ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿ; ಜಿಲ್ಲಾಧಿಕಾರಿ
ಅವರ ಹೋರಾಟದ ಆದರ್ಶ ಗುಣಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು
Team Udayavani, Jul 7, 2022, 6:03 PM IST
ಚಾಮರಾಜನಗರ: ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್‌ರಾಮ್ ಅವರ ಕೊಡುಗೆಯನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರನಾಯಕ, ಮಾಜಿ ಉಪಪ್ರಧಾನಿ, ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 36ನೇ ಪುಣ್ಯಸ್ಮರಣೆಯಲ್ಲಿ ಕಾರ್ಯಕ್ರಮದ ದೀಪ ಬೆಳಗಿಸಿ, ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ದೇಶದ ಪ್ರಬುದ್ಧ ರಾಜಕಾರಣಿಯಾಗಿದ್ದ ಬಾಬೂಜಿಯವರು ಕಾನೂನು, ಆಹಾರ, ಕಾರ್ಮಿಕ ಇಲಾಖೆಗಳೂ ಸೇರಿದಂತೆ ವಿವಿಧ ಖಾತೆಗಳನ್ನು ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಸಮರ್ಪಕವಾಗಿ ನಿಭಾಯಿಸಿ ದೇಶದ ಶೋಷಿತ ವರ್ಗದವರಿಗೆ ದನಿಯಾಗಿದ್ದವರು. ಶೋಷಿತರ ದೀನ ದಲಿತರ ಕಲ್ಯಾಣಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ ಬಾಬು ಜಗಜೀವನ್‌ರಾಮ್ ಅವರ ಹೋರಾಟದ ಆದರ್ಶ ಗುಣಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗುಡೂರು ಭೀಮಸೇನ್, ಮುಖಂಡರಾದ ಅರಕಲವಾಡಿ ನಾಗೇಂದ್ರ, ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಪಟ್ಟಣ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ತಿಮ್ಮರಾಜು, ಮುಖಂಡರಾದ ಬಸವನಪುರ ರಾಜಶೇಖರ್, ಆಲೂರು ಮಲ್ಲು, ಚಾ.ಗು. ನಾಗರಾಜು, ಶ್ರೀಕಂಠ, ಎಂ. ಶಿವಕುಮಾರ್, ರಾಚಯ್ಯ, ಕರಿಯಪ್ಪ, ಗಿರಿ, ಡ್ಯಾನ್ಸ್ ಬಸವರಾಜು, ವೆಲ್ಡಿಂಗ್ ನಿಂಗರಾಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.