂಡು ಬಂದರೆ ಇಲಾಖೆಗೆ ತಿಳಿಸಿ
ಮಕ್ಕಳನ್ನು ದುಡಿಸುವುದು ಕಾನೂನಿಗೆ ವಿರುದ್ಧ: ವಿಶಾಲಾಕ್ಷಿ
Team Udayavani, Nov 21, 2020, 2:50 PM IST
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ಬಾಲ್ಯಕಾರ್ಮಿಕ ಅರಿವು ಕಾರ್ಯಕ್ರಮದಲ್ಲಿಕಾನೂನು ಸೇವಾ ಪ್ರಾಧಿಕಾರಗಳ ಸದಸ್ಯಕಾರ್ಯದರ್ಶಿ ವಿಶಾಲಾಕ್ಷಿ ಪೋಸ್ಟರ್ ಹಚ್ಚಿದರು.
ಚಾಮರಾಜನಗರ: ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪೋಷಕರು ಹಾಗೂ ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ತಿಳಿವಳಿಕೆ ಮೂಡಿಸಬೇಕು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಸಲಹೆ ನೀಡಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಕಲ್ಯಾಣ ಸಮಿತಿ, ಒಡಿಪಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ 1098ರ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಮೈತ್ರಿ ಸಪ್ತಾಹದ ಪ್ರಯುಕ್ತ ಕೋವಿಡ್-19 ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಹಾಗೂ ಬಾಲ ಕಾರ್ಮಿಕ ಬಗ್ಗೆ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕಾದರೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಪೋಷಕರಿಗೆ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸ ಬೇಕು. ಬಾಲ ಕಾರ್ಮಿಕ ಪದ್ಧತಿ ಜಿಲ್ಲೆಯ ಯಾವುದೇ ಸ್ಥಳದಲ್ಲಿ ನಡೆದರೂ ಸಾರ್ವಜನಿಕರು ಕಾರ್ಮಿಕ ಇಲಾಖೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.
ಬಾಲ್ಯ ಒಂದು ಅಮೂಲ್ಯವಾಗಿದ್ದು, ಅದೊಂದು ಸಿಹಿಯಾದ ನೆನಪು. ಮಕ್ಕಳುತಮ್ಮ ವಯಸ್ಸಿನಲ್ಲಿ ಆಟವಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಉತ್ತಮವಾದ ವಾತಾವರಣದಲ್ಲಿ ಬೆಳೆಯಬೇಕು.ಬಡತನಕ್ಕೊ ಅಥವಾ ಇತರ ಕಾರಣಗಳಿಗೊ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ದೂಡುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಎಚ್ಚರಿಸಿದರು.
ಪೋಷಕರು ಮಕ್ಕಳ ಬಾಲ್ಯವಸ್ಥೆಯಲ್ಲಿ ಅವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಯನ್ನಾಗಿಸಬೇಕು. ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ವಿಶಾಲಾಕ್ಷಿ ತಿಳಿಸಿದರು. ಭುವನೇಶ್ವರಿ ವೃತ್ತದಲ್ಲಿರುವ ಬೇಕರಿಗಳು, ಅಂಗಡಿ ಮುಂಗಟ್ಟುಗಳಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಸ್ಟಿಕ್ಕರ್‌ಗಳನ್ನು ಅಂಟಿಸಿ, ಕರಪತ್ರಗಳನ್ನು ಅನಾವರಣಗೊಳಿಸಲಾಯಿತು.
ಕಾರ್ಮಿಕ ಇಲಾಖೆ ಹಿರಿಯ ನಿರೀಕ್ಷಕಿ ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ,ಮಕ್ಕಳ ವಿಶೇಷ ಪೊಲೀಸ್ ಘಟಕ ಹಿರಿಯ ನಿರೀಕ್ಷಕ ಮಹದೇವಶೆಟ್ಟಿ, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಮಹೇಶ್, ಮಕ್ಕಳ ಸಹಾಯವಾಣಿ ಘಟಕದ ಲತಾ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.