ಸಮ ಸಮಾಜಕ್ಕೆ ಶ್ರಮಿಸಿದ ಮಾನವತಾವಾದಿ ಬಸವಣ್ಣ


Team Udayavani, May 4, 2022, 2:19 PM IST

Untitled-1

ಚಾಮರಾಜನಗರ: ಸಾಮಾಜಿಕ ತಾರತಮ್ಯ, ಜಾತೀಯತೆ ಹೋಗಲಾಡಿಸಿ, ಸಮ ಸಮಾಜ ನಿರ್ಮಾಣದ ಮೂಲಕ ಇಡೀ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್‌ ಮಾನವತಾ ವಾದಿ ಬಸವಣ್ಣನವರು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.

ಮಂಗಳವಾರ, ನಗರದ ಪೇಟೆ ಪ್ರçಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾನ್‌ ಮಾನವತಾವಾದಿ, ಸಮಾಜ ಸುಧಾರಕರಾದ ಜಗ ಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಯಕವೇ ಕೈಲಾಸದಡಿ ಪ್ರತಿಯೊಬ್ಬರು ತಾವು ಮಾಡುವ ಕೆಲಸ-ಕಾರ್ಯದಲ್ಲಿ ದೇವ ರನ್ನು ಕಾಣ ಬೇಕೆಂದ ಬಸವಣ್ಣನವರ ಆದರ್ಶ ತತ್ವ ಸಿದ್ಧಾಂತ ಗಳನ್ನು ದಿನನಿತ್ಯದ ಕಾಯಕದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ನುಡಿ ದಂತೆ ನಡೆದ ಬಸವಣ್ಣನವರ ಕಾಲದಲ್ಲಿ ಹೇಳು ವವರು, ಕೇಳು ವವರು ಇಬ್ಬರೂ ಪ್ರಾಮಾ ಣಿಕರಾಗಿದ್ದರು. ಪರಿಸ್ಥಿತಿ ಬದಲಾಗಿರುವುದು ಈಗಿನ ದುರಂತವಾಗಿದೆ ಎಂದರು.

ಕಾರ್ಯ ಕ್ರಮದಲ್ಲಿ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ನೀಡಿರುವ ಸಂದೇಶವನ್ನು ವಾಚನ ಮಾಡಲಾಯಿತು. ಕನ್ನಡನಾಡಿನ ಮಹಾನ್‌ ಕ್ರಾಂತಿಯ ಮೂಲ ಪುರುಷ ಬಸವಣ್ಣ ಕರ್ನಾಟಕದ ಪುಣ್ಯಭೂಮಿ ಕಂಡ ಶ್ರೇಷ್ಠ ಮಾನವತಾವಾದಿ. ಎಲ್ಲರನ್ನೊಳ ಗೊಳ್ಳುವ ಮಾನವ ತತ್ವವವನ್ನು ಅನುಸರಿಸುವ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಯುಗಪುರುಷ. ಸುಮಾರು 800 ವರ್ಷಗಳ ಹಿಂದೆಯೇ ಸಮ ಸಮಾಜವನ್ನು ನಿರ್ಮಿಸುವ ಪಣತೊಟ್ಟು ಕ್ರಾಂತಿ ಮೊಳಗಿಸಿದ ಬಸವಣ್ಣನವರ ದಾರ್ಶನಿಕತ್ವದ ಅಡಿಪಾಯವೇ ಕಾಯಕತತ್ವ ಆಗಿದೆ. ಕಾಯಕವೇ ಕೈಲಾಸ ಎಂದು ಹೇಳುವ ಮೂಲಕ ಕಾಯಕಕ್ಕೆ ಕೈಲಾಸದ ಪಟ್ಟಕಟ್ಟಿ ಅದ ಕ್ಕೊಂದು ದೈವಿಕ ಸ್ಪರ್ಶ ನೀಡಿದವರು ವಿಶ್ವಗುರು ಬಸವಣ್ಣ ಎಂದು ಉಸ್ತುವಾರಿ ಸಚಿವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ನಗರಸಭಾ ಅಧ್ಯಕ್ಷೆ ಆಶಾನಟರಾಜು, ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠ ಧ್ಯಾಕ್ಷರಾದ ಚನ್ನಬಸವಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಬಸವತತ್ವ ಪ್ರಚಾರಕ ಎಲ್‌. ಬಸಪ್ಪ ಬೊಮ್ಮಲಾ ಪುರ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌. ಸುಂದ ರರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಪ್ಪ ಇತರರು ಕಾರ್ಯಕ್ರಮದಲ್ಲಿ ಇದ್ದರು

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.